AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜಕಾರಣದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿದ್ದೇನೆ ಎಂಬ ಭಾವನೆ ಯಾರಿಗೂ ಬೇಡ’: ನಿಖಿಲ್​ ಕುಮಾರ್​ ಸ್ಪಷ್ಟನೆ

‘ನಾನು ಜವಾಬ್ದಾರಿಯನ್ನು ಅರಿತಿದ್ದೇನೆ. ಚುನಾವಣೆಯ ಸೋಲು ತಾತ್ಕಾಲಿಕ. ಜನರು ನನಗೆ ಸದಾ ಕಾಲ ಪ್ರೀತಿ, ವಿಶ್ವಾಸ, ಗೌರವದಲ್ಲಿ ಎಂದೂ ಕೊರತೆ ಮಾಡಿಲ್ಲ. ಸಮಯ, ಸಂದರ್ಭ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ’ ಎಂದು ನಿಖಿಲ್​ ಕುಮಾರ್​ ಅವರು ಪೋಸ್ಟ್​ ಮಾಡಿದ್ದಾರೆ. ಈ ಮೂಲಕ ಅವರು ತಮ್ಮ ಬಗ್ಗೆ ಹರಿದಾಡಿದ್ದ ಸುದ್ದಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ರಾಜಕಾರಣದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿದ್ದೇನೆ ಎಂಬ ಭಾವನೆ ಯಾರಿಗೂ ಬೇಡ’: ನಿಖಿಲ್​ ಕುಮಾರ್​ ಸ್ಪಷ್ಟನೆ
ನಿಖಿಲ್​ ಕುಮಾರ್​, ಎಚ್​.ಡಿ. ಕುಮಾರಸ್ವಾಮಿ,
ಮದನ್​ ಕುಮಾರ್​
|

Updated on: Aug 30, 2023 | 10:48 AM

Share

ಎಚ್​ಡಿ ದೇವೇಗೌಡ ಅವರ ಕುಟುಂಬ ಸಂಪೂರ್ಣವಾಗಿ ರಾಜಕೀಯದಲ್ಲಿ ಸಕ್ರಿಯವಾಗಿದೆ. ಆದರೆ ನಿಖಿಲ್​ ಕುಮಾರಸ್ವಾಮಿ (Nikhil Kumaraswamy) ಅವರು ಒಂದಷ್ಟು ವರ್ಷಗಳ ಕಾಲ ರಾಜಕೀಯದಿಂದ (Karnataka Politics) ದೂರ ಉಳಿಯಲಿದ್ದಾರೆ ಹಾಗೂ ಸಿನಿಮಾ ಕೆಲಸಗಳ ಮೇಲೆ ಹೆಚ್ಚು ಗಮನ ಹರಿಸಲಿದ್ದಾರೆ ಎಂದು ಇತ್ತೀಚೆಗೆ ಸುದ್ದಿ ಆಗಿತ್ತು. ಈ ಸುದ್ದಿ ಗೊತ್ತಾದ ಬಳಿಕ ಅವರ ಅಭಿಮಾನಿಗಳಲ್ಲಿ ಕೊಂಚ ಗೊಂದಲ ಏರ್ಪಟ್ಟಿತ್ತು. ಆ ವಿಚಾರಕ್ಕೆ ಸಂಬಂಧಿಸಿದಂತೆ ನಿಖಿಲ್​ ಕುಮಾರ್​ ಅವರು ಈಗ ಸ್ವತಃ ಸ್ಪಷ್ಟನೆ ನೀಡಿದ್ದಾರೆ. ‘ಆರೂವರೆ ಕೋಟಿ ಕನ್ನಡಿಗರು, ದೃಶ್ಯ ಮತ್ತು ಮುದ್ರಣ ಮಾಧ್ಯಮಕ್ಕೆ ನಿನ್ನೆಯ ದಿನ ಚರ್ಚೆಗೆ ಗ್ರಾಸವಾದ ವಿಷಯದ ಬಗ್ಗೆ ಸ್ಪಷ್ಟನೆ ನೀಡಲು ಇಚ್ಛಿಸುತ್ತೇನೆ. ಲೋಕಸಭೆ, ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ’ ಎಂದು ನಿಖಿಲ್​ ಕುಮಾರ್​ (Nikhil Kumaraswamy) ಟ್ವೀಟ್​ ಮಾಡಿದ್ದಾರೆ.

‘ನಾನು ಜವಾಬ್ದಾರಿಯನ್ನು ಅರಿತಿದ್ದೇನೆ. ಚುನಾವಣೆಯ ಸೋಲು ತಾತ್ಕಾಲಿಕ. ಜನರು ನನಗೆ ಸದಾ ಕಾಲ ಪ್ರೀತಿ, ವಿಶ್ವಾಸ, ಗೌರವದಲ್ಲಿ ಎಂದೂ ಕೊರತೆ ಮಾಡಿಲ್ಲ. ಸಮಯ, ಸಂದರ್ಭ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ. ಮಾಜಿ ಪ್ರಧಾನಮಂತ್ರಿಗಳ ಮೊಮ್ಮಗ, ಮಾಜಿ ಮುಖ್ಯಮಂತ್ರಿಗಳ ಮಗ ಎನ್ನುವುದು ಒಂದು ಭಾಗವಾದರೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಕೊಟ್ಟಿರುವ ಸಮಸ್ತ ಕಲಾಭಿಮಾನಿಗಳಿಗೆ ನಾನು ಎಂದೆಂದಿಗೂ ಚಿರಋಣಿ’ ಎಂದು ನಿಖಿಲ್​ ಕುಮಾರ್​ ಅವರು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ‘ಕಲಾವಿದನಾಗಿ ಜೀವನ ರೂಪಿಸಿಕೊಳ್ಳುವಂತೆ ನಿಖಿಲ್​​ಗೆ ಹೇಳಿದ್ದೇನೆ’: ಎಚ್​ಡಿ ಕುಮಾರಸ್ವಾಮಿ

‘ನನ್ನ ಮೊದಲ ಚಿತ್ರ ಜಾಗ್ವಾರ್ ಮತ್ತು ನಾನು ನಟಿಸಿರುವ ಎಲ್ಲಾ ಸಿನಿಮಾಗಳಲ್ಲೂ ಬೆನ್ನುತಟ್ಟಿ ಆಶೀರ್ವದಿಸಿ, ಪ್ರೋತ್ಸಾಹಿಸಿ ನನ್ನ ಯಶಸ್ಸಿಗೆ ನೀವೆಲ್ಲರೂ ಕಾರಣರಾಗಿದ್ದಿರಿ. ಅದಕ್ಕೆ ನಾನು ಆಭಾರಿ. ಇನ್ನೂ ಬೆಟ್ಟದಷ್ಟು ಕನಸು ಹೊತ್ತು ಹಲವಾರು ಚಿತ್ರಗಳಲ್ಲಿ ನಟಿಸಿ ನಿಮ್ಮನ್ನು ಮನರಂಜಿಸಬೇಕು ಎನ್ನುವುದು ನನ್ನ ಜೀವನದ ಗುರಿ’ ಎಂದು ನಿಖಿಲ್​ ಕುಮಾರ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ತಿಳಿಸಿದ್ದಾರೆ.

ನಿಖಿಲ್​ ಕುಮಾರ್​ ಟ್ವೀಟ್:

‘ಇಲ್ಲಿಯವರೆಗೂ ನನ್ನ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದೆಯೂ ನಾನು ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನು ಮಾಡುವವನಿದ್ದೇನೆ. ಕೊನೆಯದಾಗಿ.. ಎಲ್ಲಾ ಮಾಧ್ಯಮದ ಮಿತ್ರರಿಗೆ ರಾಜಕಾರಣ ಮತ್ತು ಸಿನಿಮಾದ ವಿಚಾರವಾಗಿ ನನಗೆ ಸಂಬಂಧಿಸಿದ ವಿಷಯಗಳಿದ್ದರೆ ಆ ಪ್ರಶ್ನೆಗಳಿಗೆ ನಾನೇ ಉತ್ತರ ನೀಡಲು ಬಯಸುತ್ತೇನೆ’ ಎಂದು ನಿಖಿಲ್​ ಕುಮಾರ್​ ಅವರು ಸ್ಪಷ್ಟನೆ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ