ಸಲ್ಲು, ಶಾರುಖ್ ಅಲ್ಲ; ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯೋ ಹೀರೋ ಅಲ್ಲು ಅರ್ಜುನ್

ಬಾಲಿವುಡ್​ನಲ್ಲಿ ಸಲ್ಮಾನ್ ಖಾನ್, ಶಾರುಖ್ ಖಾನ್ ಇದ್ದಾರೆ. ತಮಿಳಿನಲ್ಲಿ ದಳಪತಿ ವಿಜಯ್, ರಜನಿಕಾಂತ್ ಇದ್ದಾರೆ. ಇವರ ಕಾಲ್​ಶೀಟ್ ಬೇಕು ಎಂದರೆ 100 ಕೋಟಿ ರೂಪಾಯಿಗಿಂತ ಹೆಚ್ಚು ಹಣ ಕೊಟ್ಟು ಕಾಲ್​ಶೀಟ್ ಪಡೆಯಬೇಕು. ಈಗ ಫೋರ್ಬ್ಸ್ ಇಂಡಿಯಾ ವರದಿ ಬಂದಿದ್ದು ಅಲ್ಲು ಅರ್ಜುನ್ ಸಂಭಾವನೆ ವಿಚಾರ ಹೊರ ಬಿದ್ದಿದೆ.

ಸಲ್ಲು, ಶಾರುಖ್ ಅಲ್ಲ; ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯೋ ಹೀರೋ ಅಲ್ಲು ಅರ್ಜುನ್
ಅಲ್ಲು ಅರ್ಜುನ್-ಶಾರುಖ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Nov 27, 2024 | 9:19 AM

ಟಾಲಿವುಡ್​ನಲ್ಲಿ ಅಲ್ಲು ಅರ್ಜುನ್​ಗೆ ಇರುವ ಬೇಡಿಕೆ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಇವರು ಸ್ಟಾರ್ ಹೀರೋ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಇವರು ನೀಡಿದ್ದಾರೆ. ಇವರು ತೆಗೆದುಕೊಳ್ಳುವ ಸಂಭಾವನೆ ಬಗ್ಗೆ ಅನೇಕರಿಗೆ ಗೊಂದಲ ಇತ್ತು. ಇವರ ಸಂಭಾವನೆಯನ್ನು ಕೆಲವರು 50 ಕೋಟಿ ರೂಪಾಯಿ ಎಂದು ಹೇಳಿದರೆ ಇನ್ನೂ ಕೆಲವು 100 ಕೋಟಿ ರೂಪಾಯಿ ಎಂದು ಹೇಳಿದ್ದರು. ಆದರೆ, ಇದೆಲ್ಲವೂ ಸುಳ್ಳು ಅನ್ನೋದು ಗೊತ್ತಾಗಿದೆ. ಅಲ್ಲು ಅರ್ಜುನ್ ಅವರು ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಹೀರೋ ಆಗಿದ್ದಾರೆ. ಅವರ ಸಂಭಾವನೆ ಕೇಳಿ ಅನೇಕರಿಗೆ ಶಾಕ್ ಆಗಿದೆ.

ಬಾಲಿವುಡ್​ನಲ್ಲಿ ಸಲ್ಮಾನ್ ಖಾನ್, ಶಾರುಖ್ ಖಾನ್ ಇದ್ದಾರೆ. ತಮಿಳಿನಲ್ಲಿ ದಳಪತಿ ವಿಜಯ್, ರಜನಿಕಾಂತ್ ಇದ್ದಾರೆ. ಇವರ ಕಾಲ್​ಶೀಟ್ ಬೇಕು ಎಂದರೆ 100 ಕೋಟಿ ರೂಪಾಯಿಗಿಂತ ಹೆಚ್ಚು ಹಣ ಕೊಟ್ಟು ಕಾಲ್​ಶೀಟ್ ಪಡೆಯಬೇಕು. ಈಗ ಫೋರ್ಬ್ಸ್ ಇಂಡಿಯಾ ವರದಿ ಮಾಡಿರುವ ಪ್ರಕಾರ ಅಲ್ಲು ಅರ್ಜುನ್ ಅವರು ಪ್ರತಿ ಚಿತ್ರಕ್ಕೆ 300 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರಂತೆ.

ಅಲ್ಲು ಅರ್ಜುನ್ ಸಂಭಾವನೆ ವಿಚಾರದಲ್ಲಿ ಶಾರುಖ್ ಖಾನ್, ಸಲ್ಮಾನ್ ಖಾನ್, ದಳಪತಿ ವಿಜಯ್, ರಜನಿಕಾಂತ್ ಅವರನ್ನು ಮೀರಿಸಿದ್ದಾರೆ. ವಿಜಯ್ ಅವರು ಕೊನೆಯ ಚಿತ್ರಕ್ಕಾಗಿ 250 ಕೋಟಿ ರೂಪಾಯಿಗೂ ಅಧಿಕ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಆದರೆ, ಅಲ್ಲು ಅರ್ಜುನ್ ಅವರು ಈ ಎಲ್ಲವನ್ನೂ ಮೀರಿಸಿದ್ದಾರೆ. ಅವರು ಈ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿ ಇದ್ದಾರೆ.

ಶಾರುಖ್ ಖಾನ್ ಅವರು ಪ್ರತಿ ಚಿತ್ರಕ್ಕೆ 150ರಿಂದ 250 ಕೋಟಿ ರೂಪಾಯಿ ಪಡೆಯುತ್ತಾರೆ. ಅವರು ಈ ಸಾಲಿನಲ್ಲಿ ಮೂರನೇ ಸ್ಥಾನದಲ್ಲಿ ಇದ್ದಾರೆ. ನಾಲ್ಕು ಹಾಗೂ ಐದನೇ ಸ್ಥಾನದಲ್ಲಿ ಅನುಕ್ರಮವಾಗಿ ರಜನಿಕಾಂತ್ (125-200 ಕೋಟಿ ರೂಪಾಯಿ) ಹಾಗೂ ಆಮಿರ್ ಖಾನ್ (100-200 ಕೋಟಿ ರೂಪಾಯಿ) ಇದ್ದಾರೆ. ಆರನೇ ಸ್ಥಾನದಲ್ಲಿರುವ ಪ್ರಭಾಸ್ ಅವರು 100 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಆ ಬಳಿಕ ಅಜಿತ್ ಕುಮಾರ್, ಸಲ್ಮಾನ್ ಖಾನ್, ಕಮಲ್ ಹಾಸನ್ ಹಾಗೂ ಅಕ್ಷಯ್ ಕುಮಾರ್ ಇದ್ದಾರೆ. ಟಾಪ್ 10 ಪೈಕಿ ಆರು ಹೀರೋಗಳು ಇದ್ದಾರೆ.

ಇದನ್ನೂ ಓದಿ: ‘ನನಗೆ ಯಾರೂ ಸಿನಿಮಾ ಆಫರ್ ಮಾಡಿರಲಿಲ್ಲ’; ಸುಕುಮಾರ್ ಸಹಾಯ ನೆನೆದ ಅಲ್ಲು ಅರ್ಜುನ್

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರ 1000 ಕೋಟಿ ರೂಪಾಯಿ ಕ್ಲಬ್ ಸೇರುವ ನಿರೀಕ್ಷೆ ಇದೆ. ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ಇದ್ದಾರೆ. ಸುಕುಮಾರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಒಂದಿಬ್ಬರ ನಡುವಿನ ಜಗಳ ಪಕ್ಷದ ಕಲಹ ಆಗಲಾರದು: ರಾಧಾ ಮೋಹನ್ ದಾಸ್ ಅಗರವಾಲ್
ಒಂದಿಬ್ಬರ ನಡುವಿನ ಜಗಳ ಪಕ್ಷದ ಕಲಹ ಆಗಲಾರದು: ರಾಧಾ ಮೋಹನ್ ದಾಸ್ ಅಗರವಾಲ್
Video: ಅಪಘಾತದ ಬಳಿಕ ಹೊತ್ತಿ ಉರಿದ ಕಾರುಗಳು, ಓರ್ವ ಸಾವು
Video: ಅಪಘಾತದ ಬಳಿಕ ಹೊತ್ತಿ ಉರಿದ ಕಾರುಗಳು, ಓರ್ವ ಸಾವು
ತೆಲಂಗಾಣದಲ್ಲಿ ಪ್ರಬಲ ಭೂಕಂಪ, ವಿಡಿಯೋ ಇಲ್ಲಿದೆ
ತೆಲಂಗಾಣದಲ್ಲಿ ಪ್ರಬಲ ಭೂಕಂಪ, ವಿಡಿಯೋ ಇಲ್ಲಿದೆ
ಸಚಿನ್ ತೆಂಡೂಲ್ಕರ್ ಮುಂದೆ ಅಸಹಾಯಕತೆ ತೋಡಿಕೊಂಡ ವಿನೋದ್ ಕಾಂಬ್ಳಿ
ಸಚಿನ್ ತೆಂಡೂಲ್ಕರ್ ಮುಂದೆ ಅಸಹಾಯಕತೆ ತೋಡಿಕೊಂಡ ವಿನೋದ್ ಕಾಂಬ್ಳಿ
ವೀಳ್ಯದೆಲೆ ಗಿಡ ಮನೆಯಲ್ಲಿ ಇದ್ದರೆ ಏನೆಲ್ಲಾ ಲಾಭವಾಗುತ್ತದೆ? ವಿಡಿಯೋ ನೋಡಿ
ವೀಳ್ಯದೆಲೆ ಗಿಡ ಮನೆಯಲ್ಲಿ ಇದ್ದರೆ ಏನೆಲ್ಲಾ ಲಾಭವಾಗುತ್ತದೆ? ವಿಡಿಯೋ ನೋಡಿ
ಸಣ್ಣ ವಿವಾದ, ಬೈಕ್ ಸವಾರನನ್ನು ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ಚಾಲಕ
ಸಣ್ಣ ವಿವಾದ, ಬೈಕ್ ಸವಾರನನ್ನು ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ಚಾಲಕ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಇಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಇಡೇರಲಿವೆ
ಬೆನ್ನಿಗೆ ವ್ಯಾಯಾಮ ನೀಡುವ ಯೋಗಾಸನ ಕಲಿಸಿದ ಶಿಲ್ಪಾ ಶೆಟ್ಟಿ; ವಿಡಿಯೋ ನೋಡಿ..
ಬೆನ್ನಿಗೆ ವ್ಯಾಯಾಮ ನೀಡುವ ಯೋಗಾಸನ ಕಲಿಸಿದ ಶಿಲ್ಪಾ ಶೆಟ್ಟಿ; ವಿಡಿಯೋ ನೋಡಿ..
ಜಗದಾಂಬಿಕಾ ಪಾಲ್​​ ಭೇಟಿಯಾದ ಯತ್ನಾಳ್​​ ಟೀಂ: ಏನೆಲ್ಲಾ ಚರ್ಚೆ ಆಯ್ತು?
ಜಗದಾಂಬಿಕಾ ಪಾಲ್​​ ಭೇಟಿಯಾದ ಯತ್ನಾಳ್​​ ಟೀಂ: ಏನೆಲ್ಲಾ ಚರ್ಚೆ ಆಯ್ತು?
ಮುಂಬೈನ ಬಾಂದ್ರಾದಲ್ಲಿ ಪೈಪ್‌ಲೈನ್ ಒಡೆದು 50 ಅಡಿ ಎತ್ತರಕ್ಕೆ ಹಾರಿದ ನೀರು
ಮುಂಬೈನ ಬಾಂದ್ರಾದಲ್ಲಿ ಪೈಪ್‌ಲೈನ್ ಒಡೆದು 50 ಅಡಿ ಎತ್ತರಕ್ಕೆ ಹಾರಿದ ನೀರು