AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕಿದ್ದೇ ಚಾನ್ಸ್ ಅಂತ ಕಂಡ ಕಂಡಲ್ಲಿ ಮುಟ್ಟಿದ್ರು; ಮಾಲ್​​ನಲ್ಲಿ ನಟಿಗೆ ಕಿರುಕುಳ

ನಟಿ ನಿಧಿ ಅಗರ್​ವಾಲ್ ಹೈದರಾಬಾದ್​ನ ಲೂಲು ಮಾಲ್​ನಲ್ಲಿ ನಡೆದ 'ರಾಜಾಸಾಬ್' ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಕಿರುಕುಳ ಅನುಭವಿಸಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಮುತ್ತಿಕೊಂಡಾಗ, ಕೆಲ ಕಿಡಿಗೇಡಿಗಳು ಅನುಚಿತವಾಗಿ ವರ್ತಿಸಿ ದೇಹವನ್ನು ಮುಟ್ಟಲು ಪ್ರಯತ್ನಿಸಿದ್ದಾರೆ. ಇದರಿಂದ ಮುಜುಗರಕ್ಕೊಳಗಾದ ನಿಧಿ ನಿಟ್ಟುಸಿರು ಬಿಟ್ಟಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸಿಕ್ಕಿದ್ದೇ ಚಾನ್ಸ್ ಅಂತ ಕಂಡ ಕಂಡಲ್ಲಿ ಮುಟ್ಟಿದ್ರು; ಮಾಲ್​​ನಲ್ಲಿ ನಟಿಗೆ ಕಿರುಕುಳ
ನಿಧಿ
ರಾಜೇಶ್ ದುಗ್ಗುಮನೆ
|

Updated on:Dec 18, 2025 | 2:27 PM

Share

ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಎಲ್ಲರೂ ಸೆಲ್ಫಿಗೆ ಮುಗಿ ಬೀಳುತ್ತಾರೆ. ಆದರೆ, ಕೆಲವೊಮ್ಮೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾಗ ಅಲ್ಲಿ ಬೇರೆಯದೇ ರೀತಿಯ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಸಿಕ್ಕಿದ್ದೇ ಚಾನ್ಸ್ ಎಂದು ಕಂಡ ಕಂಡಲ್ಲಿ ಮುಟ್ಟುವ ಕಿಡಿಗೇಡಿಗಳೂ ಇದ್ದಾರೆ. ಈಗ ತೆಲುಗು ನಟಿ ನಿಧಿ ಅಗರ್​ವಾಲ್ (Nidhi Agerwal) ಅವರಿಗೂ ಇದೇ ರೀತಿಯ ಅನುಭವ ಆಗಿದೆ. ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಚರ್ಚೆ ಹುಟ್ಟುಹಾಕಿದೆ.

ನಿಧಿ ಅವರು ಹುಟ್ಟಿದ್ದು ಆಂಧ್ರದಲ್ಲಿ. ಅವರು ತಮ್ಮ ಶಿಕ್ಷಣವನ್ನು ಬೆಂಗಳೂರಿನಲ್ಲಿ ಮಾಡಿದ್ದಾರೆ. ಹೀಗಾಗಿ, ಅವರಿಗೆ ಕರ್ನಾಟಕದ ಲಿಂಕ್ ಇದೆ. 2017ರಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ‘ಇಸ್ಮಾರ್ಟ್ ಶಂಕರ್’ ಚಿತ್ರದ ಮೂಲಕ ಅವರು ಜನಪ್ರಿಯತೆ ಪಡೆದರು. ಈಗ ಪ್ರಭಾಸ್ ನಟನೆಯ ‘ರಾಜಾಸಾಬ್’ ಸಿನಿಮಾಗೆ ನಾಯಕಿ ಆಗಿದ್ದಾರೆ. ಈ ಚಿತ್ರದ ಈವೆಂಟ್​​ನಲ್ಲಿ ಅವರು ತೊಂದರೆ ಅನುಭವಿಸಿದ್ದಾರೆ.

ಇದನ್ನೂ ಓದಿ: ಪವನ್​ ಕಲ್ಯಾಣ್​ ಜತೆಗಿನ ಮೊದಲ ಶಾಟ್​ ನೆನೆದು ಖುಷಿಪಟ್ಟ ನಿಧಿ ಅಗರ್​ವಾಲ್​

‘ರಾಜಾಸಾಬ್’ ಚಿತ್ರದ ಪ್ರಮೋಷನ್ ಈವೆಂಟ್ ಹೈದರಾಬಾದ್​ನ ಲೂಲು ಮಾಲ್​​ನಲ್ಲಿ ನಡೆದಿದೆ. ಈ ವೇಳೆ ಸಿನಿಮಾದ ನಿರ್ದೇಶಕ ಮಾರುತಿ ಹಾಗೂ ನಟಿ ನಿಧಿ ಭಾಗಿ ಆಗಿದ್ದರು. ಊಹಿಸಿದ್ದಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಅವರು ಈವೆಂಟ್ ಮುಗಿಸಿ ಬರುವಾಗ ಎಲ್ಲರೂ ಅವರನ್ನು ಮುತ್ತಿಕೊಂಡಿದ್ದಾರೆ. ಅವರ ದೇಹವನ್ನು ಟಚ್ ಮಾಡಲು ಕೆಲವರು ಪ್ರಯತ್ನಿಸಿದ್ದಾರೆ. ಇದರಿಂದ ಅವರಿಗೆ ಮುಜುಗರ ಆಗಿದೆ. ನಿಧಿಗೆ ಇದು ಕಿರುಕುಳದಂತೆ ಕಾಣಿಸಿದೆ.

ಬೌನ್ಸರ್​​ಗಳು ಶ್ರಮ ಹಾಕಿದರೂ ಜನರು ಮುತ್ತಿಕೊಳ್ಳೋದನ್ನು ತಡೆಯಲು ಸಾಧ್ಯವಾಗಲೇ ಇಲ್ಲ. ಕೊನೆಗೂ ಅವರು ಕಾರನ್ನು ಏರಿದ್ದಾರೆ. ಈ ವೇಳೆ ಅವರ ಡ್ರೆಸ್​ ಪರಿಸ್ಥಿತಿ ಕೂಡ ಹದಗೆಟ್ಟಿತ್ತು. ಕಾರಿನಲ್ಲಿ ಬಂದು ಕುಳಿತ ಬಳಿಕ ಅವರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಸಂದರ್ಭದ ವಿಡಿಯೋನ ವೈರಲ್ ಮಾಡಲಾಗುತ್ತಿದೆ. ನಟಿಯ ಜೊತೆ ಅಲ್ಲಿ ನೆರೆದಿದ್ದವರು ನಡೆದುಕೊಂಡಿದ್ದು ಸರಿ ಅಲ್ಲ ಎಂದಿದ್ದಾರೆ. ಇನ್ನೂ ಕೆಲವರು ನಿಜವಾದ ಅಭಿಮಾನಿಗಳು ಈ ರೀತಿ ಮಾಡೋದಿಲ್ಲ ಎನ್ನುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:23 pm, Thu, 18 December 25

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ