AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ರಿಲೀಸ್​ಗೂ ಮೊದಲೇ ಪವನ್​ ಕಲ್ಯಾಣ್​ಗೆ ಶಾಕ್​ ಮೇಲೆ ಶಾಕ್​

ಇತ್ತೀಚೆಗೆ ಚಿತ್ರತಂಡ ವಕೀಲ್​ ಸಾಬ್​ ಚಿತ್ರದ ಟ್ರೇಲರ್​ ರಿಲೀಸ್​ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ಸಾಕಷ್ಟು ಜನರು ಸೇರಿದ್ದರು ಎನ್ನುವ ವಿಚಾರ ಚರ್ಚೆಗೆ ಕಾರಣವಾಗಿತ್ತು.

ಸಿನಿಮಾ ರಿಲೀಸ್​ಗೂ ಮೊದಲೇ ಪವನ್​ ಕಲ್ಯಾಣ್​ಗೆ ಶಾಕ್​ ಮೇಲೆ ಶಾಕ್​
ನಟ ಪವನ್ ಕಲ್ಯಾಣ್
ರಾಜೇಶ್ ದುಗ್ಗುಮನೆ
|

Updated on: Apr 02, 2021 | 7:47 PM

Share

ಪವನ್​ ಕಲ್ಯಾಣ್​ ಹಲವು ವರ್ಷಗಳ ನಂತರ ಸಿನಿಮಾ ರಂಗಕ್ಕೆ ಕಂಬ್ಯಾಕ್​ ಮಾಡುತ್ತಿದ್ದಾರೆ. ಅವರ ನಟನೆಯ ‘ವಕೀಲ್​ ಸಾಬ್​’ ಸಿನಿಮಾ ಇದೇ ಏಪ್ರಿಲ್​ 9ಕ್ಕೆ ರಿಲೀಸ್​ ಆಗಲಿದ್ದು, ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹೀಗಿರುವಾಗ ಚಿತ್ರತಂಡಕ್ಕೆ ಶಾಕ್​ ಮೇಲೆ ಶಾಕ್​ ಎದುರಾಗಿದೆ. ಯಾವುದೂ ಅಂದುಕೊಂಡಂತೆ ನಡೆಯುತ್ತಿಲ್ಲ ಎನ್ನುವ ಕೊರಗು ಚಿತ್ರತಂಡಕ್ಕೆ ಅತೀವವಾಗಿ ಕಾಡಿದೆ. ಟಾಲಿವುಡ್​ನಲ್ಲಿ ಪ್ರತಿ ಸಿನಿಮಾ ತೆರೆಕಾಣುವಾಗ ಪ್ರಿ-ರಿಲೀಸ್​ ಕಾರ್ಯಕ್ರಮ ಮಾಡಲಾಗುತ್ತದೆ. ಅದ್ದೂರಿಯಾಗಿ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ವಕೀಲ್​ ಸಾಬ್​ ಸಿನಿಮಾ ತಂಡ ಕೂಡ ಇದೇ ಆಲೋಚನೆ ಹಾಕಿಕೊಂಡಿತ್ತು. ಹೈದರಾಬಾದ್​ನಲ್ಲಿ ಪ್ರೀ-ರಿಲೀಸ್​ ಇವೆಂಟ್​ ನಡೆಸಬೇಕು ಎಂಬುದು ವಕೀಲ್​ ಸಾಬ್​ ತಂಡದ ನಿರ್ಧಾರವಾಗಿತ್ತು. ಆದರೆ, ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸರ್ಕಾರ ಒಪ್ಪಿಗೆ ನೀಡಿಲ್ಲ ಎನ್ನಲಾಗಿದೆ.

ಇತ್ತೀಚೆಗೆ ಚಿತ್ರತಂಡ ವಕೀಲ್​ ಸಾಬ್​ ಚಿತ್ರದ ಟ್ರೇಲರ್​ ರಿಲೀಸ್​ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ಸಾಕಷ್ಟು ಜನರು ಸೇರಿದ್ದರು ಎನ್ನುವ ವಿಚಾರ ಚರ್ಚೆಗೆ ಕಾರಣವಾಗಿತ್ತು. ಟ್ರೇಲರ್​ ರಿಲೀಸ್​ ವೇಳೆ ಕೊರೊನಾ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಲಾಗಿದೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗಿತ್ತು.

ಇನ್ನು, ಆಂಧ್ರ ಪ್ರದೇಶದಲ್ಲಿ ಮುಂಜಾನೆ 6 ಗಂಟೆಯಿಂದಲೇ ಸಿನಿಮಾ ರಿಲೀಸ್​ ಮಾಡುವ ಆಲೋಚನೆ ಚಿತ್ರತಂಡಕ್ಕೆ ಇತ್ತು. ಒಂದು ದಿನಕ್ಕೆ ಐದು ಆಟಗಳನ್ನು ಪ್ರದರ್ಶನ ಮಾಡಲು ನಿರ್ಧಾರ ಮಾಡಲಾಗಿದೆ. ಆದರೆ, ಕೊರೊನಾ ಪ್ರಕರಣ ಹೆಚ್ಚುತ್ತಿವೆ. ಒಂದೊಮ್ಮೆ ಮುಂಜಾನೆ ಶೋಗೆ ಅವಕಾಶ ನೀಡಿದರೆ, ಹೆಚ್ಚಿನ ಸಂಖ್ಯೆಯಲ್ಲಿ ಫ್ಯಾನ್ಸ್ ಸೇರುತ್ತಾರೆ. ಇದರಿಂದ ಕೊರೊನಾ ಹೆಚ್ಚುವ ಸಾಧ್ಯತೆ ಇದೆ ಎಂದು ತಜ್ಞರು ಆತಂಕ ಹೊರ ಹಾಕಿದ್ದಾರೆ. ಹೀಗಾಗಿ ಸ್ಪೆಷಲ್​ ಶೋಗಳಿಗೆ ಬ್ರೇಕ್​ ಹಾಕಲಾಗಿದೆ.

ಹಿಂದಿಯಲ್ಲಿ ತೆರೆಕಂಡಿದ್ದ ಪಿಂಕ್​ ಸಿನಿಮಾದ ರಿಮೇಕ್​ ವಕೀಲ್​ ಸಾಬ್​ ಚಿತ್ರ. ಮೂಲ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಮಾಡಿದ ಪಾತ್ರವನ್ನು ಈಗ ಪವನ್ ಕಲ್ಯಾಣ್ ನಿಭಾಯಿಸಿದ್ದಾರೆ. ವೇಣು ಶ್ರೀರಾಮ್​ ತೆಲುಗಿಗೆ ರಿಮೇಕ್​ ಮಾಡಿದ್ದಾರೆ. ಪವನ್​ ಕಲ್ಯಾಣ್​ ಹಾಗೂ ಪ್ರಕಾಶ್​ ರೈ ವಕೀಲರಾಗಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್​ 09ರಂದು ಸಿನಿಮಾ ತೆರೆಗೆ ಬರುತ್ತಿದೆ. ಸದ್ಯ ಟ್ರೇಲರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ನಿವೇತಾ ಥಾಮಸ್, ಅಂಜಲಿ, ಅನನ್ಯಾ, ಪ್ರಕಾಶ್ ರೈ ಮುಂತಾದವರು ಮುಖ್ಯಪಾತ್ರಗಳನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ: ಚಿತ್ರಮಂದಿರಕ್ಕೆ ಏಕಾಏಕಿ ಪ್ರವೇಶ ನಿರ್ಬಂಧಿಸಿದರೆ ನಾವೇನು ಮಾಡಬೇಕು?; ಸರ್ಕಾರದ ಕ್ರಮಕ್ಕೆ ಪುನೀತ್​ ಬೇಸರ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ