AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನಿಯರ್ ಎನ್​ಟಿಆರ್​ ಅಭಿಮಾನಿಗಳಿಗೆ ಗುಡ್ ನ್ಯೂಸ್; ಸಿಗಲಿದೆ ಸರ್​ಪ್ರೈಸ್

ಸಾಮಾನ್ಯವಾಗಿ ಸೆಲೆಬ್ರಿಟಿಗಳ ಬರ್ತ್​ಡೇ ಎಂದರೆ ಅವರ ನಟನೆಯ ಸಿನಿಮಾದ ಪೋಸ್ಟರ್ ಅಥವಾ ಟೀಸರ್ ರಿಲೀಸ್ ಮಾಡುವ ಟ್ರೆಂಡ್ ಚಿತ್ರರಂಗದಲ್ಲಿ ಇದೆ. ಮೇ 20 ಜೂನಿಯರ್ ಎನ್​ಟಿಆರ್​ ಬರ್ತ್​ಡೇ. ಈ ವಿಶೇಷ ದಿನದಂದು ‘ವಾರ್ 2’ ಪೋಸ್ಟರ್ ರಿಲೀಸ್ ಆಗಲಿದೆ ಎನ್ನುವ ಮಾಹಿತಿ ಇದೆ

ಜೂನಿಯರ್ ಎನ್​ಟಿಆರ್​ ಅಭಿಮಾನಿಗಳಿಗೆ ಗುಡ್ ನ್ಯೂಸ್; ಸಿಗಲಿದೆ ಸರ್​ಪ್ರೈಸ್
ಜೂನಿಯರ್​ ಎನ್​ಟಿಆರ್​
TV9 Web
| Edited By: |

Updated on: May 04, 2024 | 2:41 PM

Share

ಜೂನಿಯರ್ ಎನ್​ಟಿಆರ್ (Jr NTR) ಅವರು ಈಗ ಕೇವಲ ಟಾಲಿವುಡ್​​ ಹೀರೋ ಮಾತ್ರ ಅಲ್ಲ. ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಸೃಷ್ಟಿ ಆಗಿದೆ. ಅವರು ‘ವಾರ್ 2’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈಗ ಅಭಿಮಾನಿಗಳಿಗೆ ಒಂದು ಗುಡ್​​ನ್ಯೂಸ್ ಸಿಕ್ಕಿದೆ. ಅವರ ಫಸ್ಟ್ ಲುಕ್ ಮೇ 20ರಂದು ರಿಲೀಸ್ ಆಗಲಿದೆ ಎನ್ನುವ ಮಾಹಿತಿ ಸಿಕ್ಕಿದೆ.

ಸಾಮಾನ್ಯವಾಗಿ ಸೆಲೆಬ್ರಿಟಿಗಳ ಬರ್ತ್​ಡೇ ಎಂದರೆ ಅವರ ನಟನೆಯ ಸಿನಿಮಾದ ಪೋಸ್ಟರ್ ಅಥವಾ ಟೀಸರ್ ರಿಲೀಸ್ ಮಾಡುವ ಟ್ರೆಂಡ್ ಚಿತ್ರರಂಗದಲ್ಲಿ ಇದೆ. ಮೇ 20 ಜೂನಿಯರ್ ಎನ್​ಟಿಆರ್​ ಬರ್ತ್​ಡೇ. ಈ ವಿಶೇಷ ದಿನದಂದು ‘ವಾರ್ 2’ ಪೋಸ್ಟರ್ ರಿಲೀಸ್ ಆಗಲಿದೆ ಎನ್ನುವ ಮಾಹಿತಿ ಇದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

‘ವಾರ್ 2’ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಇದಕ್ಕೆ ತಂಡದ ಕಡೆಯಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ. ಅವರದ್ದು ವಿಲನ್ ಪಾತ್ರ ಎಂದು ಕೂಡ ಹೇಳಲಾಗುತ್ತಿದೆ. ಒಂದೊಮ್ಮೆ ‘ವಾರ್ 2’ ಚಿತ್ರದ ಪೋಸ್ಟರ್ ಹೊರ ಬಿದ್ದರೆ ಸ್ಪಷ್ಟ ಚಿತ್ರಣ ಸಿಗಲಿದೆ. ಈ ಪೋಸ್ಟರ್​ಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ‘ವಾರ್​ 2’ ಸಿನಿಮಾ ಸೆಟ್​​ನಿಂದ ಹೃತಿಕ್ ರೋಷನ್, ಜೂನಿಯರ್ ಎನ್​ಟಿಆರ್​​ ಫೋಟೋಸ್ ವೈರಲ್

‘ವಾರ್ 2’ ಚಿತ್ರದಲ್ಲಿ ಜೂನಿಯರ್ ಎನ್​​ಟಿಆರ್ ಜೊತೆ ಹೃತಿಕ್ ರೋಷನ್ ಕೂಡ ನಟಿಸುತ್ತಿದ್ದಾರೆ. ಜಾನ್ ಅಬ್ರಹಾಂ, ಕಿಯಾರಾ ಅಡ್ವಾಣಿ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಅಯಾನ್ ಮುಖರ್ಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ ನಟಿಸುತ್ತಿದ್ದಾರೆ. ಈ ಸಿನಿಮಾದ ಟೀಸರ್ ಕೂಡ ಈ ಸಂದರ್ಭದಲ್ಲಿ ರಿಲೀಸ್ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
TV9 Web
TV9 Web

TV9 Kannada

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು