AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್ ಚಂದ್ರ ಭೋಸ್ ಸಾವಿನ ನಿಗೂಢತೆ ಅರಸಿ ಹೊರಟ ಸ್ಪೈ: ಬಲ್ಲಾಳದೇವನ ಸರ್ಪ್ರೈಸ್ ಎಂಟ್ರಿ

Spy Trailer: ಸುಭಾಷ್ ಚಂದ್ರ ಭೋಸ್ ಮರಣದ ರಹಸ್ಯವನ್ನು ಬೆನ್ನತ್ತಿ ಹೋಗುವ ಗೂಢಚಾರಿಯೊಬ್ಬನ ಕತೆಯನ್ನು ಒಳಗೊಂಡಿರುವ ಸ್ಪೈ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ.

ಸುಭಾಷ್ ಚಂದ್ರ ಭೋಸ್ ಸಾವಿನ ನಿಗೂಢತೆ ಅರಸಿ ಹೊರಟ ಸ್ಪೈ: ಬಲ್ಲಾಳದೇವನ ಸರ್ಪ್ರೈಸ್ ಎಂಟ್ರಿ
ಸ್ಪೈ ಸಿನಿಮಾ
ಮಂಜುನಾಥ ಸಿ.
|

Updated on: Jun 24, 2023 | 10:50 PM

Share

ಚಿತ್ರರಂಗದಲ್ಲೀಗ ಇತಿಹಾಸ ಕೆದಕುವ ಸಿನಿಮಾಗಳ ಟ್ರೆಂಡ್ ಆರಂಭವಾದಂತಿದೆ. ಕನ್ನಡದಲ್ಲಿ ಉರಿಗೌಡ-ನಂಜೇಗೌಡ ಸಿನಿಮಾ ಮಾಡುವ ಯೋಜನೆ ರೂಪುಗೊಂಡು ಬಳಿಕ ಕೈ ಬಿಡಲಾಯ್ತು. ಕಾಶ್ಮೀರದಲ್ಲಿ 90 ರಲ್ಲಿ ನಡೆದ ಘಟನೆಯನ್ನು ‘ದಿ ಕಾಶ್ಮೀರ್ ಫೈಲ್ಸ್ (The Kashmir Files) ಸಿನಿಮಾ ಮಾಡಲಾಯ್ತು. ಸಾವರ್ಕರ್ ಬಗೆಗೆ ಸಿನಿಮಾ ಮಾಡಲಾಗುತ್ತಿದೆ. ರಾಮ್ ಸೇತು ಬಗ್ಗೆ ಸಿನಿಮಾ ಮಾಡಲಾಗಿದೆ. ಲಾಲ್ ಬಹದ್ಧೂರ್ ಶಾಸ್ತ್ರಿ ಸಾವಿನ ಕುರಿತಾದ ಸಿನಿಮಾ ಮಾಡಲಾಗಿದೆ. ಇದೀಗ ಅದೇ ಸಾಲಿಗೆ ಸೇರಬಹುದಾದ ಮತ್ತೊಂದು ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈ ಬಾರಿ ಸುಭಾಷ್ ಚಂದ್ರ ಬೋಸ್​ರ (Subhash Chandra Bose) ಜೀವನ ಕತೆಯ ರಹಸ್ಯವನ್ನು ಸಿನಿಮಾ ಮೂಲಕ ಹೇಳುತ್ತಿರುವುದಾಗಿ ಚಿತ್ರತಂಡ ಒಂದು ಹೇಳಿಕೊಂಡಿದ್ದು, ಸಿನಿಮಾದ ಟ್ರೈಲರ್ (Trailer) ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡಗುಡೆ ಆಗಿದೆ.

ಸುಭಾಷ್ ಚಂದ್ರ ಭೋಸ್​ರ ಮರಣ ರಹಸ್ಯ ಹುಡುಕಿ ಹೊರಡುವ ಗೂಢಚಾರಿಯ ಕತೆಯನ್ನು ಸ್ಪೈ ಹೆಸರಿನ ತೆಲುಗು ಸಿನಿಮಾ ಮಾಡಲಾಗಿದ್ದು ಕನ್ನಡ ಸೇರಿದಂತೆ ಹಲವು ಭಾಷೆಗಳಿಗೆ ಡಬ್ ಮಾಡಲಾಗಿದೆ. ಟಾಲಿವುಡ್​ನ ಜನಪ್ರಿಯ ನಟ ನಿಖಿಲ್ ಸಿದ್ದಾರ್ಥ್ ಸಿನಿಮಾದಲ್ಲಿ ನಾಯಕನ ಪಾತ್ರದಲ್ಲಿ ನಟಿಸಿದ್ದು, ಸ್ಪೈ ಸಿನಿಮಾವು ಇದೇ 29ಕ್ಕೆ ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗಲಿದೆ. ಸ್ಪೈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಇದನ್ನೂ ಓದಿ:ಟಾಲಿವುಡ್​​ನ ಈ ಸ್ಟಾರ್ ನಟರ ಬಳಿ ಇದೆ ಸ್ವಂತ ವಿಮಾನ; ಶ್ರೀಮಂತ ನಟರ ವಿವರ ಇಲ್ಲಿದೆ..

ಭಾರತದ ಟಾಪ್ ಸೀಕ್ರೆಟ್ ರಹಸ್ಯಗಳು, ವಿಮಾನ ಅಪಘಾತದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಸಾವನ್ನಪ್ಪಿದ್ದಾರೆ ಎನ್ನಲಾದ ವಿಚಾರಗಳನ್ನು ಬೆನ್ನತ್ತುವ ಗೂಢಚಾರಿ ಪಾತ್ರದಲ್ಲಿ ನಿಖಿಲ್ ಸಿದ್ದಾರ್ಥ್ ಅಭಿನಯಿಸಿದ್ದು, ಐಶ್ವರ್ಯ ಮೆನನ್ ನಾಯಕಿಯಾಗಿ, ಸನ್ಯಾ ಠಾಕೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸ್ಪೆಷಲ್ ರೋಲ್ ನಲ್ಲಿ ಬಾಹುಬಲಿ ಬಲ್ಲಾಳದೇವ ರಾಣಾ ದಗ್ಗುಭಾಟಿ ಕೂಡ ಕಾಣಿಸಿಕೊಂಡಿದ್ದಾರೆ. ಅಭಿನವ್ ಗೋಮತಮ್, ಮಕರಂದ್ ದೇಶಪಾಂಡೆ, ನಿತಿನ್ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್, ಸೋನಿಯಾ ನರೇಶ್ ಮತ್ತು ಇತರರು ತಾರಾಬಳಗದಲ್ಲಿದ್ದಾರೆ. ವಿಶೇಷವೆಂದರೆ ಸಿನಿಮಾದಲ್ಲಿ ನಟ ರಾಣಾ ದಗ್ಗುಬಾಟಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ರಾಣಾ ದಗ್ಗುಬಾಟಿಯ ದೃಶ್ಯವೊಂದನ್ನು ಟ್ರೈಲರ್​ನಲ್ಲಿ ಸಹ ತೋರಿಸಲಾಗಿದೆ.

ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್ ಸ್ಪೈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಎವರು ಮತ್ತು ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್ ರೆಡ್ಡಿ ED ಎಂಟರ್‌ಟೈನ್‌ಮೆಂಟ್‌ನಡಿ ಚರಣ್ ರಾಜ್ ಉಪ್ಪಲಪತಿ ಜೊತೆಗೂಡಿ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದಾರೆ. ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ‌ ಮೂಡಿ ಬರ್ತಿರುವ ಈ ಚಿತ್ರಕ್ಕೆ ರಾಜಶೇಖರ್ ರೆಡ್ಡಿ ನಿರ್ಮಾಣದ ಜೊತೆಗೆ ಕಥೆ ಕೂಡ ಬರೆದಿದ್ದು, ಗ್ಯಾರಿ ಬಿ.ಎಚ್. ನಿರ್ದೇಶನದ ಜೊತೆಗೆ ಸಂಕಲನದ ಹೊಣೆ ಹೊತ್ತಿದ್ದಾರೆ. ಜೂನಿಯನ್ ಅಮರು ಸೂರಿಸೆಟ್ಟಿ ಛಾಯಾಗ್ರಹಣ, ಶ್ರೀಚರಣ್ ಪಕಳ ಸಂಗೀತ, ಅರ್ಜುನ್ ಸೂರಿಸೆಟ್ಟಿ ಕಲಾ ನಿರ್ದೇಶನ ಸಿನಿಮಾಕ್ಕಿದೆ. ಇದೇ 29ರಂದು ಸ್ಪೈ ಸಿನಿಮಾ ವರ್ಲ್ಡ್ ವೈಡ್ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ