‘ಎನ್​​ಡಿಎ ಬಿಟ್ಟು ಹೋಗುವ ಮಾತೇ ಇಲ್ಲ’; ವದಂತಿಗಳಿಗೆ ತೆರೆ ಎಳೆದ ಪವನ್ ಕಲ್ಯಾಣ್

ಪವನ್ ಕಲ್ಯಾಣ್ ಅವರು ಸದ್ಯ ಮೊದಲ ಗೆಲುವಿನ ಖುಷಿಯಲ್ಲಿದ್ದಾರೆ. ‘ಇದು ಐತಿಹಾಸಿಕ ತೀರ್ಪಿನ ದಿನ. ನಾವು ಆಂಧ್ರಪ್ರದೇಶದ ಜನರಿಗೆ ಜವಾಬ್ದಾರಿಯುತ ಸರ್ಕಾರ ನೀಡಲು ಬದ್ಧರಾಗಿದ್ದೇವೆ. ಎನ್​ಡಿಎ ಸರ್ಕಾರ ಅದನ್ನು ಗೌರವಿಸುತ್ತದೆ’ ಎಂದು ಪವನ್ ಕಲ್ಯಾಣ್ ಅವರು ಸಾರ್ವಜನಿಕವಾಗಿ ಹೇಳಿದ್ದಾರೆ.

‘ಎನ್​​ಡಿಎ ಬಿಟ್ಟು ಹೋಗುವ ಮಾತೇ ಇಲ್ಲ’; ವದಂತಿಗಳಿಗೆ ತೆರೆ ಎಳೆದ ಪವನ್ ಕಲ್ಯಾಣ್
ಮೋದಿ-ಪವನ್ ಕಲ್ಯಾಣ್
Follow us
|

Updated on: Jun 05, 2024 | 7:30 AM

ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಚುನಾವಣೆಯಲ್ಲಿ ಮೊದಲ ಗೆಲುವು ಕಂಡಿದ್ದಾರೆ. ವಿಧಾನಸಭೆಯಲ್ಲಿ ಅವರ ಪಕ್ಷಕ್ಕೆ ನೀಡಿದ 21 ಕ್ಷೇತ್ರಗಳಲ್ಲಿ 21 ಕ್ಷೇತ್ರ, ಲೋಕಸಭೆಯಲ್ಲಿ ನೀಡಿದ ಎರಡಕ್ಕೆ ಎರಡು ಸ್ಥಾನಗಳನ್ನು ಗೆದ್ದಿದೆ. ಎನ್​​ಡಿಎ (NDA Alliance) ಜೊತೆ ಸೇರಿ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಈ ಗೆಲುವಿನ ಬಳಿಕ ಪವನ್ ಕಲ್ಯಾಣ್ ಅವರು ಖುಷಿ ಖುಷಿಯಿಂದ ಮಾತನಾಡಿದ್ದಾರೆ. ಎನ್​ಡಿಎ ಮೈತ್ರಿ ತೊರೆಯುವ ಮಾತೇ ಇಲ್ಲ ಎಂದಿದ್ದಾರೆ ಅವರು.

‘ಸಿಎನ್​​ಎನ್​-ನ್ಯೂಸ್ 18’ ಇಂಗ್ಲಿಷ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಪವನ್​ ಕಲ್ಯಾಣ್, ‘ಪ್ರಧಾನಿ ಮೋದಿ ಜೊತೆ ಮಾತುಕತೆ ನಡೆದಿಲ್ಲ.  ನಾವು ಎನ್​ಡಿಎ ಜೊತೆ ಸಂಪೂರ್ಣವಾಗಿ ಕಮಿಟ್ ಆಗಿದ್ದೇವೆ. ಎರಡನೇ ಆಲೋಚನೆಯೇ ಇಲ್ಲ’ ಎಂದಿದ್ದಾರೆ ಪವನ್ ಕಲ್ಯಾಣ್. ಚಂದ್ರಬಾಬು ನಾಯ್ಡು ಅವರ ಟಿಡಿಪಿ, ಪವನ್ ಕಲ್ಯಾಣ್ ಅವರ ಜನ ಸೇನಾ ಪಕ್ಷ, ಬಿಜೆಪಿ ಮೈತ್ರಿಯೊಂದಿಗೆ ಸ್ಪರ್ಧಿಸಿತ್ತು.

‘ಇದು ಐತಿಹಾಸಿಕ ತೀರ್ಪಿನ ದಿನ. ನಾವು ಆಂಧ್ರಪ್ರದೇಶದ ಜನರಿಗೆ ಜವಾಬ್ದಾರಿಯುತ ಸರ್ಕಾರ ನೀಡಲು ಬದ್ಧರಾಗಿದ್ದೇವೆ. ಎನ್​ಡಿಎ ಸರ್ಕಾರ ಅದನ್ನು ಗೌರವಿಸುತ್ತದೆ’ ಎಂದು ಪವನ್ ಕಲ್ಯಾಣ್ ಅವರು ಸಾರ್ವಜನಿಕವಾಗಿ ಹೇಳಿದ್ದಾರೆ. ಪವನ್ ಕಲ್ಯಾಣ್ ಅವರು ಸದ್ಯ ಮೊದಲ ಗೆಲುವಿನ ಖುಷಿಯಲ್ಲಿದ್ದಾರೆ.

ಇದನ್ನೂ ಓದಿ: ಚುನಾವಣೆಯಲ್ಲಿ ಗೆದ್ದ ಪವನ್ ಕಲ್ಯಾಣ್​ಗೆ ಪತ್ನಿಯಿಂದ ವೀರತಿಲಕ

ಪವನ್ ಕಲ್ಯಾಣ್ ಅವರು ಚುನಾವಣೆ ಗೆದ್ದ ಬಳಿಕ ಎಲ್ಲರೂ ಅವರಿಗೆ ಶುಭಾಶಯ ಕೋರುತ್ತಿದ್ದಾರೆ. ಪೀಠಾಪುರಂ ಕ್ಷೇತ್ರದಿಂದ ಸ್ಪರ್ಧಿಸಿ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಬ್ಯುಸಿ ಆದರೆ ಅವರು ಸಿನಿಮಾ ಮಾಡುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ