Niharika Konidela: ವರುಣ್​ ತೇಜ್​-ಲಾವಣ್ಯ ತ್ರಿಪಾಠಿ ಮದುವೆ ಬಗ್ಗೆ ಕೇಳಿದ್ದಕ್ಕೆ ಮಾತು ಹಾರಿಸಿದ ನಿಹಾರಿಕಾ ಕೊನಿಡೆಲಾ

ನಿಹಾರಿಕಾ ಕೊನಿಡೆಲಾ ಅವರು ‘ಡೆಡ್​ ಪಿಕ್ಸೆಲ್ಸ್​’ ವೆಬ್​ ಸಿರೀಸ್​ನಲ್ಲಿ ನಟಿಸಿದ್ದಾರೆ. ಅದರ ಪ್ರಮೋಷನ್​ ವೇಳೆ ಅವರಿಗೆ ವರುಣ್​ ತೇಜ್​ರ ಮದುವೆ ಬಗ್ಗೆ ಪ್ರಶ್ನೆ ಎದುರಾಗಿದೆ.

Niharika Konidela: ವರುಣ್​ ತೇಜ್​-ಲಾವಣ್ಯ ತ್ರಿಪಾಠಿ ಮದುವೆ ಬಗ್ಗೆ ಕೇಳಿದ್ದಕ್ಕೆ ಮಾತು ಹಾರಿಸಿದ ನಿಹಾರಿಕಾ ಕೊನಿಡೆಲಾ
ನಿಹಾರಿಕಾ ಕೊನಿಡೆಲಾ
Follow us
ಮದನ್​ ಕುಮಾರ್​
|

Updated on: May 18, 2023 | 3:16 PM

ಟಾಲಿವುಡ್​ ಕಲಾವಿದರಾದ ವರುಣ್​ ತೇಜ್​ (Varun Tej) ಮತ್ತು ಲಾವಣ್ಯ ತ್ರಿಪಾಠಿ ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ ಎಂದು ಸುದ್ದಿ ಹಬ್ಬಿದೆ. ಆದರೆ ಈ ವಿಚಾರದ ಬಗ್ಗೆ ಅವರಿಬ್ಬರಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಕೆಲವು ದಿನಗಳಿಂದೀಚೆಗೆ ಈ ಗಾಸಿಪ್​ ಕೇಳಿಬರುತ್ತಿದೆ. ಅದಕ್ಕೆ ಈಗ ವರುಣ್​ ತೇಜ್​ ಅವರ ಸಹೋದರಿ ನಿಹಾರಿಕಾ ಕೊನಿಡೆಲಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹಾಗಂತ ಅವರು ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ. ತಮಗೆ ಕೇಳಲಾದ ಪ್ರಶ್ನೆಯನ್ನು ಅವರು ನಿರ್ಲಕ್ಷಿಸಿದ್ದಾರೆ. ಇದು ಗಾಸಿಪ್​ ಮಂದಿಯ ಅನುಮಾನವನ್ನು ಇನ್ನಷ್ಟು ಹೆಚ್ಚಿಸಿದೆ. ನಿಹಾರಿಕಾ ಕೊನಿಡೆಲಾ (Niharika Konidela) ಅವರು ‘ಡೆಡ್​ ಪಿಕ್ಸೆಲ್ಸ್​’ ವೆಬ್​ ಸಿರೀಸ್​ನಲ್ಲಿ ನಟಿಸಿದ್ದಾರೆ. ಅದರ ಪ್ರಮೋಷನ್​ ವೇಳೆ ಅವರಿಗೆ ವರುಣ್​ ತೇಜ್​ರ ಮದುವೆ ಬಗ್ಗೆ ಪ್ರಶ್ನೆ ಎದುರಾಗಿದೆ. ‘ಲಾವಣ್ಯ ತ್ರಿಪಾಠಿ (Lavanya Tripathi) ಮತ್ತು ವರುಣ್​ ತೇಜ್​ ಮದುವೆ ಬಗ್ಗೆ ಸುದ್ದಿ ಕೇಳಿಬರುತ್ತಿದೆಯಲ್ಲ?’ ಎಂದು ಕೇಳಿದ್ದಕ್ಕೆ ಉತ್ತರಿಸುವ ಬದಲು, ‘ಈಗ ಕೇವಲ ಡೆಡ್​ ಪಿಕ್ಸೆಲ್ಸ್​ ಬಗ್ಗೆ ಮಾತಾಡೋಣ’ ಎಂದು ಜಾರಿಕೊಂಡಿದ್ದಾರೆ ನಿಹಾರಿಕಾ ಕೊನಿಡೆಲಾ.

ನಟಿ ನಿಹಾರಿಕಾ ಕೊನಿಡೆಲಾ ಹಿನ್ನೆಲೆ:

ತೆಲುಗು ಚಿತ್ರರಂಗದಲ್ಲಿ ನಟಿಯಾಗಿ, ನಿರ್ಮಾಪಕಿಯಾಗಿ ನಿಹಾರಿಕಾ ಕೊನಿಡೆಲಾ ಅವರು ತೊಡಗಿಕೊಂಡಿದ್ದಾರೆ. ‘ಒಕ ಮನಸು’, ‘ಸೂರ್ಯಕಾಂತಂ’, ‘ಹ್ಯಾಪಿ ವೆಡ್ಡಿಂಗ್​’ ಮುಂತಾದ ಸಿನಿಮಾಗಳಲ್ಲಿ ಅವರ ನಟಿಸಿದ್ದಾರೆ. 2015ರಲ್ಲಿ ಅವರು ‘ಪಿಂಕ್​ ಎಲಿಫೆಂಟ್​ ಪಿಕ್ಚರ್ಸ್​’ ಎಂಬ ನಿರ್ಮಾಣ ಸಂಸ್ಥೆ ಆರಂಭಿಸಿದರು. ಇದರ ಹೊಸ ಕಚೇರಿಯನ್ನು ಅವರು ಇತ್ತೀಚೆಗೆ ತೆರೆದಿದ್ದಾರೆ. ನಟಿಯಾಗಿ ಅವರು ಕಮ್​ಬ್ಯಾಕ್​ ಮಾಡುತ್ತಾರೆ ಎಂದು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: ‘ಬೆಡ್​ನಲ್ಲಿ ರೋಷನ್​, ಮನಸ್ಸಲ್ಲಿ ಭಾರ್ಗವ್​’; ವೈರಲ್ ಆಯ್ತು ನಿಹಾರಿಕಾ ಕೊನಿಡೆಲಾ ಡೈಲಾಗ್

ಲಾವಣ್ಯ ಹಾಗೂ ವರುಣ್ ತೇಜ್ ಮದುವೆ ಗಾಸಿಪ್​:

ನಟಿ ಲಾವಣ್ಯ ಹಾಗೂ ವರುಣ್ ತೇಜ್ ಮಧ್ಯೆ ಏನೋ ನಡೆಯುತ್ತಿದೆ ಎನ್ನುವುದು ಈ ಮೊದಲಿನಿಂದಲೂ ಚರ್ಚೆಯಲ್ಲಿರುವ ವಿಚಾರ. ಆದರೆ, ಡೇಟಿಂಗ್ ವಿಚಾರವನ್ನು ಇವರು ಅಧಿಕೃತ ಮಾಡಿಲ್ಲ. ಇತ್ತೀಚೆಗೆ ಮಾತನಾಡಿದ್ದ ವರುಣ್ ತೇಜ್ ತಂದೆ ನಾಗ ಬಾಬು ಅವರು ಸಿಹಿ ಸುದ್ದಿ ನೀಡಿದ್ದರು. ಶೀಘ್ರವೇ ವರುಣ್ ತೇಜ್ ಮದುವೆ ಘೋಷಣೆ ಮಾಡುವ ಬಗ್ಗೆ ಅವರು ಮಾಹಿತಿ ನೀಡಿದ್ದರು. ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಯಿದೆ.

ಇದನ್ನೂ ಓದಿ: Niharika Konidela: ‘ಪುಷ್ಪ 2’ ಚಿತ್ರದಲ್ಲಿ ನಿಹಾರಿಕಾ ಕೊನಿಡೆಲಾ? ಡಿವೋರ್ಸ್​ ಗುಮಾನಿ ಬೆನ್ನಲ್ಲೇ ಮತ್ತೊಂದು ಗುಸುಗುಸು

ಲಾವಣ್ಯ ಹಾಗೂ ವರುಣ್ ತೇಜ್ ಮದುವೆ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬಂದಿದೆ. ಈ ಬಗ್ಗೆ ಲಾವಣ್ಯ ಅವರೇ ಸ್ಪಷ್ಟನೆ ನೀಡಿದರು. ‘ಮದುವೆ ಅನ್ನೋದು ನಿಜಕ್ಕೂ ಸುಂದರ. ಅದು ಸರಿಯಾದ ವ್ಯಕ್ತಿಯೊಂದಿಗೆ ಆದರೆ ಮಾತ್ರ ಎಂಬುದು ನನ್ನ ಭಾವನೆ. ಮದುವೆ ಆಗುವ ಕಾಲಕ್ಕೆ ಆಗುತ್ತದೆ. ಹೀಗೆಯೇ ಮದುವೆ ಆಗಬೇಕು ಎಂದು ಕನಸು ಕಂಡವಳು ನಾನಲ್ಲ’ ಎಂದು ಲಾವಣ್ಯ ಇತ್ತೀಚೆಗೆ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ