AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗುವ ನಿಖಿಲ್​ ಕುಮಾರ್​; ಹುಟ್ಟುಹಬ್ಬಕ್ಕೆ ಬ್ರೇಕ್​

ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಆ ಐತಿಹಾಸಿಕ ಕ್ಷಣವನ್ನು ನೇರವಾಗಿ ವೀಕ್ಷಿಸುವ ಅವಕಾಶ ಕೆಲವರಿಗೆ ಸಿಗುತ್ತಿದೆ. ಕರ್ನಾಟಕದ ಕೆಲವು ರಾಜಕಾರಣಿಗಳು, ಉದ್ಯಮಿಗಳು, ಸಿನಿಮಾ ಸೆಲೆಬ್ರಿಟಿಗಳು ಮುಂತಾದವರಿಗೆ ಆಹ್ವಾನ ಬಂದಿದೆ. ಅದೇ ರೀತಿ, ನಿಖಿಲ್​ ಕುಮಾರ್​ ಕೂಡ ಅಯೋಧ್ಯೆಗೆ ತೆರಳಲು ಸಜ್ಜಾಗಿದ್ದಾರೆ.

ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗುವ ನಿಖಿಲ್​ ಕುಮಾರ್​; ಹುಟ್ಟುಹಬ್ಬಕ್ಕೆ ಬ್ರೇಕ್​
ನಿಖಿಲ್​ ಕುಮಾರ್
ಮದನ್​ ಕುಮಾರ್​
|

Updated on: Jan 20, 2024 | 9:13 PM

Share

ನಟ, ರಾಜಕಾರಣಿ ನಿಖಿಲ್​ ಕುಮಾರ್ (Nikhil Kumar)​ ಅವರು ಅಭಿಮಾನಿಗಳಿಗೆ ಒಂದು ಮುಖ್ಯವಾದ ಸಂದೇಶ ನೀಡಿದ್ದಾರೆ. ಜನವರಿ 22ರಂದು ಅವರ ಜನ್ಮದಿನ. ಆದರೆ ಈ ಬಾರಿ ಅವರು ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನಾ (Ram Mandir Inauguration) ಸಮಾರಂಭ ನಡೆಯಲಿದ್ದು, ಅದರಲ್ಲಿ ನಿಖಿಲ್​ ಕುಮಾರಸ್ವಾಮಿ (Nikhil Kumaraswamy) ಭಾಗಿ ಆಗಲಿದ್ದಾರೆ. ಆ ಕಾರಣದಿಂದ ಅವರು ಈ ವರ್ಷ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರನ್ನು ಹುಟ್ಟುಹಬ್ಬದ ದಿನ ಭೇಟಿಯಾಗುತ್ತಿಲ್ಲ. ಈ ಬಗ್ಗೆ ಮುಂಚಿತವಾಗಿ ಅವರು ಎಲ್ಲರಿಗೂ ಮಾಹಿತಿ ನೀಡಿದ್ದಾರೆ.

ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಗೆ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಆ ಐತಿಹಾಸಿಕ ಕ್ಷಣವನ್ನು ನೇರವಾಗಿ ವೀಕ್ಷಿಸುವ ಅವಕಾಶ ಕೆಲವರಿಗೆ ಸಿಗುತ್ತಿದೆ. ಕರ್ನಾಟಕದ ಕೆಲವು ರಾಜಕಾರಣಿಗಳು, ಉದ್ಯಮಿಗಳು, ಸಿನಿಮಾ ಸೆಲೆಬ್ರಿಟಿಗಳು ಮುಂತಾದವರಿಗೆ ಆಹ್ವಾನ ಬಂದಿದೆ. ಅದೇ ರೀತಿ, ನಿಖಿಲ್​ ಕುಮಾರ್​ ಅವರು ಕೂಡ ಅಯೋಧ್ಯೆಗೆ ತೆರಳಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ದೊಡ್ಡ ಪರದೆಯಲ್ಲೂ ವೀಕ್ಷಿಸಬಹದು ರಾಮ ಮಂದಿರ ಕಾರ್ಯಕ್ರಮ; 100 ರೂ. ಟಿಕೆಟ್

‘ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ. ಜನವರಿ 22, ನನ್ನ ಹುಟ್ಟುಹಬ್ಬದ ದಿನ ನಿಮ್ಮನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಕ್ಷಮೆ ಇರಲಿ. ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆಯಲ್ಲಿ ನಾನು ಭಾಗಿಯಾಗಬೇಕಿದೆ. ನೀವೆಲ್ಲರೂ ನೀವಿದ್ದ ಕಡೆಯಿಂದಲೇ ನನ್ನ ಹುಟ್ಟುಹಬ್ಬಕ್ಕೆ ಹರಿಸಿದರೆ ಅದೇ ನನಗೆ ಸಂತೋಷ’ ಎಂದು ನಿಖಿಲ್​ ಕುಮಾರ್​ ಅವರು ತಮ್ಮ ಅಭಿಮಾನಿಗಳಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ‘ನನ್ನ ಹುಟ್ಟುಹಬ್ಬಕ್ಕಾಗಿ ಯಾವುದೇ ದುಂದು ವೆಚ್ಚ ಬೇಡ. ಅದನ್ನೇ ಒಳ್ಳೆಯ ಕಾರ್ಯಕ್ಕೆ ಬಳಸಿ. ಮತ್ತೊಮ್ಮೆ ನಿಮ್ಮ ಬಳಿ ಕ್ಷಮೆ ಕೇಳುತ್ತ, ಆದಷ್ಟು ಬೇಗ ಭೇಟಿ ಆಗೋಣ ಎಂದು ತಿಳಿಸುತ್ತೇನೆ. ನಿಮ್ಮ ಪ್ರೀತಿಯ ನಿಖಿಲ್​ ಕುಮಾರ್​’ ಎಂದು ಅವರು ಪತ್ರ ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ಉದ್ಘಾಟನೆ: ಶಾರುಖ್​, ಸಲ್ಮಾನ್​, ಆಮಿರ್​ ಖಾನ್​ಗೆ ನೀಡಿಲ್ಲ ಆಹ್ವಾನ

ಕನ್ನಡದ ನಟ ರಿಷಬ್​ ಶೆಟ್ಟಿ ಅವರಿಗೂ ಅಯೋಧ್ಯೆಯಿಂದ ಆಹ್ವಾನ ಬಂದಿದೆ. ಯಶ್​ ಕೂಡ ಈ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅಮಿತಾಭ್​ ಬಚ್ಚನ್​, ಆಲಿಯಾ ಭಟ್​, ರಜನಿಕಾಂತ್​, ರಣಬೀರ್​ ಕಪೂರ್​, ಕಂಗನಾ ರಣಾವತ್​, ಆಯುಷ್ಮಾನ್​ ಖುರಾನಾ, ಅಕ್ಷಯ್​ ಕುಮಾರ್​, ಅನುಷ್ಕಾ ಶರ್ಮಾ, ಅನುಪಮ್​ ಖೇರ್​, ಅಜಯ್​ ದೇವಗನ್​, ಪ್ರಭಾಸ್​, ರಾಮ್​ ಚರಣ್​, ಮಾಧುರಿ ದೀಕ್ಷಿತ್​, ಮೋಹನ್​ಲಾಲ್​, ಸನ್ನಿ ಡಿಯೋಲ್​, ಸಂಜಯ್​ ಲೀಲಾ ಬನ್ಸಾಲಿ, ಚಿರಂಜೀವಿ ಸೇರಿದಂತೆ ಹಲವರು ರಾಮ ಮಂದಿರ ಉದ್ಘಾಟನೆಯಲ್ಲಿ ಹಾಜರಿ ಹಾಕಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್