AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

97ನೇ ಅಕಾಡೆಮಿ ಅವಾರ್ಡ್ಸ್: ಆಸ್ಕರ್ ಗೆಲ್ಲೋ ಭಾರತದ ಕನಸು ಭಗ್ನ

Oscar Awards 2025 winner List: ಭಾನುವಾರ ರಾತ್ರಿ (ಭಾರತೀಯ ಕಾಲಮಾನ ಸೋಮವಾರ (ಮಾರ್ಚ್ 3) ಮುಂಜಾನೆ 5.30) ಆಸ್ಕರ್ ಅವಾರ್ಡ್ ಕಾರ್ಯಕ್ರಮ ನಡೆದಿದೆ. ಜಿಯೋ ಹಾಟ್​ಸ್ಟಾರ್​ನಲ್ಲಿ ಕಾರ್ಯಕ್ರಮ ವೀಕ್ಷಣೆಗೆ ಲಭ್ಯವಿದೆ. ಭಾರತದ ಯಾವುದೇ ಸಿನಿಮಾಗಳು ಈ ಬಾರಿ ಆಸ್ಕರ್ ಅವಾರ್ಡ್ ಗೆದ್ದಿಲ್ಲ. ವಿನ್ನರ್​ಗಳ ಪಟ್ಟಿ ಬಗ್ಗೆ ಇಲ್ಲಿದೆ.

97ನೇ ಅಕಾಡೆಮಿ ಅವಾರ್ಡ್ಸ್: ಆಸ್ಕರ್ ಗೆಲ್ಲೋ ಭಾರತದ ಕನಸು ಭಗ್ನ
97ನೇ ಅಕಾಡೆಮಿ ಅವಾರ್ಡ್ಸ್: ಆಸ್ಕರ್ ಗೆಲ್ಲೋ ಭಾರತದ ಕನಸು ಭಗ್ನ
ರಾಜೇಶ್ ದುಗ್ಗುಮನೆ
|

Updated on:Mar 03, 2025 | 9:27 AM

Share

97ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಅಮೆರಿಕದ ಲಾಸ್​ ಏಂಜಲೀಸ್​ನ ಡಾಲ್ಬಿ ಥಿಯೇಟರ್​ನಲ್ಲಿ ನಡೆದಿದೆ. ಅಮೆರಿಕದಲ್ಲಿ ಉಂಟಾದ ಕಾಡ್ಗಿಚ್ಚಿನ ಕಾರಣಕ್ಕೆ ಆಸ್ಕರ್ ಅವಾರ್ಡ್ ನಡೆಯುವುದಿಲ್ಲ ಎಂದು ಹೇಳಲಾಗಿತ್ತು. ಆದರೆ, ಅದ್ದೂರಿಯಾಗಿಯೇ ಕಾರ್ಯಕ್ರಮ ನಡೆದಿದೆ. ವಿವಿಧ ವಿಭಾಗಗಳಲ್ಲಿ ಅವಾರ್ಡ್​ ನೀಡಲಾಗಿದೆ. ಅದೇ ರೀತಿ ಕಾಡ್ಗಿಚ್ಚಿನ ವಿರುದ್ಧ ಹೋರಾಡಿದ ಅಗ್ನಿಶಾಮಕ ದಳದವರಿಗೆ ವೇದಿಕೆ ಮೇಲೆ ಗೌರವ ಸೂಚಿಸಲಾಗಿದೆ.

ಭಾನುವಾರ ರಾತ್ರಿ (ಭಾರತೀಯ ಕಾಲಮಾನ ಸೋಮವಾರ (ಮಾರ್ಚ್ 3) ಮುಂಜಾನೆ 5.30) ಆಸ್ಕರ್ ಅವಾರ್ಡ್ ಕಾರ್ಯಕ್ರಮ ನಡೆದಿದೆ. ಜಿಯೋ ಹಾಟ್​ಸ್ಟಾರ್​ನಲ್ಲಿ ಕಾರ್ಯಕ್ರಮ ವೀಕ್ಷಣೆಗೆ ಲಭ್ಯವಿದೆ. ಭಾರತದ ಯಾವುದೇ ಸಿನಿಮಾಗಳು ಈ ಬಾರಿ ಆಸ್ಕರ್ ಅವಾರ್ಡ್ ಗೆದ್ದಿಲ್ಲ. ಪ್ರಿಯಾಂಕಾ ಚೋಪ್ರಾ ನಿರ್ಮಾಣದ ‘ಅನುಜಾ’ ಶಾರ್ಟ್ ಫಿಲ್ಮ್​ ‘ಬೆಸ್ಟ್ ಲೈವ್ ಆ್ಯಕ್ಷನ್ ಶಾರ್ಟ್ ಫಿಲ್ಮ್’ ವಿಭಾಗದಲ್ಲಿ ಇತ್ತು. ಆದರೆ, ಇದಕ್ಕೆ ಅವಾರ್ಡ್ ಸಿಕ್ಕಿಲ್ಲ ಅನ್ನೋದು ಬೇಸರದ ವಿಚಾರ. ನಟಿ ಪ್ರಿಯಾಂಕಾ ಚೋಪ್ರಾ, ಆಸ್ಕರ್ ಗೆದ್ದಿರೋ ‘ದಿ ಎಲಿಫೆಂಟ್ ವಿಸ್ಪರ್ಸ್’ನ ನಿರ್ಮಾಪಕಿ ಗುನೀತ್ ಮೊಂಗಾ ಹಾಗೂ ಇನ್ನಿತರರು ನಿರ್ಮಿಸಿದ ‘ಅನುಜಾ’ ಲೈವ್ ಆಕ್ಷನ್ ಶಾರ್ಟ್ ಫಿಲ್ಮ್​ ವಿಭಾಗದಲ್ಲಿ ನಾಮಿನೇಟ್​ ಆಗಿತ್ತು. ಇದನ್ನು ಆ್ಯಡಮ್ ಜೆ ಗ್ರಾವೆಸ್ ನಿರ್ದೇಶನ ಮಾಡಿದ್ದರು, ದೆಹಲಿಯ ಸ್ಲಂನ ಇಬ್ಬರು ಬಾಲಕಿಯರ ಕತೆಯನ್ನು ಈ ಕಿರುಚಿತ್ರ ಒಳಗೊಂಡಿದೆ.

ಇದನ್ನೂ ಓದಿ: ಆಸ್ಕರ್​ಗೆ ನಾಮಿನೇಟ್ ಆದ ಪ್ರಿಯಾಂಕಾ ಚೋಪ್ರಾ ನಿರ್ಮಾಣದ ಕಿರುಚಿತ್ರ

‘ಐ ಆಮ್ ನಾಟ್ ಎ ರೊಬಾಟ್’, ‘ಎ ಲಿಯನ್’, ‘ದಿ ಲಾಸ್ಟ್ ರೇಂಜರ್’, ‘ದಿ ಮ್ಯಾನ್ ಹು ಕುಡ್ ನಾಟ್ ರಿಮೇನ್ ಸೈಲೆಂಟ್’ ಕಿರುಚಿತ್ರಗಳು ‘ಅನುಜಾ’ ಕಿರುಚಿತ್ರದ ಜೊತೆಗೆ ಸ್ಪರ್ಧೆಯಲ್ಲಿದ್ದವು. ಈ ಪೈಕಿ ಅಂತಿಮವಾಗಿ ‘ಐ ಆಮ್ ನಾಟ್ ಎ ರೊಬಾಟ್ ಅವಾರ್ಡ್ ಗೆದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:56 am, Mon, 3 March 25

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ