AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nora Fatehi: ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟಿ ನೋರಾ ಫತೇಹಿ  

ಸುಕೇಶ್​ ಚಂದ್ರಶೇಖರ್​ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ನೋರಾ ಫತೇಹಿ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿತ್ತು.

Nora Fatehi: ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟಿ ನೋರಾ ಫತೇಹಿ  
ನಟಿ ನೋರಾ ಫತೇಹಿ, ನಟಿ ಜಾಕ್ವೆಲಿನ್​ ಫರ್ನಾಂಡಿಸ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 12, 2022 | 6:35 PM

Share

ನಟಿ ನೋರಾ ಫತೇಹಿ (Nora Fatehi) ಅವರು ವಿದೇಶಿ ಮೂಲದವರಾದರು ಕೂಡ ನಟನೆ, ಡ್ಯಾನ್ಸ್​ ಮೂಲಕ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿರುವವರು. ತಮ್ಮದೇ ಆದ ಫ್ಯಾನ್ಸ್​ ಬಳಗವನ್ನು ಅವರು ಹೊಂದಿದ್ದಾರೆ. ಸಾಕಷ್ಟು ಬಾಲಿವುಡ್​ ಚಿತ್ರಗಳಲ್ಲಿಯೂ ನೋರಾ ಫತೇಹಿ ಅವರು ಸದ್ಯ ಬ್ಯುಸಿ ಆಗಿದ್ದಾರೆ. 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಸುಕೇಶ್​ ಚಂದ್ರಶೇಖರ್​ (Sukesh Chandrasekhar) ಜೊತೆ ಸಂಪರ್ಕ ಹೊಂದಿದ್ದ ಕಾರಣಕ್ಕೆ ಇತ್ತೀಚೆಗೆ ನೋರಾ ಫತೇಹಿ ಕೂಡ ತನಿಖೆಗೆ ಒಳಗಾಗಿದ್ದರು. ಆದರೆ ಇದೀಗ ನಟಿ ಜಾಕ್ವೆಲಿನ್​ ಫರ್ನಾಂಡಿಸ್ (Jacqueline Fernandez) ವಿರುದ್ಧ ನೋರಾ ಫತೇಹಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಜಾಕ್ವೆಲಿನ್ ಫರ್ನಾಂಡಿಸ್​ ಅವರು ದುರುದ್ದೇಶಪೂರಿತ ಕಾರಣಗಳನ್ನು ನೀಡಿ ತನ್ನ ವಿರುದ್ಧ ಮಾನಹಾನಿಕರ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ನೋರಾ ಫತೇಹಿ ಆರೋಪಿಸಿದ್ದಾರೆ.

ನೋರಾ ಫತೇಹಿ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್​ ಮೂಲತಃ ವಿದೇಶಿಗರಾಗಿದ್ದು, ಇಬ್ಬರೂ ಬಾಲಿವುಡ್​ ಇಂಡಸ್ಟ್ರಿಯಲ್ಲಿ ತಮ್ಮದೆ ಚಾರ್ಮ್​ ಮೂಡಿಸಿದ್ದಾರೆ. ಆದರೆ ಜಾಕ್ವೆಲಿನ್ ಫರ್ನಾಂಡಿಸ್ ಅವರು ತಮ್ಮ ಸ್ವಹಿತಾಸಕ್ತಿಗಳನ್ನು ಸಾಧಿಸುವ ಸಲುವಾಗಿ ತಮ್ಮ ಸಹ ಕಲಾವಿದರ ವೃತ್ತಿಜೀವನವನ್ನು ಹಾನಿ ಮಾಡುತ್ತಿದ್ದಾರೆ ಎಂದು ನೋರಾ ಫತೇಹಿ ಅವರು ಮನವಿಯಲ್ಲಿ ಉಲೇಖಿಸಿದ್ದಾರೆ. ಸುಕೇಶ್​ ಚಂದ್ರಶೇಖರ್​ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ನೋರಾ ಫತೇಹಿ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿತ್ತು.

ಇದನ್ನೂ ಓದಿ: Nora Fatehi: 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಇಡಿ ತನಿಖೆಗೆ ಹಾಜರಾದ ನಟಿ ನೋರಾ ಫತೇಹಿ

ಸುಕೇಶ್​ ಚಂದ್ರಶೇಖರ್​ ಉದ್ಯಮಿಗಳಿಂದ ಪಡೆದುಕೊಂಡ ಹಣವನ್ನು ತಂದು, ಅದರಿಂದ ನಟಿಯರಿಗೆ ದುಬಾರಿ ಉಡುಗೊರೆಗಳನ್ನು ನೀಡಿದ್ದರು. ನೋರಾ ಫತೇಹಿ ಕೂಡ ಅವರಿಂದ ಗಿಫ್ಟ್​ ಪಡೆದಿದ್ದರು ಎಂಬ ಮಾತು ಕೇಳಿಬಂದಿತ್ತು. ಆದರೆ ನಟಿ ನೋರಾ ಫತೇಹಿ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದು, ಜೊತೆಗೆ ಈ ವಿಷಯಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಸುಕೇಶ್ ಚಂದ್ರಶೇಖರ್ ಅವರ ಪತ್ನಿ ಲೀನಾ ಮರಿಯಾ ಪಾಲ್ ಮೂಲಕ ಮಾತ್ರ ತನಗೆ ಪರಿಚಯವಿದ್ದು, ನೇರವಾಗಿ ಯಾವುದೇ ಸಂಪರ್ಕವಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ

ನೋರಾ ಫತೇಹಿ ಅವರು ಅತ್ಯುತ್ತಮ ಡ್ಯಾನ್ಸರ್​. ಹಿಂದಿ ಸಿನಿಮಾಗಳಲ್ಲಿ ಐಟಂ ಡ್ಯಾನ್ಸ್ ಮಾಡುವ ಮೂಲಕ ಅವರು ವಿಶ್ವಾದ್ಯಂತ ಜನಪ್ರಿಯತೆ ಗಳಿಸಿದ್ದಾರೆ. ಅವರು ಹೆಜ್ಜೆ ಹಾಕಿದ ಎಲ್ಲ ಹಾಡುಗಳು ಕೋಟಿಗಟ್ಟಲೆ ವೀವ್ಸ್​ ಪಡೆದುಕೊಂಡಿವೆ. ನೋರಾ ಫತೇಹಿ ಡ್ಯಾನ್ಸ್ ಮಾಡಿದರೆ ಆ ಹಾಡು ಖಂಡಿತಾ ಸೂಪರ್​ ಹಿಟ್​ ಆಗುತ್ತದೆ ಎಂಬ ನಂಬಿಕೆ ಬಾಲಿವುಡ್​ ವಲಯದಲ್ಲಿದೆ. ಪ್ರತಿ ಹಾಡಿಗೆ ನೋರಾ ಫತೇಹಿ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಸಿನಿಮಾ ಮಾತ್ರವಲ್ಲದೇ ಅವರು ಕಿರುತೆರೆಯಲ್ಲೂ ಬ್ಯುಸಿ ಆಗಿದ್ದಾರೆ. ಕೆಲವು ರಿಯಾಲಿಟಿ ಶೋಗಳಲ್ಲಿ ನಿರ್ಣಾಯಕಿಯಾಗಿ ಕೆಲಸ ಮಾಡಿ ಗಮನ ಸೆಳೆದಿದ್ದಾರೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 6:32 pm, Mon, 12 December 22