AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷಮೆ ಕೇಳದಿದ್ದರೆ ಸಿನಿಮಾ ಬಿಡುಗಡೆ ಇಲ್ಲ: ಪವನ್ ಕಲ್ಯಾಣ್​​ಗೆ ಎಚ್ಚರಿಕೆ

Pawan Kalyan: ಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್ ಅವರ ಹೊಸ ಸಿನಿಮಾ ಕೆಲವೇ ತಿಂಗಳುಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಇದೀಗ ನೆರೆಯ ತೆಲಂಗಾಣದಲ್ಲಿ ಪವನ್ ಕಲ್ಯಾಣ್ ಅವರಿಗೆ ವಿರೋಧ ವ್ಯಕ್ತವಾಗಿದೆ. ಇತ್ತೀಚೆಗೆ ಪವನ್ ನೀಡಿರುವ ಹೇಳಿಕೆ ತೆಲಂಗಾಣದಲ್ಲಿ ವಿವಾದದ ಸ್ವರೂಪ ಪಡೆದಿದ್ದು, ಕ್ಷಮೆ ಕೇಳದ ಹೊರತು ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದಿದ್ದಾರೆ ತೆಲಂಗಾಣ ಸಚಿವ.

ಕ್ಷಮೆ ಕೇಳದಿದ್ದರೆ ಸಿನಿಮಾ ಬಿಡುಗಡೆ ಇಲ್ಲ: ಪವನ್ ಕಲ್ಯಾಣ್​​ಗೆ ಎಚ್ಚರಿಕೆ
Pawan Kalyan
ಮಂಜುನಾಥ ಸಿ.
|

Updated on: Dec 02, 2025 | 5:30 PM

Share

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಮತ್ತು ತೆಲುಗು ಚಿತ್ರರಂಗದ ಸ್ಟಾರ್ ನಟ ಪವನ್ ಕಲ್ಯಾಣ್ (Pawan Kalyan) ಅವರಿಗೆ ತೆಲಂಗಾಣ ರಾಜ್ಯದ ಕೆಲ ಮಂತ್ರಿಗಳು, ಸಚಿವರು, ರಾಜಕೀಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಪವನ್ ಕಲ್ಯಾಣ್ ಅವರು, ತೆಲಂಗಾಣ ಜನತೆಯ ಕ್ಷಮೆ ಕೇಳದೇ ಹೋದಲ್ಲಿ, ಪವನ್ ಕಲ್ಯಾಣ್ ಸಿನಿಮಾಗಳನ್ನು ತೆಲಂಗಾಣದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ ಮಾತ್ರವಲ್ಲದೆ, ತೆಲಂಗಾಣದಾದ್ಯಂತ ಪ್ರತಿಭಟನೆ ಮಾಡುವುದಾಗಿಯೂ ಹೇಳಿದ್ದಾರೆ. ಅಷ್ಟಕ್ಕೂ ಪವನ್ ಕಲ್ಯಾಣ್ ಹೇಳಿದ್ದೇನು?

ಆಂಧ್ರ ಡಿಸಿಎಂ ಆಗಿರುವ ಜೊತೆಗೆ ಆಂಧ್ರ ಪ್ರದೇಶದ ಅರಣ್ಯ ಸಚಿವ, ಗ್ರಾಮೀಣಾಭಿವೃದ್ಧಿ ಸಚಿವರೂ ಆಗಿರುವ ಪವನ್ ಕಲ್ಯಾಣ್ ಇತ್ತೀಚೆಗಷ್ಟೆ ಆಂಧ್ರ ಪ್ರದೇಶದ ಕೋನಸಿಮ ಜಿಲ್ಲೆಗೆ ಭೇಟಿ ನೀಡಿದ್ದರು. ಇದೊಂದು ಸರ್ಕಾರಿ ಭೇಟಿ ಆಗಿತ್ತು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಪವನ್ ಕಲ್ಯಾಣ್, ಕೋನಸೀಮ ಜಿಲ್ಲೆಯಲ್ಲಿ ಬೆಳೆ ನಷ್ಟವಾಗಲು, ಹಸಿರು ನಷ್ಟವಾಗಲು ತೆಲಂಗಾಣ ಜನರ ಕೆಟ್ಟ ದೃಷ್ಟಿ ಕಾರಣ ಎಂದಿದ್ದರು. ಪವನ್ ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

‘ಕೋನಸೀಮ ಹಚ್ಚ ಹಸಿರಿನ ಬೀಡಾಗಿತ್ತು. ಇಲ್ಲಿ ತೆಂಗಿನ ಕೃಷಿ ಅದ್ಭುತವಾಗಿತ್ತು. ತೆಂಗು ಬೆಳೆದುಕೊಂಡು ನೆಮ್ಮದಿಯಿಂದ ಇದ್ದರು ಇಲ್ಲಿಯ ಜನ. ಎರಡು ರಾಜ್ಯಗಳು ಬೇರೆ ಆಗಲು ಸಹ ಇಲ್ಲಿನ ಹಚ್ಚ ಹಸಿರು, ಸಮೃದ್ಧ ಕೃಷಿಯೇ ಕಾರಣವಾಯ್ತು. ಅದರಂತೆ ಇಲ್ಲಿನ ತೆಂಗು ಬೆಳೆ ತೆಲಂಗಾಣ ಜನ, ನಾಯಕರ ಕಣ್ಣು ಕುಕ್ಕಿತು. ಅವರ ಕೆಟ್ಟ ದೃಷ್ಟಿ ಬಿದ್ದು ತೆಂಗು ಕೃಷಿ ಎಂಬುದೇ ಇಲ್ಲವಾಗಿದೆ. ಇಲ್ಲಿನ ಹಸಿರು ಸಹ ಮಾಯ ಆಗಿಬಿಟ್ಟಿದೆ’ ಎಂದು ಪವನ್ ಕಲ್ಯಾಣ್ ಹೇಳಿದ್ದರು.

ಇದನ್ನೂ ಓದಿ:ಅರ್ಧಕ್ಕೆ ನಿಂತು ಹೋಯ್ತು ಪವನ್ ಕಲ್ಯಾಣ್ ನಟನೆಯ ಸಿನಿಮಾ

ಪವನ್ ಹೇಳಿಕೆಗೆ ತೆಲಂಗಾಣದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಆಡಿತಾರೂಢ ಕಾಂಗ್ರೆಸ್, ವಿಪಕ್ಷವಾದ ಬಿಆರ್​​ಎಸ್ ಇನ್ನೂ ಕೆಲವು ರಾಜಕೀಯ ಪಕ್ಷಗಳು ಪವನ್ ಕಲ್ಯಾಣ್ ಹೇಳಿಕೆಯನ್ನು ಖಂಡಿಸಿದ್ದು, ಕ್ಷಮೆಗೆ ಆಗ್ರಹಿಸಿವೆ. ಇದರ ಜೊತೆಗೆ ಹಾಲಿ ಸಿನಿಮಾಟೊಗ್ರಫಿ ಸಚಿವ ಕೊಮಟಿ ರೆಡ್ಡಿ ಮಾತನಾಡಿ, ‘ಪವನ್ ಕಲ್ಯಾಣ್ ಅವರು ತೆಲಂಗಾಣ ಜನರ ಬಳಿ ಬಹಿರಂಗ ಕ್ಷಮೆ ಕೇಳಬೇಕು, ಇಲ್ಲವಾದರೆ ಅವರ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ’ ಎಂದಿದ್ದಾರೆ.

‘ಪವನ್ ಕಲ್ಯಾಣ್, ಅಜ್ಞಾನದ ಮಾತುಗಳನ್ನಾಡಿದ್ದಾರೆ. ಅವರಿಗೆ ರಾಜಕೀಯ ಪ್ರಬುದ್ಧತೆ ಇಲ್ಲ’ ಎಂದಿರುವ ಸಚಿವ ಕೊಮಟಿ ರೆಡ್ಡಿ, ‘ಪವನ್ ಅವರ ಸಹೋದರ ಚಿರಂಜೀವಿ ಅದ್ಭುತವಾದ ವ್ಯಕ್ತಿ, ಅವರಾದರೂ ಸಹೋದರನಿಗೆ ಬುದ್ಧಿ ಹೇಳಬೇಕು’ ಎಂದಿದ್ದಾರೆ. ಕಾಂಗ್ರೆಸ್ ಮುಖಂಡರೊಬ್ಬರು ಮಾತನಾಡಿ, ‘ತೆಲಂಗಾಣದ ಜನರೇ ಪವನ್ ಕಲ್ಯಾಣ್ ಸಿನಿಮಾಗಳನ್ನು ಹೆಚ್ಚು ನೋಡುವುದು, ಆದರೆ ಈಗ ಅದೇ ಅಹಂಕಾರದಿಂದ ತೆಲಂಗಾಣ ಜನರ ವಿರುದ್ಧ ಪವನ್ ಮಾತನಾಡಿದ್ದಾರೆ. ಅಸಲಿಗೆ ಅವರು ಹಾಗೂ ಅವರ ಕುಟುಂಬ ವಾಸಿಸುತ್ತಿರುವುದೇ ತೆಲಂಗಾಣಕ್ಕೆ ಸೇರಿದ ಹೈದರಾಬಾದ್​​ನಲ್ಲಿ. ಅವರು ಕೂಡಲೇ ಕ್ಷಮೆ ಕೇಳಬೇಕು, ಇಲ್ಲವಾದರೆ ತಮ್ಮ ಕುಟುಂಬ ಸಮೇತ ತೆಲಂಗಾಣ ಬಿಟ್ಟು ಹೊರಡಬೇಕು’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ