AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರ ಪ್ರಶಸ್ತಿ ಗೆದ್ದ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ನಿತ್ಯಾ ಮೆನನ್

ಧನುಷ್ ಜೊತೆ ನಿತ್ಯಾ ಮೆನನ್ ಅವರು ನಟಿಸಿದ ‘ತಿರುಚಿತ್ರಂಬಲಂ’ ಚಿತ್ರ ಮೆಚ್ಚುಗೆ ಪಡೆಯಿತು. ಈ ಚಿತ್ರದ ನಟನೆಗೆ ನಿತ್ಯಾ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ‘ತಿರುಚಿತ್ರಂಬಲಂ’ ಸಿನಿಮಾ 2022ರ ಆಗಸ್ಟ್​ನಲ್ಲಿ ರಿಲೀಸ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿದೆ.

ರಾಷ್ಟ್ರ ಪ್ರಶಸ್ತಿ ಗೆದ್ದ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ನಿತ್ಯಾ ಮೆನನ್
ನಿತ್ಯಾ
ರಾಜೇಶ್ ದುಗ್ಗುಮನೆ
|

Updated on: Aug 18, 2024 | 7:29 AM

Share

70ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಇತ್ತೀಚೆಗೆ ಘೋಷಣೆ ಆಗಿದೆ. ನಿತ್ಯಾ ಮೆನನ್ ಅವರಿಗೆ ‘ತಿರುಚಿತ್ರಂಬಲಂ’ (ತಮಿಳು) ಸಿನಿಮಾ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಈ ವಿಚಾರ ಅವರಿಗೆ ಹೆಮ್ಮೆ ತಂದಿದೆ. ರಾಷ್ಟ್ರ ಪ್ರಶಸ್ತಿ ಗೆದ್ದ ಬಳಿಕ ಅವರು ಯಾರ ಕೈಗೂ ಸಿಕ್ಕಿರಲಿಲ್ಲ. ಈಗ ಅವರು ಅವಾರ್ಡ್ ಪಡೆದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರಿಗೆ ಅವಾರ್ಡ್ ವಿಚಾರ ಖುಷಿ ತಂದಿದೆ.

‘ರಾಷ್ಟ್ರ ಪ್ರಶಸ್ತಿ ಘೋಷಣೆ ಮಾಡುತ್ತಿರುವ ವಿಚಾರವೇ ನನಗೆ ತಿಳಿದಿರಲಿಲ್ಲ. ನಾನು ಎಲ್ಲರಿಂದ ದೂರ ಇರಲು ಪ್ರಯತ್ನಿಸುತ್ತೇನೆ. ಹೀಗಾಗಿ, ನಾನು ಅವಾರ್ಡ್ ಬರುತ್ತದೆ ಎಂದು ಊಹಿಸಿರಲಿಲ್ಲ. ನನಗೆ ಈ ವಿಚಾರ ಖುಷಿ ತಂದಿದೆ’ ಎಂದು ಅವರು ಹೇಳಿದ್ದಾರೆ.

‘ಅನೇಕರು ನನಗೆ ವಿಶ್ ಮಾಡಿದ್ದಾರೆ. ಅವರಿಗೆ ಅವಾರ್ಡ್ ಸಿಕ್ಕಿದೆ ಎಂಬ ರೀತಿಯಲ್ಲಿ ಸೆಲೆಬ್ರೇಷನ್ ಮಾಡಿದ್ದಾರೆ. ಇದು ನಿಜಕ್ಕೂ  ಖುಷಿಯ ವಿಚಾರ. ‘ತಿರುಚಿತ್ರಂಬಲಂ’ ಚಿತ್ರದಿಂದ ನನಗೆ ಅವಾರ್ಡ್ ಸಿಕ್ಕಿದ್ದು ಹೆಮ್ಮೆ ತಂದಿದೆ. ಈ ಸಿನಿಮಾನ ಮಾಡುವಾಗ ಹಾಗೂ ನೋಡುವಾಗ ಖುಷಿ ಕೊಟ್ಟಿದೆ. ನಾನು ಪ್ರಶಸ್ತಿಗೆ ಅರ್ಹ’ ಎಂದಿದ್ದಾರೆ ಅವರು.

‘ತಿರುಚಿತ್ರಂಬಲಂ’ ಸಿನಿಮಾ 2022ರ ಆಗಸ್ಟ್​ನಲ್ಲಿ ರಿಲೀಸ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿದೆ. 30 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ.

ಇದನ್ನೂ ಓದಿ: ಕನ್ನಡತಿ ನಿತ್ಯಾ ಮೆನನ್​ಗೆ ಒಲಿಯಿತು ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿ 

ನಿತ್ಯಾ ಮೆನನ್ ಅವರು ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ. ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಅವರು ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಈ ಕಾರಣಕ್ಕೆ ಅವರಿಗೆ ಬೆಂಗಳೂರಿನ ಮೇಲೆ ವಿಶೇಷ ಒಲವು ಇದೆ. ಅವರು ಕನ್ನಡಾಭ್ಯಾಸವನ್ನೇ ಮಾಡಿದ್ದಾರೆ. ನಿತ್ಯಾ ಮೆನನ್ ಅವರು ‘ಕೋಟಿಗೊಬ್ಬ 2’ ಬಳಿಕ ಕನ್ನಡ ಸಿನಿಮಾಗಳಲ್ಲಿ ನಟಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ