‘ಓಜಿ’ ಅಬ್ಬರದ ಕಲೆಕ್ಷನ್; ಮೊದಲ ದಿನವೇ 100 ಕೋಟಿ ರೂಪಾಯಿ ಕ್ಲಬ್ ಸೇರಿದ ಪವನ್ ಸಿನಿಮಾ
OG Movie Box Office Collection: ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಚಿತ್ರ ಹೇಳಿಕೊಳ್ಳುವಂತಹ ಕಲೆಕ್ಷನ್ ಮಾಡಿರಲಿಲ್ಲ. ಈ ವಿಚಾರ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಆದರೆ, ಈಗ ‘ಓಜಿ’ ಚಿತ್ರದ ಮೂಲಕ ಅವರು ದೊಡ್ಡ ಮಟ್ಟದಲ್ಲಿ ಕಂಬ್ಯಾಕ್ ಮಾಡಿದ್ದಾರೆ. ಈ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿದೆ. ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ ವಿವರ ಇಲ್ಲಿದೆ.

ಪವನ್ ಕಲ್ಯಾಣ್ (Pawan Kalyan) ಅವರಿಗೆ ಒಂದು ದೊಡ್ಡ ಬ್ರೇಕ್ ಸಿಕ್ಕಿ ಬಹಳ ಸಮಯವೇ ಆಗಿತ್ತು. ಇತ್ತೀಚೆಗೆ ಬಿಡುಗಡೆ ಕಂಡ ‘ಹರಿ ಹರ ವೀರ ಮಲ್ಲು’ ಚಿತ್ರ ಹೇಳಿಕೊಳ್ಳುವಂತಹ ಕಲೆಕ್ಷನ್ ಮಾಡಿರಲಿಲ್ಲ. ಈಗ ‘ಓಜಿ’ ಚಿತ್ರದ ಮೂಲಕ ಅವರು ದೊಡ್ಡ ಮಟ್ಟದಲ್ಲಿ ಕಂಬ್ಯಾಕ್ ಮಾಡಿದ್ದಾರೆ. ಮೊದಲ ದಿನವೇ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ ಎಂಬುದು ವಿಶೇಷ. ನವರಾತ್ರಿ ಪ್ರಯುಕ್ತ ಸಿನಿಮಾ ರಿಲೀಸ್ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಕಲೆಕ್ಷನ್ ನಿರೀಕ್ಷಿಸಬಹುದಾಗಿದೆ.
ಪವನ್ ಕಲ್ಯಾಣ್ ಅವರು ‘ಓಜಿ’ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಸಾಹೋ’ ರೀತಿಯ ಸಿನಿಮಾ ನೀಡಿದ ಸುಜಿತ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಪಕ್ಕಾ ಮಾಸ್ ಮಸಾಲಾ ಅಂಶಗಳನ್ನು ಈ ಚಿತ್ರ ಒಳಗೊಂಡಿದೆ. ಹಿಂದಿಯ ಇಮ್ರಾನ್ ಹಶ್ಮಿ ‘ಓಜಿ’ಯಲ್ಲಿ ವಿಲನ್ ಪಾತ್ರ ಮಾಡಿದ್ದಾರೆ. ಈ ಸಿನಿಮಾ ಅವರ ಅಭಿಮಾನಿಗಳಿಗೆ ಇಷ್ಟ ಆಗಿದೆ. ಪ್ರೀಮಿಯರ್ ಶೋ ಹಾಗೂ ಮೊದಲ ದಿನದ ದುಬಾರಿ ಟಿಕೆಟ್ ದರದಿಂದಾಗಿ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ.
‘ಓಜಿ’ ಚಿತ್ರಕ್ಕೆ ಪ್ರೀಮಿಯರ್ ಶೋಗಳಿಂದಲೇ (ಸೆಪ್ಟೆಂಬರ್ 24) 20 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಮೊದಲ ದಿನ (ಸೆಪ್ಟೆಂಬರ್ 25) ಚಿತ್ರಕ್ಕೆ 70 ಕೋಟಿ ರೂಪಾಯಿ ಹರಿದು ಬಂದಿದೆ. ಈ ಮೂಲಕ ಚಿತ್ರದ ಕಲೆಕ್ಷನ್ 90 ಕೋಟಿ ರೂಪಾಯಿ ಆಗಿದೆ. ಇದು ಕೇವಲ ಭಾರತದ ಕಲೆಕ್ಷನ್. ವಿಶ್ವ ಮಟ್ಟದಲ್ಲಿ ಗಳಿಕೆ ಲೆಕ್ಕ ಹಾಕಿದರೆ ಈ ಸಿನಿಮಾದ ಒಟ್ಟೂ ಗಳಿಕೆ 150 ಕೋಟಿ ರೂಪಾಯಿ ಸಮೀಪಿಸಲಿದೆ.
ಇದನ್ನೂ ಓದಿ: ಹೇಗಿದೆ ಪವನ್ ಕಲ್ಯಾಣ್ ನಟನೆಯ ‘ಓಜಿ’ ಸಿನಿಮಾ? ಇಲ್ಲಿದೆ ವಿಮರ್ಶೆ
ಬುಕ್ ಮೈ ಶೋನಲ್ಲಿ 70 ಸಾವಿರ ಮಂದಿ ವೋಟ್ ಮಾಡಿದ್ದು, 9.2 ರೇಟಿಂಗ್ ಸಿಕ್ಕಿದೆ. ಈ ಚಿತ್ರದಿಂದ ಪವನ್ ಕಲ್ಯಾಣ್ ದೊಡ್ಡ ಕಂಬ್ಯಾಕ್ ಮಾಡಿದ್ದಾರೆ. ಈ ವಾರಾಂತ್ಯ ಎಂಬಲ್ಲಿಗೆ ಸಿನಿಮಾ ಒಟ್ಟಾರೆ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡುತ್ತದೆ ಎಂಬ ಕುತೂಹಲ ಮೂಡಿದೆ. ಪ್ರಿಯಾಂಕಾ ಮೋಹನ್, ಅರ್ಜುನ್ ದಾಸ್, ಪ್ರಕಾಶ್ ರೈ ಮೊದಲಾದವರು ಸಿನಿಮಾದ ಭಾಗ ಆಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.








