36 ವರ್ಷದ ಬಳಿಕ ಮರುಕಳಿಸಿತು ಇತಿಹಾಸ; ಕಮಲ್​ ಹಾಸನ್​-ಚಿರಂಜೀವಿ ಸ್ನೇಹದ ರೆಟ್ರೋ ಫೋಟೋ ವೈರಲ್

Megastar Chiranjeevi | Kamal Haasan: ಎರಡೂ ಫೋಟೋವನ್ನು ಜೋಡಿಸಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಕಮಲ್​ ಹಾಸನ್​ ಹಾಗೂ ಚಿರಂಜೀವಿ ಸ್ನೇಹ ಶಾಶ್ವತವಾಗಿರಲಿ ಎಂದು ಹಾರೈಸುತ್ತಿದ್ದಾರೆ.

36 ವರ್ಷದ ಬಳಿಕ ಮರುಕಳಿಸಿತು ಇತಿಹಾಸ; ಕಮಲ್​ ಹಾಸನ್​-ಚಿರಂಜೀವಿ ಸ್ನೇಹದ ರೆಟ್ರೋ ಫೋಟೋ ವೈರಲ್
ಕಮಲ್ ಹಾಸನ್, ಮೆಗಾಸ್ಟಾರ್ ಚಿರಂಜೀವಿ
Follow us
TV9 Web
| Updated By: ಮದನ್​ ಕುಮಾರ್​

Updated on: Jun 13, 2022 | 7:59 AM

ಭಾರತೀಯ ಚಿತ್ರರಂಗದ ದಿಗ್ಗಜ ನಟರಾದ ಕಮಲ್​ ಹಾಸನ್ (Kamal Haasan)​ ಮತ್ತು ಮೆಗಾಸ್ಟಾರ್​ ಚಿರಂಜೀವಿ ನಡುವೆ ಒಳ್ಳೆಯ ಬಾಂಧವ್ಯ ಇದೆ. ಹಲವು ವರ್ಷಗಳಿಂದ ಅವರಿಬ್ಬರು ಸ್ನೇಹಿತರು. ಪರಸ್ಪರ ಬೆಂಬಲ ನೀಡುತ್ತ ಅವರು ಮುಂದುವರಿಯುತ್ತಿದ್ದಾರೆ. ಒಬ್ಬರ ಬೆಳವಣಿಗೆಯನ್ನು ನೋಡಿ ಇನ್ನೊಬ್ಬರು ಖುಷಿ ಪಡುತ್ತಿದ್ದಾರೆ. ಈಗ ಕಮಲ್​ ಹಾಸನ್​ ನಟನೆಯ ‘ವಿಕ್ರಮ್​’ ಸಿನಿಮಾ (Vikram Movie) ಸೂಪರ್​ ಹಿಟ್​ ಆಗಿರುವುದಕ್ಕೆ ಚಿರಂಜೀವಿ ಅವರು ಪಾರ್ಟಿ ಆಯೋಜಿಸಿರುವುದು ದೊಡ್ಡ ಸುದ್ದಿ ಆಗಿದೆ. ಅಚ್ಚರಿ ಏನೆಂದರೆ ಅವರು ಈ ರೀತಿ ಮಾಡಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ತಮ್ಮ ಸ್ನೇಹಿತನಿಗಾಗಿ ಚಿರಂಜೀವಿ (Megastar Chiranjeevi) ಅವರು ಈ ರೀತಿ ಪಾರ್ಟಿ ಮಾಡಿದ್ದರು. ಗೆಳೆಯನ ಗೆಲುವನ್ನು ಸಂಭ್ರಮಿಸಿದ್ದರು. ಅದಕ್ಕೆ ಸಾಕ್ಷಿ ಎಂಬಂತೆ ಈಗೊಂದು ಫೋಟೋ ವೈರಲ್​ ಆಗಿದೆ. ಅದನ್ನು ಕಂಡು ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ.

ಕಮಲ್ ಹಾಸನ್​ ಅವರ ಸೂಪರ್​ ಹಿಟ್​ ಸಿನಿಮಾಗಳಲ್ಲಿ ‘ಸ್ವಾತಿ ಮುತ್ಯಂ’ ಕೂಡ ಒಂದು. ಆ ಚಿತ್ರ 1986ರಲ್ಲಿ ಬಿಡುಗಡೆಯಾಗಿತ್ತು. ಅದರ ಗೆಲುವನ್ನು ಸಂಭ್ರಮಿಸಲು ಚಿರಂಜೀವಿ ಅವರು ಪಾರ್ಟಿ ಆಯೋಜಿಸಿದ್ದರು. ವೇದಿಕೆಯಲ್ಲಿ ಗೆಳೆಯ ಕಮಲ್​ ಹಾಸನ್​ಗೆ ನೆನಪಿನ ಕಾಣಿಕೆ ಕೊಟ್ಟು ಗೌರವಿಸಿದ್ದರು. ಆ ಕಾರ್ಯಕ್ರಮಕ್ಕೆ ಬಾಲಿವುಡ್​ನ ಲೆಜೆಂಡರಿ ನಟ ರಾಜ್​ ಕಪೂರ್​ ಅವರು ಅತಿಥಿಯಾಗಿ ಬಂದಿದ್ದರು. ಈಗ ಆ ರೀತಿಯ ಘಟನೆ ಮತ್ತೆ ಮರುಕಳಿಸಿದೆ.

ಇದನ್ನೂ ಓದಿ: Kamal Haasan: ಕಮಲ್​ ಹಾಸನ್​ಗೆ ಮತ್ತೆ ರಾಜಕೀಯದ ಸೆಳೆತ; ‘ವಿಕ್ರಮ್​’ ಗೆಲುವಿನ ಬೆನ್ನಲ್ಲೇ ದೊಡ್ಡ ಅನೌನ್ಸ್​ಮೆಂಟ್​

ಇದನ್ನೂ ಓದಿ
Image
Kamal Haasan: ವಿಶ್ವಾದ್ಯಂತ 200 ಕೋಟಿ ರೂ. ಬಾಚಿಕೊಂಡ ‘ವಿಕ್ರಮ್​’ ಸಿನಿಮಾ; ಗೆಲುವಿನ ಖುಷಿಯಲ್ಲಿ ಕಮಲ್​ ಹಾಸನ್​
Image
‘ವಿಕ್ರಮ್​’ ವಿಲನ್ ಸೂರ್ಯಗೆ ರೋಲೆಕ್ಸ್ ವಾಚ್ ಗಿಫ್ಟ್ ಕೊಟ್ಟ ಕಮಲ್ ಹಾಸನ್​; ಇದರ ಬೆಲೆ ಎಷ್ಟು ಲಕ್ಷ? ಗೆಸ್ ಮಾಡಿ
Image
‘ರಜಿನಿಕಾಂತ್​- ನಾನು ಒಳ್ಳೆಯ ಫ್ರೆಂಡ್ಸ್​, ಆದರೆ ಒಂದು ವಿಚಾರದ ಹೊರತಾಗಿ’ ಎಂದ ಕಮಲ್​ ಹಾಸನ್​; ಏನದು?
Image
ಕಮಲ್​ ಹಾಸನ್​ ಮಾಜಿ ಪತ್ನಿ ಸಾರಿಕಾಗೆ ಆರ್ಥಿಕ ಸಂಕಷ್ಟ; 3 ಸಾವಿರ ರೂಪಾಯಿಗಾಗಿ ಕಷ್ಟಪಟ್ಟ ಖ್ಯಾತ ನಟಿ

ಲೋಕೇಶ್​ ಕನಗರಾಜ್​ ನಿರ್ದೇಶನ ಮಾಡಿರುವ ‘ವಿಕ್ರಮ್’ ಸಿನಿಮಾ ಜಯಭೇರಿ ಬಾರಿಸಿದೆ. ಅದಕ್ಕಾಗಿ ಎಲ್ಲರನ್ನೂ ಕರೆದು ಚಿರಂಜೀವಿ ಅವರು ಪಾರ್ಟಿ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಸಲ್ಮಾನ್ ಖಾನ್​ ಬಂದಿದ್ದಾರೆ. ಈ ಎರಡೂ ಸಂದರ್ಭದ ಫೋಟೋವನ್ನು ಜೋಡಿಸಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಇಬ್ಬರ ಸ್ನೇಹ ಚಿರವಾಗಿರಲಿ ಎಂದು ಹಾರೈಸುತ್ತಿದ್ದಾರೆ.

ಇದನ್ನೂ ಓದಿ: ರಜಿನಿಕಾಂತ್​- ನಾನು ಒಳ್ಳೆಯ ಫ್ರೆಂಡ್ಸ್​, ಆದರೆ ಒಂದು ವಿಚಾರದ ಹೊರತಾಗಿ; ಎಂದ ಕಮಲ್​ ಹಾಸನ್​; ಏನದು?

‘ವಿಕ್ರಮ್​’ ಸಿನಿಮಾದಲ್ಲಿ ವಿಜಯ್​ ಸೇತುಪತಿ, ಫಹಾದ್​ ಫಾಸಿಲ್​, ಸೂರ್ಯ ಕೂಡ ನಟಿಸಿದ್ದಾರೆ. ಕಮಲ್​ ಹಾಸನ್​ ಅವರಿಗೆ ಈ ಸಿನಿಮಾದಿಂದ ಭರ್ಜರಿ ಗೆಲುವು ಸಿಕ್ಕಿದೆ. ಈ ಯಶಸ್ಸಿನಿಂದ ಖುಷಿ ಆಗಿರುವ ಅವರು ನಿರ್ದೇಶಕರಿಗೆ ಮತ್ತು ನಟ ಸೂರ್ಯ ಅವರಿಗೆ ದುಬಾರಿ ಗಿಫ್ಟ್​ ನೀಡಿ ಸುದ್ದಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ