70ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಇತ್ತೀಚೆಗೆ ಘೋಷಣೆ ಆಗಿದೆ. ನಿತ್ಯಾ ಮೆನನ್ ಅವರಿಗೆ ‘ತಿರುಚಿತ್ರಂಬಲಂ’ (ತಮಿಳು) ಸಿನಿಮಾ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಈ ವಿಚಾರ ಅವರಿಗೆ ಹೆಮ್ಮೆ ತಂದಿದೆ. ರಾಷ್ಟ್ರ ಪ್ರಶಸ್ತಿ ಗೆದ್ದ ಬಳಿಕ ಅವರು ಯಾರ ಕೈಗೂ ಸಿಕ್ಕಿರಲಿಲ್ಲ. ಈಗ ಅವರು ಅವಾರ್ಡ್ ಪಡೆದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರಿಗೆ ಅವಾರ್ಡ್ ವಿಚಾರ ಖುಷಿ ತಂದಿದೆ.
‘ರಾಷ್ಟ್ರ ಪ್ರಶಸ್ತಿ ಘೋಷಣೆ ಮಾಡುತ್ತಿರುವ ವಿಚಾರವೇ ನನಗೆ ತಿಳಿದಿರಲಿಲ್ಲ. ನಾನು ಎಲ್ಲರಿಂದ ದೂರ ಇರಲು ಪ್ರಯತ್ನಿಸುತ್ತೇನೆ. ಹೀಗಾಗಿ, ನಾನು ಅವಾರ್ಡ್ ಬರುತ್ತದೆ ಎಂದು ಊಹಿಸಿರಲಿಲ್ಲ. ನನಗೆ ಈ ವಿಚಾರ ಖುಷಿ ತಂದಿದೆ’ ಎಂದು ಅವರು ಹೇಳಿದ್ದಾರೆ.
‘ಅನೇಕರು ನನಗೆ ವಿಶ್ ಮಾಡಿದ್ದಾರೆ. ಅವರಿಗೆ ಅವಾರ್ಡ್ ಸಿಕ್ಕಿದೆ ಎಂಬ ರೀತಿಯಲ್ಲಿ ಸೆಲೆಬ್ರೇಷನ್ ಮಾಡಿದ್ದಾರೆ. ಇದು ನಿಜಕ್ಕೂ ಖುಷಿಯ ವಿಚಾರ. ‘ತಿರುಚಿತ್ರಂಬಲಂ’ ಚಿತ್ರದಿಂದ ನನಗೆ ಅವಾರ್ಡ್ ಸಿಕ್ಕಿದ್ದು ಹೆಮ್ಮೆ ತಂದಿದೆ. ಈ ಸಿನಿಮಾನ ಮಾಡುವಾಗ ಹಾಗೂ ನೋಡುವಾಗ ಖುಷಿ ಕೊಟ್ಟಿದೆ. ನಾನು ಪ್ರಶಸ್ತಿಗೆ ಅರ್ಹ’ ಎಂದಿದ್ದಾರೆ ಅವರು.
‘ತಿರುಚಿತ್ರಂಬಲಂ’ ಸಿನಿಮಾ 2022ರ ಆಗಸ್ಟ್ನಲ್ಲಿ ರಿಲೀಸ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಯಶಸ್ಸು ಕಂಡಿದೆ. 30 ಕೋಟಿ ರೂಪಾಯಿ ಬಜೆಟ್ನಲ್ಲಿ ಸಿದ್ಧವಾದ ಈ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ.
ಇದನ್ನೂ ಓದಿ: ಕನ್ನಡತಿ ನಿತ್ಯಾ ಮೆನನ್ಗೆ ಒಲಿಯಿತು ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿ
ನಿತ್ಯಾ ಮೆನನ್ ಅವರು ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ. ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಅವರು ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಈ ಕಾರಣಕ್ಕೆ ಅವರಿಗೆ ಬೆಂಗಳೂರಿನ ಮೇಲೆ ವಿಶೇಷ ಒಲವು ಇದೆ. ಅವರು ಕನ್ನಡಾಭ್ಯಾಸವನ್ನೇ ಮಾಡಿದ್ದಾರೆ. ನಿತ್ಯಾ ಮೆನನ್ ಅವರು ‘ಕೋಟಿಗೊಬ್ಬ 2’ ಬಳಿಕ ಕನ್ನಡ ಸಿನಿಮಾಗಳಲ್ಲಿ ನಟಿಸಿಲ್ಲ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.