AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Niharika Konidela: ‘ಪುಷ್ಪ 2’ ಚಿತ್ರದಲ್ಲಿ ನಿಹಾರಿಕಾ ಕೊನಿಡೆಲಾ? ಡಿವೋರ್ಸ್​ ಗುಮಾನಿ ಬೆನ್ನಲ್ಲೇ ಮತ್ತೊಂದು ಗುಸುಗುಸು

Pushpa 2: ನಟಿ ಸಾಯಿ ಪಲ್ಲವಿ ಅವರು ‘ಪುಷ್ಪ 2’ ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈಗ ಆ ಪಾತ್ರ ನಿಹಾರಿಕಾ ಕೊನಿಡೆಲಾ ಪಾಲಾಗಿದೆ ಎನ್ನಲಾಗುತ್ತಿದೆ.

Niharika Konidela: ‘ಪುಷ್ಪ 2’ ಚಿತ್ರದಲ್ಲಿ ನಿಹಾರಿಕಾ ಕೊನಿಡೆಲಾ? ಡಿವೋರ್ಸ್​ ಗುಮಾನಿ ಬೆನ್ನಲ್ಲೇ ಮತ್ತೊಂದು ಗುಸುಗುಸು
ನಿಹಾರಿಕಾ ಕೊನಿಡೆಲಾ, ಅಲ್ಲು ಅರ್ಜುನ್
ಮದನ್​ ಕುಮಾರ್​
|

Updated on: May 07, 2023 | 3:55 PM

Share

ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಅಭಿನಯದ ‘ಪುಷ್ಪ 2’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಮೊದಲ ಪಾರ್ಟ್​ ಸೂಪರ್​ ಹಿಟ್​ ಆಗಿದ್ದರಿಂದ ಎರಡನೇ ಪಾರ್ಟ್​ ಬಗ್ಗೆ ಕೌತುಕ ಜಾಸ್ತಿ ಆಗಿದೆ. ಈ ಸಿನಿಮಾದ ಪಾತ್ರವರ್ಗ ಕೂಡ ಗಮನ ಸೆಳೆಯುತ್ತಿದೆ. ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ಮಂದಣ್ಣ, ಫಹಾದ್​ ಫಾಸಿಲ್, ಡಾಲಿ ಧನಂಜಯ್​ ಮುಂತಾದವರು ನಟಿಸುತ್ತಿದ್ದಾರೆ. ಈಗ ಈ ಸಿನಿಮಾದ ಪಾತ್ರವರ್ಗಕ್ಕೆ ‘ಮೆಗಾ ಸ್ಟಾರ್​’ ಚಿರಂಜೀವಿ ಕುಟುಂಬದ ನಟಿ ನಿಹಾರಿಕಾ ಕೊನಿಡೆಲಾ (Niharika Konidela) ಅವರು ಸೇರ್ಪಡೆ ಆಗುತ್ತಿದ್ದಾರೆ ಎನ್ನಲಾಗುತ್ತಿದೆ. ನಿಹಾರಿಕಾ ಸಂಸಾರದಲ್ಲಿ ಬಿರುಕು ಮೂಡಿದೆ ಎಂದು ಇತ್ತೀಚೆಗೆ ಸುದ್ದಿ ಹಬ್ಬಿತ್ತು. ಅದರ ಬೆನ್ನಲ್ಲೇ ‘ಪುಷ್ಪ 2’ (Pushpa 2) ಚಿತ್ರಕ್ಕೆ ಸಂಬಂಧಿಸಿದ ಗಾಸಿಪ್​ ಹರಡಿದೆ. ಈ ಬಗ್ಗೆ ಚಿತ್ರತಂಡದಿಂದ ಸ್ಪಷ್ಟನೆ ಸಿಗುವುದು ಬಾಕಿ ಇದೆ. ಈ ಸಿನಿಮಾಗೆ ಸುಕುಮಾರ್​ ಅವರು ನಿರ್ದೇಶನ ಮಾಡುತ್ತಿದ್ದಾರೆ.

‘ಪುಷ್ಪ 2’ ಸಿನಿಮಾದಲ್ಲಿ ಫಹಾದ್​ ಫಾಸಿಲ್​ ಅವರು ಮುಖ್ಯವಾದೊಂದು ಪಾತ್ರ ಮಾಡುತ್ತಿದ್ದಾರೆ. ಅವರ ಪತ್ನಿಯ ಪಾತ್ರಕ್ಕೆ ಸಾಯಿ ಪಲ್ಲವಿ ಬಣ್ಣ ಹಚ್ಚುತ್ತಾರೆ ಎಂದು ಈ ಮೊದಲು ಗಾಸಿಪ್​ ಹಬ್ಬಿತ್ತು. ಆದರೆ ಆ ಪಾತ್ರ ಮಾಡಲು ಸಾಯಿ ಪಲ್ಲವಿ ಅವರು ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಈಗ ಅದೇ ಪಾತ್ರವನ್ನು ನಿಹಾರಿಕಾ ಕೊನಿಡೆಲಾ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಡಿವೋರ್ಸ್​ವರೆಗೆ ಬಂದು ನಿಂತ ನಿಹಾರಿಕಾ ಪ್ರೇಮ ವಿವಾಹ; ಹೊಸ ಸಾಕ್ಷಿ ತಂದ ಫ್ಯಾನ್ಸ್

ಇದನ್ನೂ ಓದಿ
Image
‘ನನ್ನ ಪುಷ್ಪರಾಜ್​​ಗೆ ಹುಟ್ಟುಹಬ್ಬದ ಶುಭಾಶಯ’; ಅಲ್ಲು ಅರ್ಜುನ್​ಗೆ ಶುಭಾಶಯ ತಿಳಿಸಿದ ರಶ್ಮಿಕಾ ಮಂದಣ್ಣ
Image
Pushpa 2: ಕಥಾನಾಯಕನೇ ನಾಪತ್ತೆ; ಎಲ್ಲಿದ್ದಾನೆ ಪುಷ್ಪರಾಜ್​? ಅಲ್ಲು ಅರ್ಜುನ್​ ಜನ್ಮದಿನಕ್ಕೂ ಮುನ್ನ ದೊಡ್ಡ ಟ್ವಿಸ್ಟ್​
Image
Allu Arjun: ಚಿತ್ರರಂಗದಲ್ಲಿ 20 ವರ್ಷ ಪೂರೈಸಿದ ಅಲ್ಲು ಅರ್ಜುನ್​; ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಸ್ಟಾರ್​ ನಟ
Image
Sai Pallavi: ‘ಪುಷ್ಪ 2’ ಸಿನಿಮಾದಲ್ಲಿ ಸಾಯಿ ಪಲ್ಲವಿಗೆ ನೆಗೆಟಿವ್​ ಪಾತ್ರ? ಟಾಲಿವುಡ್​ ಅಂಗಳದಲ್ಲಿ ಗುಸುಗುಸು

ತೆಲುಗು ಚಿತ್ರರಂಗದಲ್ಲಿ ನಟಿಯಾಗಿ, ನಿರ್ಮಾಪಕಿಯಾಗಿ ನಿಹಾರಿಕಾ ಕೊನಿಡೆಲಾ ಅವರು ತೊಡಗಿಕೊಂಡಿದ್ದಾರೆ. ‘ಒಕ ಮನಸು’, ‘ಸೂರ್ಯಕಾಂತಂ’, ‘ಹ್ಯಾಪಿ ವೆಡ್ಡಿಂಗ್​’ ಮುಂತಾದ ಸಿನಿಮಾಗಳಲ್ಲಿ ಅವರ ನಟಿಸಿದ್ದಾರೆ. 2015ರಲ್ಲಿ ಅವರು ‘ಪಿಂಕ್​ ಎಲಿಫೆಂಟ್​ ಪಿಕ್ಚರ್ಸ್​’ ಎಂಬ ನಿರ್ಮಾಣ ಸಂಸ್ಥೆ ಆರಂಭಿಸಿದರು. ಇದರ ಹೊಸ ಕಚೇರಿಯನ್ನು ಅವರು ಇತ್ತೀಚೆಗೆ ತೆರೆದಿದ್ದಾರೆ. ನಟಿಯಾಗಿ ಅವರು ಕಮ್​ಬ್ಯಾಕ್​ ಮಾಡುತ್ತಾರೆ ಎಂದು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: Niharika Konidela: ರೇವ್​ ಪಾರ್ಟಿ ಮೇಲೆ ಪೊಲೀಸ್​ ದಾಳಿ; ಚಿರಂಜೀವಿ ಕುಟುಂಬದ ಮನೆ ಮಗಳು ನಿಹಾರಿಕಾ ಕೊನಿಡೆಲಾ ವಶಕ್ಕೆ​

ನಿಹಾರಿಕಾ ಕೊನಿಡೆಲಾ ಸಂಸಾರದಲ್ಲಿ ಬಿರುಕು:

‘ಮೆಗಾ ಸ್ಟಾರ್​’ ಚಿರಂಜೀವಿ ಸಹೋದರ ನಾಗೇಂದ್ರ ಬಾಬು ಅವರ ಪುತ್ರಿಯಾದ ನಿಹಾರಿಕಾ ಅವರು 2020ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಆದರೆ ಅವರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ. ಒಂದಷ್ಟು ದಿನಗಳ ಹಿಂದೆ ಪತಿ ಜೊನ್ನಲಗಡ್ಡ ವೆಂಕಟ ಚೈತನ್ಯ ಅವರ ಇನ್​ಸ್ಟಾಗ್ರಾಮ್​ ಖಾತೆಯನ್ನು ನಿಹಾರಿಕಾ ಅನ್​ಫಾಲೋ ಮಾಡಿದ್ದಾರೆ. ಅಷ್ಟೇ ಅಲ್ಲದೇ, ಗಂಡನಿಗೆ ಸಂಬಂಧಿಸಿದ ಎಲ್ಲ ಫೋಟೋಗಳನ್ನೂ ಡಿಲೀಟ್​ ಮಾಡಿದ್ದಾರೆ. ವೆಂಕಟ ಚೈತನ್ಯ ಅವರು ನಿಹಾರಿಕಾರನ್ನು ಅನ್​ಫಾಲೋ ಮಾಡಿ ಬಹಳ ದಿನ ಕಳೆದಿದೆ. ಮದುವೆ ಹಾಗೂ ಎಂಗೇಜ್​ಮೆಂಟ್​ ಫೋಟೋಗಳನ್ನೂ ಅವರು ಡಿಲೀಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್