Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಪ್ರಿಯರಿಗೆ ಈ ಬಾರಿಯ ದಸರಾ ಹಬ್ಬ ಭರ್ಜರಿ; ಯಾವೆಲ್ಲ ಚಿತ್ರಗಳು ರಿಲೀಸ್?

ಈ ಬಾರಿಯ ದಸರಾ ಹಬ್ಬದ ಮೇಲೆ ಅನೇಕ ನಿರ್ಮಾಪಕರು ಕಣ್ಣಿಟ್ಟಿದ್ದಾರೆ. ಹೀಗಾಗಿ, ಸಿನಿಪ್ರಿಯರಿಗೆ ಭರ್ಜರಿ ರಸದೌತಣ ಸಿಗಲಿದೆ.

ಸಿನಿಪ್ರಿಯರಿಗೆ ಈ ಬಾರಿಯ ದಸರಾ ಹಬ್ಬ ಭರ್ಜರಿ; ಯಾವೆಲ್ಲ ಚಿತ್ರಗಳು ರಿಲೀಸ್?
ದಸರಾ ಹಬ್ಬಕ್ಕೆ ಹಲವು ಸಿನಿಮಾ ರಿಲೀಸ್
Follow us
 ಶ್ರೀಲಕ್ಷ್ಮೀ ಎಚ್
| Updated By: Digi Tech Desk

Updated on:Aug 04, 2023 | 10:45 AM

ಹಬ್ಬದ ಸಮಯದಲ್ಲಿ ದೊಡ್ಡ ಬಜೆಟ್ ಸಿನಿಮಾಗಳು ರಿಲೀಸ್ ಆಗೋದು ವಾಡಿಕೆ. ಸ್ಟಾರ್ ಕಲಾವಿದರ ಚಿತ್ರಗಳು ರಿಲೀಸ್ ಆದರೆ ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸಿನಿಮಾ ನೋಡುತ್ತಾರೆ. ಇದರಿಂದ ಸಿನಿಮಾದ ಗಳಿಕೆ ಹೆಚ್ಚುತ್ತದೆ. ಈ ಬಾರಿಯ ದಸರಾ ಹಬ್ಬದ ಮೇಲೆ ಅನೇಕ ನಿರ್ಮಾಪಕರು ಕಣ್ಣಿಟ್ಟಿದ್ದಾರೆ. ಹೀಗಾಗಿ, ಸಿನಿಪ್ರಿಯರಿಗೆ ಭರ್ಜರಿ ರಸದೌತಣ ಸಿಗಲಿದೆ. ಕನ್ನಡ (Kannada), ತೆಲುಗು ಹಾಗೂ ತಮಿಳಿನಲ್ಲಿ ದೊಡ್ಡ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ.

ಘೋಸ್ಟ್​

ಶಿವರಾಜ್​ಕುಮಾರ್ ಅವರು ಮಾಸ್ ಅವತಾರದಲ್ಲಿ ಕಾಣಿಸಿಕೊಂಡರೆ ಸಿನಿಮಾ ಹಿಟ್ ಆಗೋದು ಪಕ್ಕಾ ಅನ್ನೋದು ಹಲವರ ನಂಬಿಕೆ. ಈ ಕಾರಣಕ್ಕೆ ‘ಘೋಸ್ಟ್’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಅವರ ಜನ್ಮದಿನದ ಪ್ರಯುಕ್ತ ಈ ಚಿತ್ರದ ಮೊದಲ ಗ್ಲಿಂಪ್ಸ್ ರಿಲೀಸ್ ಆಯಿತು. ‘ನಾನು ಒಜಿ, ಒರಿಜಿನಲ್ ಗ್ಯಾಂಗ್​ಸ್ಟಾರ್’ ಎಂದು ಅವರು ಹೇಳಿದ ಡೈಲಾಗ್ ಗಮನ ಸೆಳೆದಿತ್ತು. ಚಿತ್ರರಂಗಕ್ಕೆ ಹಲವು ಭಿನ್ನ ಸಿನಿಮಾಗಳನ್ನು ನೀಡಿದ ಖ್ಯಾತಿ ಶ್ರೀನಿಗೆ ಇದೆ. ಅವರು ‘ಘೋಸ್ಟ್’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ದಸರಾಗೆ ರಿಲೀಸ್ ಆಗಲಿದೆ. ಈ ಚಿತ್ರ ಭರ್ಜರಿ ಗಳಿಕೆ ಮಾಡುವ ನಿರೀಕ್ಷೆ ಇದೆ.

‘ಲಿಯೋ’

ದಳಪತಿ ವಿಜಯ್ ಅವರು ಸಿನಿಮಾ ಕೆಲಸಗಳನ್ನು ಬಹಳ ವೇಗವಾಗಿ ಪೂರ್ಣಗೊಳಿಸುತ್ತಾರೆ. ಜನವರಿ ತಿಂಗಳಲ್ಲಿ ಅವರು ‘ಲಿಯೋ’ ಸಿನಿಮಾ ಕೆಲಸ ಆರಂಭಿಸಿದ್ದರು. ಈಗ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಈ ಚಿತ್ರ ದಸರಾಗೆ ರಿಲೀಸ್ ಆಗುವ ಸಾಧ್ಯತೆ ಇದೆ. ಈ ಸಿನಿಮಾ ಕುರಿತು ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಲೋಕೇಶ್ ಕನಗರಾಜ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಲೋಕೇಶ್ ಕನಗರಾಜ್ ಯೂನಿವರ್ಸ್ ಅಡಿಯಲ್ಲಿ ಈ ಚಿತ್ರ ಮೂಡಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಟೈಗರ್ ನಾಗೇಶ್ವರ್ ರಾವ್

‘ಟೈಗರ್ ನಾಗೇಶ್ವರ್ ರಾವ್’ ಚಿತ್ರಕ್ಕೆ ವಂಶೀ ಅವರು ನಿರ್ದೇಶನ ಮಾಡಿದ್ದಾರೆ. ರವಿತೇಜ ಅವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅನುಪಮ್ ಖೇರ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. 70ರ ದಶಕದಲ್ಲಿ ಆಂಧ್ರದಲ್ಲಿ ವಾಸಿಸುತ್ತಿದ್ದ ಟೈಗರ್ ನಾಗೇಶ್ವರ್ ರಾವ್ ಹೆಸರಿನ ದರೋಡೆಕೋರನ ಕುರಿತು ಈ ಸಿನಿಮಾ ಸಿದ್ಧವಾಗುತ್ತಿದೆ.

ಭಗಂತ್ ಕೇಸರಿ

ನಂದಮೂರಿ ಬಾಲಕೃಷ್ಣ ಅವರ ನಟನೆಯ ಸಿನಿಮಾಗಳಲ್ಲಿ ಭರ್ಜರಿ ಆ್ಯಕ್ಷನ್ ಇರುತ್ತದೆ. ‘ಭಗವಂತ್ ಕೇಸರಿ’ ಚಿತ್ರದಲ್ಲೂ ಅದು ಮುಂದುವರಿಯಲಿದೆ. ಕಾಜಲ್ ಅಗರ್​ವಾಲ್ ಅವರು ಈ ಚಿತ್ರಕ್ಕೆ ನಾಯಕಿ. ಶರತ್​ಕುಮಾರ್ ಅವರು ಚಿತ್ರದಲ್ಲಿ ನಟಿಸಿದ್ದಾರೆ. ಕನ್ನಡದ ಶ್ರೀಲೀಲಾ ಅವರು ನಂದಮೂರಿ ಅವರ ತಂಗಿ ಪಾತ್ರ ಮಾಡಿದ್ದಾರೆ. ಈ ಚಿತ್ರ ಕೂಡ ಅಕ್ಟೋಬರ್​ನಲ್ಲಿ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ಎರಡು ಸಾವಿರ ಕೋಟಿ ಒಡೆಯ ಸಲ್ಮಾನ್ ಖಾನ್; ಎಲ್ಲೆಲ್ಲಿ ಹೂಡಿಕೆ ಮಾಡಿದ್ದಾರೆ ಸಲ್ಲು?

ಇನ್ನೂ ಸೇರ್ಪಡೆ ಆಗಬಹುದು

ದಸರಾ ಸಂದರ್ಭದಲ್ಲಿ ಸದ್ಯ ಬಾಲಿವುಡ್​ನ ಯಾವುದೇ ಸಿನಿಮಾ ಘೋಷಣೆ ಆಗಿಲ್ಲ. ಹೀಗಾಗಿ, ಆ ಸಂದರ್ಭದಲ್ಲಿ ಯಾವುದಾದರೂ ಹೊಸ ಸಿನಿಮಾ ಘೋಷಣೆ ಆಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಮಾಲಿವುಡ್​ನಿಂದಲೂ ರೇಸ್​ಗೆ ಹೊಸ ಸಿನಿಮಾ ಸೇರ್ಪಡೆ ಆಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:02 am, Fri, 4 August 23

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!