‘ರೋಜಿ’ ಚಿತ್ರಕ್ಕಾಗಿ ರಗಡ್ ಲುಕ್​ನಲ್ಲಿ ಕಾಣಿಸಿಕೊಂಡ ‘ಒರಟ’ ಪ್ರಶಾಂತ್

ಒರಟ ಪ್ರಶಾಂತ್ ಅವರಿಗೆ ಯೋಗಿ ಜೊತೆ ನಟಿಸಬೇಕು ಎಂಬ ಆಸೆ ಇತ್ತು. ಈಗ ಅವರ ಆಸೆ ‘ರೋಜಿ’ ಚಿತ್ರದಿಂದ ಈಡೇರುತ್ತಿದೆ. ಪ್ರಶಾಂತ್ ಮಾಡುತ್ತಿರುವ ಪಾತ್ರದ ಹೆಸರು ಸ್ವಾಮಿ ಅಣ್ಣ. ಚಿತ್ರ ತಂಡ ಒರಟ ಪ್ರಶಾಂತ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆ ಮಾಡಿದೆಯಾಗಿದೆ. ಇದರಲ್ಲಿ ಖಡಕ್ ಪಾತ್ರದ ಮೂಲಕ ಅವರು ಗಮನ ಸೆಳೆದಿದ್ದಾರೆ. ಈ ಸಿನಿಮಾ ಬಗ್ಗೆ ಇರೋ ನಿರೀಕ್ಷೆ ಈಗ ಹೆಚ್ಚಾಗಿದೆ.

‘ರೋಜಿ’ ಚಿತ್ರಕ್ಕಾಗಿ ರಗಡ್ ಲುಕ್​ನಲ್ಲಿ ಕಾಣಿಸಿಕೊಂಡ ‘ಒರಟ’ ಪ್ರಶಾಂತ್
ರೋಸಿ ಸಿನಿಮಾ
Follow us
ರಾಜೇಶ್ ದುಗ್ಗುಮನೆ
|

Updated on: Mar 05, 2024 | 8:57 AM

ಲೂಸ್ ಮಾದ ಯೋಗಿ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಅವರ ನಟನೆಯ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈಗ ಅವರ ನಟನೆಯ 50ನೇ ಸಿನಿಮಾ ‘ರೋಜಿ’ ಬಗ್ಗೆ ನಿರೀಕ್ಷೆ ಮೂಡಿದೆ. ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ (Sringar Kitty) ಹಾಗೂ ‘ಲಿಯೋ’ ಖ್ಯಾತಿಯ ಸ್ಯಾಂಡಿ ಕುಮಾರ್ ಮುಖ್ಯ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಈಗ ಚಿತ್ರಕ್ಕೆ ಹೊಸ ಸೇರ್ಪಡೆ ಆಗಿದೆ. ಒರಟ ಪ್ರಶಾಂತ್ ಅವರು ತಂಡ ಸೇರಿಕೊಂಡಿದ್ದಾರೆ.

ಪ್ರಶಾಂತ್ ಮಾಡುತ್ತಿರುವ ಪಾತ್ರದ ಹೆಸರು ಸ್ವಾಮಿ ಅಣ್ಣ ಎಂದು. ಚಿತ್ರ ತಂಡ ಒರಟ ಪ್ರಶಾಂತ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆ ಮಾಡಿದೆಯಾಗಿದೆ. ಇದರಲ್ಲಿ ಖಡಕ್ ಪಾತ್ರದ ಮೂಲಕ ಅವರು ಗಮನ ಸೆಳೆದಿದ್ದಾರೆ. ಈ ಸಿನಿಮಾ ಬಗ್ಗೆ ಇರೋ ನಿರೀಕ್ಷೆ ಈಗ ಹೆಚ್ಚಾಗಿದೆ.

‘ರೋಜಿ’ ಚಿತ್ರಕ್ಕೆ ಶೂನ್ಯ ಅವರ ನಿರ್ದೇಶನ ಇದೆ. ಈ ಚಿತ್ರ ಪಕ್ಕಾ ಗ್ಯಾಂಗ್​ಸ್ಟರ್ ಡ್ರಾಮ ಸಿನಿಮಾ. ‘ಒರಟ ಪ್ರಶಾಂತ್ ನಮ್ಮ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸ್ವಾಮಿ ಅಣ್ಣ ಎಂಬುದು ಅವರ ಪಾತ್ರದ ಹೆಸರು. ಈ ಸಿನಿಮಾದಲ್ಲಿ ಇನ್ನೂ ಎರಡು ಮುಖ್ಯ ಪಾತ್ರಗಳಿವೆ. ಸದ್ಯದಲ್ಲೇ ಮಾಹಿತಿ ರಿವೀಲ್ ಮಾಡುತ್ತೇವೆ’ ಎಂದಿದ್ದಾರೆ ನಿರ್ದೇಶಕ ಶೂನ್ಯ.

ಒರಟ ಪ್ರಶಾಂತ್ ಅವರಿಗೆ ಯೋಗಿ ಜೊತೆ ನಟಿಸಬೇಕು ಎಂಬ ಆಸೆ ಇತ್ತು. ಈಗ ಅವರ ಆಸೆ ‘ರೋಜಿ’ ಚಿತ್ರದಿಂದ ಈಡೇರುತ್ತಿದೆ. ಅವರಿಗೆ ಈ ಮೊದಲು ಹಲವು ಆಫರ್​​ಗಳು ಬಂದಿದ್ದವಂತೆ. ಆದರೆ, ಯಾವುದೂ ಇಷ್ಟ ಆಗಿರಲಿಲ್ಲ. ‘ರೋಜಿ’ ಚಿತ್ರದ ಪಾತ್ರ ಅವರಿಗೆ ಸಾಕಷ್ಟು ಇಷ್ಟ ಆಗಿದೆ.

ಇದನ್ನೂ ಓದಿ: ‘ಪಕ್ಕಾ 100 ಡೇಸ್ ಅನ್ನೋದು ಬಿಟ್ಟುಬಿಡಬೇಕು’; ಕಾರಣ ತಿಳಿಸಿದ ಸಿಂಪಲ್ ಸುನಿ

‘ರೋಜಿ’ ಸಿನಿಮಾದಲ್ಲಿ ನಾಲ್ಕು ಹಾಡುಗಳಿದೆ. ಎಲ್ಲಾ ಹಾಡುಗಳು ಕಥೆಗೆ ಪೂರಕವಾಗಿರುತ್ತವೆ’ ಎಂದು ಮಾಹಿತಿ ನೀಡಿದರು ಗುರುಕಿರಣ್. ಅವರು ಕೊರೊನಾ ಬಳಿಕ ಒಪ್ಪಿಕೊಂಡ ಮೊದಲ ಸಿನಿಮಾ ಎಂದರೆ ಅದು ‘ರೋಜಿ’ ಅನ್ನೋದು ವಿಶೇಷ. ಅವರು ಚಿತ್ರರಂಗಕ್ಕೆ ಬಂದು ಇಪ್ಪತ್ತೈದು ವರ್ಷಗಳು ಕಳೆದಿವೆ. ಈ ಸಮಯದಲ್ಲಿ ‘ಕರಿಮಣಿ ಮಾಲೀಕ’ ಮತ್ತೆ ಟ್ರೆಂಡ್ ಆಗುತ್ತಿದೆ. ಈ ಚಿತ್ರಕ್ಕೆ ಡಿ.ವೈ.ರಾಜೇಶ್, ಡಿ.ವೈ.ವಿನೋದ್ ಬಂಡವಾಳ ಹೂಡಿದ್ದಾರೆ. ಎಸ್ ಕೆ ರಾವ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು