ಆಸ್ಕರ್ ಅವಾರ್ಡ್​​​ಗೆ ಇರಾನ್ ಡ್ರೋನ್ ದಾಳಿ ಭೀತಿ; ಎಚ್ಚರಿಸಿದ ಪೊಲೀಸರು

ಲಾಸ್ ಎಂಜಲೀಸ್‌ನಲ್ಲಿ 2026ರ ಆಸ್ಕರ್ ಪ್ರಶಸ್ತಿ ಸಮಾರಂಭಕ್ಕೆ ಸಿದ್ಧತೆ ನಡೆಯುತ್ತಿದ್ದು, ಇರಾನ್ ದಾಳಿಯ ಭೀತಿ ಆವರಿಸಿದೆ. ಅಮೆರಿಕ-ಇಸ್ರೇಲ್ vs ಇರಾನ್ ಸಂಘರ್ಷದಿಂದ ಡ್ರೋನ್ ದಾಳಿಯ ಎಚ್ಚರಿಕೆ ನೀಡಲಾಗಿದೆ. ಎಫ್‌ಬಿಐ ಸೂಚನೆಯಂತೆ ಡಾಲ್ಬಿ ಥಿಯೇಟರ್ ಸುತ್ತ ಭದ್ರತೆ ಬಿಗಿಗೊಳಿಸಲಾಗಿದೆ. ಅಕಾಡೆಮಿ ಅವಾರ್ಡ್ಸ್ ಕಾರ್ಯಕ್ರಮದ ರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಆಸ್ಕರ್ ಅವಾರ್ಡ್​​​ಗೆ ಇರಾನ್ ಡ್ರೋನ್ ದಾಳಿ ಭೀತಿ; ಎಚ್ಚರಿಸಿದ ಪೊಲೀಸರು
ಆಸ್ಕರ್

Updated on: Mar 12, 2026 | 3:04 PM

ಆಸ್ಕರ್ ಅವಾರ್ಡ್ (Oscar Awards) ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಅಮೆರಿಕದ ಲಾಸ್ ಎಂಜಲೀಸ್​​​ನಲ್ಲಿರುವ ಹಾಲಿವುಡ್ ಸ್ಟುಡಿಯೋದ ಡಾಲ್ಬಿ ಥಿಯೇಟರ್​​​ನಲ್ಲಿ ನಡೆಯಲಿದೆ. ಈಗ ಈ ಶೋಗೆ ಇರಾನ್ ದಾಳಿಯ ಭಯ ಕಾಡುತ್ತಿದೆ. ಅಮೆರಿಕ, ಇಸ್ರೇಲ್ vs ಇರಾನ್ ಎಂಬ ಪರಿಸ್ಥಿತಿ ನಿರ್ಮಾಣ ಆಗಿದೆ. ದಾಳಿ-ಪ್ರತಿದಾಳಿಗಳು ನಡೆಯುತ್ತಲೇ ಇವೆ. ಅಮೆರಿಕದ ಕ್ಯಾಲಿಫೋರ್ನಿಯಾ ಮೇಲೆ ದಾಳಿ ನಡೆಯುವ ಆತಂಕವೂ ಇದೆ.

ಸದ್ಯ ಹಾಲಿವುಡ್ ಸ್ಟುಡಿಯೋದಲ್ಲಿ ಆಸ್ಕರ್​ ಅವಾರ್ಡ್​​ಗೆ ಸಿದ್ಧತೆಗಳು ನಡೆಯುತ್ತಿವೆ. ಸಿನಿಮಾ ಜಗತ್ತಿನ ದೊಡ್ಡ ಹಬ್ಬದ ಆಚರಣೆಗೆ ಎಲ್ಲರೂ ರೆಡಿ ಆಗುತ್ತಿದ್ದಾರೆ. ಈ ಮಧ್ಯೆ ಎಫ್​​​ಬಿಐ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಆಸ್ಕರ್ ನಡೆಯುವ ಜಾಗದಲ್ಲಿ ಭದ್ರತೆ ಹೆಚ್ಚುಸುವಂತೆ ಸೂಚಿಸಿದ್ದಾರೆ. ಡ್ರೋನ್ ದಾಳಿ ನಡೆಯುವ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ತೀವ್ರ ಕಾಡ್ಗಿಚ್ಚು; ಆಸ್ಕರ್ ಅವಾರ್ಡ್ ಕಾರ್ಯಕ್ರಮ ರದ್ದು?

ಎಬಿಸಿ ನ್ಯೂಸ್ ವರದಿ ಮಾಡಿದ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಇರಾನ್ ಹಾಗೂ ಇಸ್ರೇಲ್ ಮಧ್ಯೆ ಯುದ್ಧ ಭೀತಿ ಮೂಡಿದೆ. ಇರಾನ್ ಮೇಲೆ ಅಮೆರಿಕ ನಡೆಸಿರುವ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಪಶ್ಚಿಮ ಕರಾವಳಿಯತ್ತ ಇರಾನ್ ಡ್ರೋನ್‌ ದಾಳಿ ಮಾಡಬಹುದು ಎನ್ನಲಾಗಿದೆ. ಆಸ್ಕರ್ ಅವಾರ್ಡ್​​​ ಕಾರ್ಯಕ್ರಮದಲ್ಲಿ ಸಾಕಷ್ಟು ದೊಡ್ಡ ಸೆಲೆಬ್ರಿಟಿಗಳು ಭಾಗಿ ಆಗುತ್ತಾರೆ. ಈ ಸಂದರ್ಭದಲ್ಲಿ ದಾಳಿ ನಡೆದರೆ ಅಮೆರಿಕಕ್ಕೆ ಭಾರೀ ನಷ್ಟ ಉಂಟಾಗಲಿದೆ.
ಫೆಬ್ರವರಿ ತಿಂಗಳಲ್ಲಿ ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ದಾಳಿ ಮಾಡಿತು. ಈ ಮೂಲಕ ಅವರ ಸುಪ್ರೀಂ ನಾಯಕ, ಅಯತೊಲ್ಲಾ ಅಲಿ ಖಮೇನಿ ಹತ್ಯೆ ಮಾಡಿದರು. ಇದು ಇರಾನ್​​ನ ಕೆರಳಿಸಿದೆ.

ಅಕಾಡೆಮಿ ಅವಾರ್ಡ್ಸ್ ಕಾರ್ಯಮ್ರಮದ ದಿನಾಂಕ

98ನೇ ಸಾಲಿನ ಆಸ್ಕರ್ ಅವಾರ್ಡ್ಸ್ 2026ರ ಮಾರ್ಚ್ 15ರಂದು (ಭಾರತೀಯ ಕಾಲಮಾನ: ಮಾರ್ಚ್ 16, ಮುಂಜಾನೆ 4.30) ನಡೆಯಲಿದೆ. ಕಾಮಿಡಿಯನ್ ಒ ಬ್ರೇನ್ ಅವರು ಈ ಶೋನ ನಡೆಸಿಕೊಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us