AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆತ್ಲಹೆಮ್ ಕುಟುಂಬ ಯೂನಿಟ್’ ಹೊಸ ದಾಖಲೆ; ಮಲಯಾಳಂ ಸಿನಿಮಾ ರಂಗದಲ್ಲೇ ಅತಿ ಹೆಚ್ಚು ಗಳಿಸಿದ ಸಿನಿಮಾ

ನಿವಿನ್ ಪೌಳಿ ಮತ್ತು ಮಮಿತಾ ಬೈಜು ಅಭಿನಯದ 'ಬೆತ್ಲಹೇಮ್ ಕುಟುಂಬ ಯೂನಿಟ್' ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ 305 ಕೋಟಿ ಗಳಿಸಿ ಇತಿಹಾಸ ಬರೆದಿದೆ. ಸರಳ ಪ್ರೇಮಕಥೆಯಾಗಿದ್ದರೂ ಪ್ರೇಕ್ಷಕರ ಮನ ಗೆದ್ದು ಸಾರ್ವಕಾಲಿಕ ದಾಖಲೆ ಬರೆದಿದೆ. ಮಲಯಾಳಂ ಚಿತ್ರರಂಗದ ಈ ಅಭೂತಪೂರ್ವ ಯಶಸ್ಸು ಈಗ ಪ್ರಪಂಚದಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

'ಬೆತ್ಲಹೆಮ್ ಕುಟುಂಬ ಯೂನಿಟ್' ಹೊಸ ದಾಖಲೆ; ಮಲಯಾಳಂ ಸಿನಿಮಾ ರಂಗದಲ್ಲೇ ಅತಿ ಹೆಚ್ಚು ಗಳಿಸಿದ ಸಿನಿಮಾ
ನಿವೀನ್ ಪೌಳಿ-ಮಮಿತಾ
ರಾಜೇಶ್ ಹೆಗಡೆ ದುಗ್ಗುಮನೆ
|

Updated on: Sep 14, 2026 | 3:55 PM

Share

ಮುಖ್ಯಾಂಶಗಳು

  • ಬಾಕ್ಸ್ ಆಫೀಸ್ ಧೂಳೆಬ್ಬಿಸಿದ 'ಬೆತ್ಲಹೆಮ್ ಕುಟುಂಬ ಯೂನಿಟ್'
  • ಆಕ್ಷನ್ ಸಿನಿಮಾಗಳ ಮಧ್ಯೆ ಸರಳ ಪ್ರೇಮಕಥೆಯ ಜಾದೂ
  • ನಿವಿನ್ ಪೌಳಿ-ಮಮಿತಾ ಬೈಜು ಜೋಡಿಯ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ

ನಿವಿನ್ ಪೌಳಿ-ಮಮಿತಾ ಬೈಜು ನಟನೆಯ ‘ಬೆತ್ಲಹೆಮ್ ಕುಟುಂಬ ಯೂನಿಟ್’ ಮಲಯಾಳಂ ಚಿತ್ರರಂಗದಲ್ಲಿ ಹೊಸ ಇತಿಹಾಸ ಬರೆದಿದೆ. ಈ ಸಿನಿಮಾ ಎಲ್ಲ ಚಿತ್ರರಂಗಗಳು ಹುಬ್ಬೇರಿಸುವಂತೆ ಗಳಿಕೆ ಮಾಡುತ್ತಿದೆ. ‘ಲೋಕ ಚಾಪ್ಟರ್ 1’ ಬರೆದಿದ್ದ ದಾಖಲೆಯನ್ನು ಇದು ಉಡಾಯಿಸಿದೆ. ‘ಲೋಕಃ’ ಮಾಡಿದ್ದ 305 ಕೋಟಿ ರೂಪಾಯಿ ಗಳಿಕೆಯ ಗಡಿಯನ್ನು ಯಶಸ್ವಿಯಾಗಿ ದಾಟಿದೆ. ಮಲಯಾಳಂ ಚಿತ್ರರಂಗದ ಸಾರ್ವಕಾಲಿಕ ದೊಡ್ಡ ಹಿಟ್ ಆಗಿ ಈ ಚಿತ್ರ ಹೊರಹೊಮ್ಮಿದೆ.

ಇತ್ತೀಚಿನ ದಿನಗಳಲ್ಲಿ ದೊಡ್ಡ ಮಟ್ಟದ ಆ್ಯಕ್ಷನ್ ಸಿನಿಮಾಗಳು ಮಾತ್ರ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡುತ್ತಿವೆ. ಆದರೆ ‘ಬೆತ್ಲಹೆಮ್ ಕುಟುಂಬ ಯೂನಿಟ್’ ಒಂದು ಸರಳ ಪ್ರೇಮಕಥೆ. ಹಾಸ್ಯ ಮತ್ತು ಮುದ್ದಾದ ಪ್ರೇಮಕಥೆಯೇ ಚಿತ್ರಕ್ಕೆ ಬಲ ತುಂಬಿದೆ. ಈ ಯಶಸ್ಸು ಎಲ್ಲರಿಗೂ ಆಶ್ಚರ್ಯ ತಂದಿದೆ. ಬೃಹತ್ ಸಾಹಸ ದೃಶ್ಯಗಳಿಲ್ಲದೇ ಈ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿದೆ.

ಮಲಯಾಳಂ ಚಿತ್ರರಂಗದ ವಿಶಿಷ್ಟತೆಗೆ ಈ ಯಶಸ್ಸು ಸಾಕ್ಷಿಯಾಗಿದೆ. ಪ್ರೇಕ್ಷಕರಿಗೆ ಹತ್ತಿರವೆನಿಸುವ ಪಾತ್ರಗಳು ಇಲ್ಲಿವೆ. ನಟರ ನೈಜ ಅಭಿನಯ ಪ್ರೇಕ್ಷಕರ ಮನ ಗೆದ್ದಿದೆ. ಭಾವನಾತ್ಮಕ ಬೆಸುಗೆಗೆ ಜನರು ಮನಸೋತಿದ್ದಾರೆ. ಕೇವಲ 20 ಕೋಟಿ ರೂಪಾಯಿ ಬಜೆಟ್​​ನಲ್ಲಿ ನಿರ್ಮಾಣವಾದ ಈ ಸಿನಿಮಾ ನಿರ್ಮಾಪಕರಿಗೆ ಸಾಕಷ್ಟು ಲಾಭ ತಂದಿದೆ. ಚಿತ್ರದ ಗಳಿಕೆ 309 ಕೋಟಿ ರೂಪಾಯಿ ಆಗಿದೆ.

ಮಲಯಾಳಂ ಸಿನಿಮಾಗಳು 100 ಕೋಟಿ ರೂಪಾಯಿ ಗಳಿಕೆ ಮಾಡೋದು ಒಂದು ದೊಡ್ಡ ಸಾಧನೆ. ಹೀಗಿರುವಾಗ ಈ ಚಿತ್ರ 300 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದರೆ ಅದು ನಿಜಕ್ಕೂ ದೊಡ್ಡ ಸಂಗತಿ. ಈ ಚಿತ್ರದ ಜಾಗತಿಕ ಯಶಸ್ಸು ಮಲಯಾಳಂ ಸಿನಿಮಾಗಳ ಮಾರುಕಟ್ಟೆಯನ್ನು ವಿಸ್ತರಿಸಿದೆ. ಪ್ರಪಂಚದಾದ್ಯಂತ ಇರುವ ಚಿತ್ರಪ್ರೇಮಿಗಳು ಈ ಸಿನಿಮಾವನ್ನು ಮುಕ್ತಕಂಠದಿಂದ ಶ್ಲಾಘಿಸುತ್ತಿದ್ದಾರೆ. ಮಲಯಾಳಂ ಚಿತ್ರರಂಗದ ಖ್ಯಾತಿ ವಿಶ್ವಮಟ್ಟದಲ್ಲಿ ಮತ್ತಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಮಲಯಾಳಂ ಚಿತ್ರರಂಗದಲ್ಲಿ ಬದಲಾದ ಟ್ರೆಂಡ್; ಸ್ಟಾರ್‌ಗಳಿಗಿಂತ ಕಂಟೆಂಟ್‌ಗೇ ಪ್ರೇಕ್ಷಕರ ಜೈಕಾರ

ಮಲಯಾಳಂ ಚಿತ್ರರಂಗವು ಹೊಸ ಪ್ರಯೋಗಗಳಿಗೆ ಹೆಸರುವಾಸಿಯಾಗಿದೆ. ವಿಭಿನ್ನ ರೀತಿಯ ಕಥೆಗಳ ಮೂಲಕ ಜನರನ್ನು ಬೆರಗುಗೊಳಿಸುತ್ತಿದೆ. ಈ ಸಿನಿಮಾದಲ್ಲಿ ಮಮಿತಾ ಬೈಜು ನಾಯಕಿಯಾಗಿ ನಟಿಸಿದ್ದಾರೆ. ನಿವಿನ್ ಪೌಲಿ ಮತ್ತು ಮಮಿತಾ ನಡುವಿನ ಕೆಮಿಸ್ಟ್ರಿ ಅದ್ಭುತವಾಗಿದೆ. ಈ ಜೋಡಿಯ ಅಭಿನಯವೇ ಸಿನಿಮಾದ ದೊಡ್ಡ ಪ್ಲಸ್ ಪಾಯಿಂಟ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ