AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಆಗಲಿದೆ ಆಪರೇಷನ್ ಸಿಂಧೂರ್: ನಿರ್ದೇಶಕ ಯಾರು?

Operation Sindhur: 2025ರ ಏಪ್ರಿಲ್ 22 ರಂದು ಜಮ್ಮು ಕಾಶ್ಮೀರದ ಪೆಹಲ್ಗಾಮ್​​ನಲ್ಲಿ ದಾಳಿ ಮಾಡಿದ್ದ ಉಗ್ರರು 26 ಮಂದಿ ಪ್ರವಾಸಿಗರನ್ನು ಕೊಂದಿದ್ದರು. ಅದಕ್ಕೆ ಪ್ರತಿಯಾಗಿ ಭಾರತವು ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಟಾರ್ಗೆಟೆಡ್ ಅಟ್ಯಾಕ್ ಅನ್ನು ಮಾಡಿತ್ತು. ಇದಕ್ಕೆ ಆಪರೇಷನ್ ಸಿಂಧೂರ್ ಎಂದು ಹೆಸರಿಡಲಾಗಿತ್ತು. ಈ ದಾಳಿಯಲ್ಲಿ ಪಾಕಿಸ್ತಾನದ ಹಲವು ಉಗ್ರ ನೆಲೆಗಳು ಈ ದಾಳಿಯಲ್ಲಿ ಧ್ವಂಸವಾದವು ಎನ್ನಲಾಗಿದೆ. ಇದೇ ಆಪರೇಷನ್ ಸಿಂಧೂರ್ ಅನ್ನು ಇರಿಸಿಕೊಂಡು ಸಿನಿಮಾ ಮಾಡಲಾಗುತ್ತಿದೆ.

ಸಿನಿಮಾ ಆಗಲಿದೆ ಆಪರೇಷನ್ ಸಿಂಧೂರ್: ನಿರ್ದೇಶಕ ಯಾರು?
Operation Sindhoor
ಮಂಜುನಾಥ ಸಿ.
|

Updated on: Feb 19, 2026 | 1:31 PM

Share

ಭಾರತೀಯ ಸೇನೆಯ ವೀರತೆ, ಶೂರತೆ ಕುರಿತಾಗಿ ಬಾಲಿವುಡ್​ನಲ್ಲಿ ಹಲವಾರು ಸಿನಿಮಾಗಳು (Cinema) ಈ ವರೆಗೆ ಬಂದಿವೆ. ಈಗಲೂ ಬರುತ್ತಿವೆ. ಉರಿ ದಾಳಿಯ ಪ್ರತಿಯಾಗಿ ಮಾಡಲಾದ ಸರ್ಜಿಕಲ್ ಸ್ಟೈಕ್ ಅನ್ನು ಆಧರಿಸಿ ‘ಉರಿ’ ಹೆಸರಿನ ಸಿನಿಮಾ ಬಂದಿತ್ತು. ಇದೀಗ ಉಗ್ರರ ಪೆಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ಮಾಡಿದ ಆಪರೇಷನ್ ಸಿಂಧೂರ್ ಕುರಿತಾದ ಸಿನಿಮಾ ಬರಲಿದೆ. ಇದಕ್ಕಾಗಿ ತಯಾರಿ ಆರಂಭವಾಗಿದೆ. ‘ದಿ ಕಾಶ್ಮೀರ್ ಫೈಲ್ಸ್’, ‘ದಿ ವ್ಯಾಕ್ಸಿನ್ ವಾರ್’ ಮತ್ತು ‘ದಿ ಬೆಂಗಾಲ್ ಫೈಲ್ಸ್’ ನಂತಹ ಸಿನಿಮಾಗಳನ್ನು ಮಾಡಿರುವ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಇದೀಗ ಆಪರೇಷನ್ ಸಿಂಧೂರ್ ಅನ್ನು ತೆರೆಗೆ ತರಲು ಸಜ್ಜಾಗಿದ್ದಾರೆ.

2025ರ ಏಪ್ರಿಲ್ 22 ರಂದು ಜಮ್ಮು ಕಾಶ್ಮೀರದ ಪೆಹಲ್ಗಾಮ್​​ನಲ್ಲಿ ದಾಳಿ ಮಾಡಿದ್ದ ಉಗ್ರರು 26 ಮಂದಿ ಪ್ರವಾಸಿಗರನ್ನು ಕೊಂದಿದ್ದರು. ಅದಕ್ಕೆ ಪ್ರತಿಯಾಗಿ ಭಾರತವು ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಟಾರ್ಗೆಟೆಡ್ ಅಟ್ಯಾಕ್ ಅನ್ನು ಮಾಡಿತ್ತು. ಇದಕ್ಕೆ ಆಪರೇಷನ್ ಸಿಂಧೂರ್ ಎಂದು ಹೆಸರಿಡಲಾಗಿತ್ತು. ಈ ದಾಳಿಯಲ್ಲಿ ಪಾಕಿಸ್ತಾನದ ಹಲವು ಉಗ್ರ ನೆಲೆಗಳು ಈ ದಾಳಿಯಲ್ಲಿ ಧ್ವಂಸವಾದವು ಎನ್ನಲಾಗಿದೆ. ಇದೇ ಆಪರೇಷನ್ ಸಿಂಧೂರ್ ಅನ್ನು ಇರಿಸಿಕೊಂಡು ಸಿನಿಮಾ ಮಾಡಲಾಗುತ್ತಿದೆ.

ಆಪರೇಷನ್ ಸಿಂಧೂರ್ ಕುರಿತಾದ ಸಿನಿಮಾಕ್ಕೆ ಅದೇ ಹೆಸರನ್ನೇ ಇಡಲಾಗಿದ್ದು, ಸಿನಿಮಾ ಕುರಿತಾಗಿ ಕೆಲಸ ಮಾಡಲು ವಿವೇಕ್ ಅಗ್ನಿಹೋತ್ರಿ ಆರಂಭಿಸಿದ್ದಾರಂತೆ. ಆಪರೇಷನ್ ಸಿಂಧೂರದಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ತೊಡಗಿಸಿಕೊಂಡಿದ್ದ ಹಿರಿಯ ಸೈನ್ಯಾಧಿಕಾರಿಗಳನ್ನು ವಿವೆಕ್ ಅಗ್ನಿಹೋತ್ರಿ ಭೇಟಿ ಮಾಡಿದ್ದು ಆಪರೇಷನ್ ಸಿಂಧೂರ ಕುರಿತು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಬಾಲಿವುಡ್​​ನಲ್ಲಿ ಪಿಆರ್​ ತಂತ್ರ ಹೇಗೆ ನಡೆಯುತ್ತೆ ನೋಡಿ; ಎಕ್ಸ್​​ಪೋಸ್ ಮಾಡಿದ ಫ್ಯಾನ್ಸ್

ಸದ್ಯಕ್ಕೆ ಸಿನಿಮಾದ ಚಿತ್ರಕತೆಗಾಗಿ ಸರಕು ಕಲೆಹಾಕುವ ಕಾರ್ಯ ಚಾಲ್ತಿಯಲ್ಲಿದ್ದು, ಸಿನಿಮಾನಲ್ಲಿ ನಟಿಸಲಿರುವ ಕಲಾವಿದರ ಆಯ್ಕೆ ಇನ್ನಿತರೆಗಳು ಇನ್ನೂ ಅಂತಿಮವಾಗಬೇಕಿದೆ. ತಮ್ಮ ಹೊಸ ಸಿನಿಮಾದ ಬಗ್ಗೆ ಮಾತನಾಡಿರುವ ವಿವೇಕ್ ಅಗ್ನಿಹೋತ್ರಿ, ‘ಇದು ಕೇವಲ ಒಂದು ಸಿನಿಮಾವಲ್ಲ, ಇದು ಭಾರತದ ಅನ್-ಸಂಗ್ ವಾರಿಯರ್ಸ್‌ಗೆ ಸಲ್ಲಿಸುವ ಗೌರವ’ ಎಂದಿದ್ದಾರೆ.

ವಿವೇಕ್ ಅಗ್ನಿಹೋತ್ರಿ ತಮ್ಮನ್ನು ತಾವು ರಾಷ್ಟ್ರೀಯವಾದಿ ನಿರ್ದೇಶಕ ಎಂದು ಕರೆದುಕೊಂಡಿದ್ದು, ಈ ಹಿಂದೆ ಅವರು ನಿರ್ದೇಶಿಸಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಭಾರಿ ಯಶಸ್ವಿ ಆಗುವ ಜೊತೆಗೆ ವಿವಾದವನ್ನೂ ಸಹ ಹುಟ್ಟು ಹಾಕಿತ್ತು. ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾಕ್ಕೂ ಅದೇ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆಡಳಿತ ಪಕ್ಷದ ಪರವಾದ ಸಿನಿಮಾಗಳನ್ನು ಮಾಡುತ್ತಾರೆ ಎಂಬ ಟೀಕೆ ವಿವೇಕ್ ಅವರ ಮೇಲಿದ್ದು, ಇದೀಗ ಅವರು ಸೈನ್ಯ ನಿರ್ದಿಷ್ಟ ಆಪರೇಷನ್ ಬಗ್ಗೆ ಸಿನಿಮಾ ಮಾಡಲು ಮುಂದಾಗಿರುವುದು ಕುತೂಹಲ ಮೂಡಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು