AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​ಟಿಆರ್-ನೀಲ್ ಸಿನಿಮಾ ರಿಲೀಸ್ ದಿನಾಂಕ ಘೋಷಣೆ; ಅಭಿಮಾನಿಗಳಿಗೆ ಬೇಸರ

ಜೂನಿಯರ್ ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ಚಿತ್ರ 2027ರ ಜೂನ್ 11ರಂದು ತೆರೆಗೆ ಬರಲಿದೆ. ಇದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. ಹಲವು ವರ್ಷಗಳ ಹಿಂದೆ ಘೋಷಣೆಯಾಗಿದ್ದ ಈ ಸಿನಿಮಾ ಶೂಟಿಂಗ್ ವಿವಿಧ ಹಂತಗಳಲ್ಲಿ ನಡೆದಿದೆ. ಟೈಟಲ್ ಇನ್ನೂ ಬಹಿರಂಗವಾಗಿಲ್ಲ. ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣದ ಅದ್ದೂರಿ ಬಜೆಟ್ ಚಿತ್ರ ಇದಾಗಿದ್ದು, ಇನ್ನಷ್ಟು ಚಿತ್ರೀಕರಣ ಬಾಕಿ ಇದೆ.

ಎನ್​ಟಿಆರ್-ನೀಲ್ ಸಿನಿಮಾ ರಿಲೀಸ್ ದಿನಾಂಕ ಘೋಷಣೆ; ಅಭಿಮಾನಿಗಳಿಗೆ ಬೇಸರ
ಎನ್​​ಟಿಆರ್
ರಾಜೇಶ್ ದುಗ್ಗುಮನೆ
|

Updated on: Apr 21, 2026 | 12:46 PM

Share

ಜೂನಿಯರ್ ಎನ್​​ಟಿಆರ್ ಹಾಗೂ ಪ್ರಶಾಂತ್ ನೀಲ್ (Prashant Neel) ಸಿನಿಮಾ ಘೋಷಣೆ ಆಗಿದ್ದು ಕೆಲವು ವರ್ಷಗಳ ಹಿಂದೆ. ಆ ಬಳಿಕ, ಸಿನಿಮಾ ಸೆಟ್ಟೇರಲು ಬಹಳ ಸಯಮ ತೆಗೆದುಕೊಂಡಿತು. ಈ ಚಿತ್ರದ ಶೂಟಿಂಗ್ ಆರಂಭ ಆಗಿ ಸಾಕಷ್ಟು ಸಮಯ ಕಳೆದಿದೆ. ಆದರೆ, ಈವರೆಗೆ ಸಿನಿಮಾದ ರಿಲೀಸ್ ದಿನಾಂಕ ಹಾಗೂ ಟೈಟಲ್ ರಿವೀಲ್ ಆಗಿರಲಿಲ್ಲ. ಈಗ ಈ ಚಿತ್ರದ ಬಿಡುಗಡೆ ದಿನಾಂಕವನ್ನು ತಂಡ ಘೋಷಣೆ ಮಾಡಿದೆ. ಈ ಇತ್ರ ಜೂನ್ 11ರಂದು ತೆರೆಗೆ ಬರಲಿದೆ! ಈ ಸಿನಿಮಾಗೆ ಟೈಟಲ್ ಇನ್ನೂ ರಿವೀಲ್ ಆಗಿಲ್ಲ.

ಜೂನ್ 4ರಂದು ‘ಟಾಕ್ಸಿಕ್’ ರಿಲೀಸ್ ಆಗುತ್ತಿದೆ. ಜೂನ್ 11ರಂದು ‘ಎನ್​​ಟಿಆರ್​ನೀಲ್’ ಸಿನಿಮಾ ಬರಲು ಹೇಗೆ ಸಾಧ್ಯ ಎಂಬ ಪ್ರಶ್ನೆ ನಿಮ್ಮದೇ? ಅದಕ್ಕೆ ಉತ್ತರ ಇದೆ. ಎನ್​​ಟಿಆರ್ ನೀಲ್ ಚಿತ್ರ ಈ ವರ್ಷ ಅಲ್ಲ, ಅದು ತೆರೆಗೆ ಬರುತ್ತಿರುವುದು 2027ರ ಜೂನ್ 11ರಂದು. ಅಂದರೆ ಒಂದು ವರ್ಷಗಳಿಗೂ ಅಧಿಕ ಕಾಲ ಈ ಸಿನಿಮಾಗಾಗಿ ಅಭಿಮಾನಿಗಳಿಗೆ ಕಾಯಬೇಕು. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ.

ಪ್ರಶಾಂತ್ ನೀಲ್ ಅವರ ಸಿನಿಮಾ ಶೂಟ್ 2025ರಲ್ಲೇ ಆರಂಭ ಆಗಿದೆ. ವಿವಿಧ ಹಂತಗಳಲ್ಲಿ ಸಿನಿಮಾದ ಶೂಟ್ ಮಾಡಲಾಗಿದೆ. ವಿದೇಶಕ್ಕೂ ತೆರಳಿ ತಂಡ ಶೂಟಿಂಗ್ ಮಾಡಿದೆ. ಇನ್ನೂ ಸಾಕಷ್ಟು ಶೂಟಿಂಗ್ ಬಾಕಿ ಇರಬಹುದು ಎಂದು ಪ್ರೇಕ್ಷಕರು ಊಹಿಸಿದ್ದಾರೆ. ಈ ಕಾರಣದಿಂದಲೇ ಸಿನಿಮಾ ರಿಲೀಸ್ ಮುಂದಿನ ವರ್ಷಕ್ಕೆ ಹೋಗಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಸಿನಿಮಾ ನಿಂತು ಹೋಗಿದೆ ಎಂಬ ವದಂತಿ ಕೂಡ ಈ ಮೊದಲು ಹಬ್ಬಿತ್ತು.

View this post on Instagram

A post shared by Jr NTR (@jrntr)

ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾ ರಿಲೀಸ್ ಆಗಿದ್ದು 2023ರಲ್ಲಿ. ಇದಾದ ಬಳಿಕ ಅವರು ಈ ಚಿತ್ರದ ಕೆಲಸದಲ್ಲಿ ಬ್ಯುಸಿ ಆದರು. ಈಗ ಅವರು ಒಂದು ಚಿತ್ರಕ್ಕೆ ನಾಲ್ಕು ವರ್ಷ ತೆಗೆದುಕೊಂಡಂತೆ ಆಗಲಿದೆ. ಒಂದು ಸಿನಿಮಾಗೆ ಇಷ್ಟು ಸಮಯ ಮೀಸಲಿಟ್ಟರೆ ಹೇಗೆ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಹಾರರ್ ಚಿತ್ರಕ್ಕಾಗಿ ‘ಮೈತ್ರಿ ಮೂವೀ ಮೇಕರ್ಸ್’ ಜೊತೆ ಕೈ ಜೋಡಿಸಿದ ಪ್ರಶಾಂತ್ ನೀಲ್

ಪ್ರಶಾಂತ್ ನೀಲ್-ಎನ್​​​ಟಿಆರ್ ಸಿನಿಮಾಗೆ ‘ಮೈತ್ರಿ ಮೂವೀ ಮೇಕರ್ಸ್’ ಬಂಡವಾಳ ಹೂಡುತ್ತಿದೆ. ಈಗಾಗಲೇ ಅದ್ದೂರಿ ಬಜೆಟ್ ಚಿತ್ರಗಳನ್ನು ನಿರ್ಮಾಣ ಮಾಡಿ ಅವರು ಗಮನ ಸೆಳೆದಿದ್ದಾರೆ. ಈ ಚಿತ್ರ ಕೂಡ ಅದ್ದೂರಿಯಾಗಿರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್