AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೆದ್ದಿ’: ಜಾನ್ಹವಿ ಕಪೂರ್ ಮಾದಕ ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

Janhvi Kapoor: ‘ಪೆದ್ದಿ’ ಸಿನಿಮಾನಲ್ಲಿ ಸಾಕಷ್ಟು ಧನಾತ್ಮಕ ಅಂಶಗಳು, ಒಳ್ಳೆಯ ಸಂದೇಶಗಳು ಇವೆ. ಆದರೆ ಇವೆಲ್ಲವೂ ಇದ್ದಾಗಿಯೂ ಸಹ ಸಿನಿಮಾನಲ್ಲಿ ನಾಯಕಿಯನ್ನು ತೋರಿಸಿರುವ ರೀತಿಯ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದೆ. ನಾಯಕಿ ಜಾನ್ಹವಿ ಕಪೂರ್ ಅವರ ‘ಅಂಗಾಂಗ’ಗಳಿಗೆ ಜೂಮ್ ಹಾಕಿ ಅಶ್ಲೀಲವಾಗಿ ಚಿತ್ರಿಸಲಾಗಿದೆ. ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಇದೀಗ ನಿರ್ದೇಶಕರು ನಾಯಕಿಯ ದೃಶ್ಯಗಳನ್ನು ಕತ್ತರಿಸಲು ನಿರ್ಧರಿಸಿದ್ದಾರೆ.

‘ಪೆದ್ದಿ’: ಜಾನ್ಹವಿ ಕಪೂರ್ ಮಾದಕ ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ
Janhvi Kapoor
ಮಂಜುನಾಥ ಸಿ.
|

Updated on:Jun 06, 2026 | 7:55 PM

Share

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಸಾಕಷ್ಟು ಧನಾತ್ಮಕ ಅಭಿಪ್ರಾಯಗಳು ವ್ಯಕ್ತವಾಗಿವೆ. ಸಿನಿಮಾ ಗ್ರಾಮೀಣ ಭಾಗದ ಕ್ರೀಡಾಪಟುವಿನ ಕತೆಯನ್ನು ಒಳಗೊಂಡಿದೆ. ಯುವಕನೊಬ್ಬ ಕ್ರೀಡೆಯನ್ನು ಬಳಸಿ ಹೇಗೆ ತಮ್ಮ ಹೆಸರಿಲ್ಲದ ಊರಿಗೆ ಗುರುತು ತಂದುಕೊಡುತ್ತಾನೆ ಎಂಬುದು ಸಿನಿಮಾದ ಕತೆ. ಸಿನಿಮಾನಲ್ಲಿ ಸಾಕಷ್ಟು ಧನಾತ್ಮಕ ಅಂಶಗಳು, ಒಳ್ಳೆಯ ಸಂದೇಶಗಳು ಇವೆ. ಆದರೆ ಇವೆಲ್ಲವೂ ಇದ್ದಾಗಿಯೂ ಸಹ ಸಿನಿಮಾನಲ್ಲಿ ನಾಯಕಿಯನ್ನು ತೋರಿಸಿರುವ ರೀತಿಯ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದೆ. ನಾಯಕಿ ಜಾನ್ಹವಿ ಕಪೂರ್ ಅವರ ‘ಅಂಗಾಂಗ’ಗಳಿಗೆ ಜೂಮ್ ಹಾಕಿ ಅಶ್ಲೀಲವಾಗಿ ಚಿತ್ರಿಸಲಾಗಿದೆ. ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಇದೀಗ ನಿರ್ದೇಶಕರು ನಾಯಕಿಯ ದೃಶ್ಯಗಳನ್ನು ಕತ್ತರಿಸಲು ನಿರ್ಧರಿಸಿದ್ದಾರೆ.

ನಾಯಕಿಯನ್ನು ಅತಿಯಾಗಿ ಗ್ಲಾಮರೈಸ್ ಮಾಡಿರುವ ಬಗ್ಗೆ ತೀವ್ರ ಟೀಕೆ ವ್ಯಕ್ತವಾದ ಬೆನ್ನಲ್ಲೆ ನಿರ್ದೇಶಕ ಬುಚ್ಚಿಬಾಬು ಸನಾ ಸುದೀರ್ಘ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ‘ಒಬ್ಬ ಚಲನಚಿತ್ರ ನಿರ್ದೇಶಕನಾಗಿ, ಸಿನಿಮಾ ಎಂಬುದು ಪ್ರೇಕ್ಷಕರಿಗೆ ಮನರಂಜನೆ ನೀಡಬೇಕು, ಪ್ರೇರಣೆ ನೀಡಬೇಕು ಮತ್ತು ಅವರೊಂದಿಗೆ ಕನೆಕ್ಟ್ ಆಗಬೇಕು ಎಂದು ನಾನು ನಂಬುತ್ತೇನೆ. ಅದು ಯಾರಿಗೂ ಮುಜುಗರ ಉಂಟುಮಾಡಬಾರದು ಅಥವಾ ಗೌರವಕ್ಕೆ ಧಕ್ಕೆ ತರಬಾರದು. ‘ಪೆದ್ದಿ’ ಚಿತ್ರದ ಕೆಲವು ದೃಶ್ಯಗಳ ಬಗ್ಗೆ ಬಂದಿರುವ ಪ್ರತಿಕ್ರಿಯೆಗಳನ್ನು ನಾವು ಕೇಳಿದ್ದೇವೆ ಮತ್ತು ಅದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

ಮುಂದುವರಿದು, ‘ತೆರೆಯ ಮೇಲೆಯೂ ಮತ್ತು ನಿಜ ಜೀವನದಲ್ಲಿಯೂ ನನಗೆ ಮಹಿಳೆಯರ ಬಗ್ಗೆ ಯಾವಾಗಲೂ ಅಪಾರ ಗೌರವವಿದೆ. ಯಾವುದೇ ಮಹಿಳಾ ಪಾತ್ರವನ್ನು ಕೇವಲ ಭೋಗ ವಸ್ತುವಿನಂತೆ ಬಿಂಬಿಸುವುದು ಅಥವಾ ಗೌರವ ಕಮ್ಮಿ ಮಾಡುವುದು ನಮ್ಮ ಉದ್ದೇಶವಾಗಿರಲಿಲ್ಲ. ಚಿತ್ರದ ಯಾವುದೇ ಭಾಗವನ್ನು ಆ ರೀತಿ ಅರ್ಥೈಸಿಕೊಂಡಿದ್ದರೆ, ನಾವು ಆ ಭಾವನೆಗಳನ್ನು ಗೌರವಿಸುತ್ತೇವೆ, ವ್ಯಕ್ತವಾಗಿರುವ ಕಳಕಳಿಯನ್ನು ಅರ್ಥಮಾಡಿಕೊಳ್ಳುತ್ತೇವೆ ಮತ್ತು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಬಂದಿರುವ ಪ್ರತಿಕ್ರಿಯೆಗಳನ್ನು ಪರಿಶೀಲಿಸಿದ ನಂತರ, ನಾವು ಸಂಬಂಧಪಟ್ಟ ದೃಶ್ಯಗಳಲ್ಲಿ ಬದಲಾವಣೆಗಳನ್ನು ಮಾಡಲು ನಿರ್ಧರಿಸಿದ್ದೇವೆ. ಸಿನಿಮಾ ಬೆಳೆಯುವುದು ಪ್ರೇಕ್ಷಕರೊಂದಿಗಿನ ಸಂಪರ್ಕದಿಂದ. ಕಥೆಗಾರರಾಗಿ, ಬದಲಾಗುತ್ತಿರುವ ದೃಷ್ಟಿಕೋನಗಳು ಮತ್ತು ಸೂಕ್ಷ್ಮತೆಗಳ ಬಗ್ಗೆ ಗಮನ ಹರಿಸುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದಿದ್ದಾರೆ.

ಇದನ್ನೂ ಓದಿ:ರಾಮ್ ಚರಣ್ ನಟನೆಯ ‘ಪೆದ್ದಿ’ ಚಿತ್ರದ ಬಜೆಟ್ ಮತ್ತು ತಾರಾಗಣದ ಸಂಭಾವನೆ ವಿವರ ಇಲ್ಲಿದೆ

ಜಾನ್ಹವಿ ಕಪೂರ್ ಅವರ ಪಾತ್ರವನ್ನು ಅತಿಯಾಗಿ ಗ್ಲಾಮರೈಸ್ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಟೀಕೆ ವ್ಯಕ್ತಪಡಿಸಿದ್ದಾರೆ. ಕೆಲವು ಸಿನಿಮಾ ಮಂದಿ, ಮಾಜಿ ನಟಿಯರು ಸಹ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಖುದ್ದು ಜಾನ್ಹವಿ ಸಹ, ಇಂಥಹಾ ಒಂದು ಸಾಮಾಜಿಕ ಜಾಲತಾಣ ಪೋಸ್ಟ್​​ಗೆ ಲೈಕ್ ಒತ್ತುವ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಸಿನಿಮಾನಲ್ಲಿ ಜಾನ್ಹವಿ ಕಪೂರ್ ಅವರು ಅಚ್ಚಯ್ಯಮ್ಮ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಮೊದಲಾರ್ಧದಲ್ಲಿ ಜಾನ್ಹವಿಯ ಪಾತ್ರವನ್ನು ಕೇವಲ ಗ್ಲಾಮರ್​​​ಗಾಗಿ ಮಾತ್ರವೇ ಬಳಸಿಕೊಳ್ಳಲಾಗಿದೆ. ಕಡಿಮೆ ಬಟ್ಟೆಗಳನ್ನು ತೊಡಿಸಿರುವುದು, ಎದೆ ಭಾಗ, ಸೊಂಟದ ಭಾಗದ ಮೇಲೆ ಅತಿಯಾಗಿ ಫೋಕಸ್ ಮಾಡಿರುವುದು ಮಾಡಲಾಗಿದೆ. ಸಿನಿಮಾವನ್ನು ಬುಚ್ಚಿಬಾಬು ಸನಾ ನಿರ್ದೇಶಿಸಿದ್ದು, ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:54 pm, Sat, 6 June 26

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More