ಮಲಯಾಳಂನ ‘2018’ ಸಿನಿಮಾ (2018 Movie) ಬಾಕ್ಸ್ ಆಫೀಸ್ನಲ್ಲಿ ಸಖತ್ ಕಮಾಯಿ ಮಾಡಿದೆ. ಗಲ್ಲಾಪೆಟ್ಟಿಗೆಯಲ್ಲಿ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಈ ಚಿತ್ರ ದಾಖಲೆ ಬರೆದಿದೆ. ಮಲಯಾಳಂನಲ್ಲಿ ಸೂಪರ್ ಹಿಟ್ ಆದ ಬಳಿಕ ತೆಲುಗಿಗೂ ಡಬ್ ಆಗಿ ಈ ಸಿನಿಮಾ ಅಬ್ಬರಿಸುತ್ತಿದೆ. ಚಿತ್ರಮಂದಿರದಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿರುವಾಗಲೇ ಇದರ ಒಟಿಟಿ ದಿನಾಂಕದ ಬಗ್ಗೆ ಮಾಹಿತಿ ಹೊರಬಿದ್ದಿದೆ. ಜೂನ್ 7ರಂದು ‘2018’ ಸಿನಿಮಾ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ. ‘ಸೋನಿ ಲಿವ್’ (Sony Liv) ಒಟಿಟಿ ಸಂಸ್ಥೆಯು ಈ ಚಿತ್ರದ ಪ್ರಸಾರ ಹಕ್ಕುಗಳನ್ನು ಖರೀದಿಸಿದೆ. ಥಿಯೇಟರ್ನಲ್ಲಿ ಮಿಸ್ ಮಾಡಿಕೊಂಡವರು ಒಟಿಟಿಯಲ್ಲಿ ಈ ಸಿನಿಮಾ ನೋಡಿ ಎಂಜಾಯ್ ಮಾಡಲು ದಿನಗಣನೆ ಆರಂಭ ಆಗಿದೆ. ಈ ಚಿತ್ರದಲ್ಲಿ ಟೊವಿನೋ ಥಾಮಸ್ (Tovino Thomas) ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಒಟಿಟಿ ಮೂಲಕ ‘2018’ ಸಿನಿಮಾ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ತಲುಪಲಿದೆ.
ಯಾವುದೇ ಸೂಪರ್ ಹಿಟ್ ಸಿನಿಮಾವು ಒಟಿಟಿಯಲ್ಲಿ ರಿಲೀಸ್ ಆಗಲಿದೆ ಎಂದಾಗ ಸಹಜವಾಗಿಯೇ ಪ್ರೇಕ್ಷಕರಿಗೆ ಖುಷಿ ಆಗುತ್ತದೆ. ಆದರೆ ‘2018’ ಸಿನಿಮಾ ಒಟಿಟಿಗೆ ಎಂಟ್ರಿ ನೀಡುತ್ತಿರುವುದಕ್ಕೆ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ‘ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾಗೆ ಕಮಾಯಿ ಚೆನ್ನಾಗಿ ಆಗುತ್ತಿದೆ. ಹಾಗಿರುವಾಗ ಇಷ್ಟು ಅವಸರದಲ್ಲಿ ಒಟಿಟಿಯಲ್ಲಿ ಪ್ರಸಾರ ಮಾಡುವ ಅಗತ್ಯ ಏನಿದೆ. ಒಟಿಟಿ ಪ್ರಸಾರವನ್ನು ಮುಂದೂಡಬಹುದಲ್ಲವೇ’ ಎಂದು ನೆಟ್ಟಿಗರು ಪ್ರಶ್ನೆಸಿದ್ದಾರೆ. ‘ಮಲಯಾಳಂನಲ್ಲಿ ಈ ಸಿನಿಮಾ ಸೂಪರ್ ಹಿಟ್ ಆಗಿದ್ದು, ಬೇರೆ ಭಾಷೆಗಳಿಗೂ ಡಬ್ ಆಗಿ ತೆರೆಕಂಡಿದೆ. ಆ ಭಾಷೆಗಳಿಂದಲೂ ಉತ್ತಮ ಕಲೆಕ್ಷನ್ ಆಗುತ್ತಿದೆ. ಇಂಥ ಸಂದರ್ಭದಲ್ಲಿ ಒಟಿಟಿ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು ಸರಿಯಲ್ಲ’ಎಂಬ ಅಭಿಪ್ರಾಯ ಕೂಡ ಪ್ರೇಕ್ಷಕರಿಂದ ವ್ಯಕ್ತವಾಗಿದೆ.
A movie that took the box office by storm!
The trailer is out now for 2018. Streaming exclusively on Sony LIV from June 7th #SonyLIV #2018OnSonyLIV #BiggestBlockbuster #BasedOnTrueStory @ttovino #JudeAnthanyJoseph @Aparnabala2 @LalDirector @AjuVarghesee @actorasifali pic.twitter.com/501TyH8oFA— Sony LIV (@SonyLIV) May 29, 2023
2018ರಲ್ಲಿ ಕೇರಳದಲ್ಲಿ ಉಂಟಾದ ಪ್ರವಾಹವನ್ನು ಆಧರಿಸಿ ‘2018’ ಸಿನಿಮಾ ಸಿದ್ಧವಾಗಿದೆ. ಹಲವರ ಪ್ರಾಣಹಾನಿ, ಆಸ್ತಿಪಾಸ್ತಿ ನಷ್ಟದ ಘಟನೆಗಳನ್ನು ಈ ಚಿತ್ರದ ಮೂಲಕ ತೋರಿಸಲಾಗಿದೆ. ಅತಿ ಕಷ್ಟದ ಸಂದರ್ಭದಲ್ಲಿ ಕೇರಳದ ಪ್ರತಿಯೊಬ್ಬರು ಹೇಗೆ ನಡೆದುಕೊಂಡರು ಎಂಬ ವಿವರ ಈ ಸಿನಿಮಾದಲ್ಲಿ. ‘ಪ್ರತಿಯೊಬ್ಬರೂ ಹೀರೋ’ ಎಂಬ ಟ್ಯಾಗ್ಲೈನ್ ಗಮನ ಸೆಳೆದಿದೆ. 2018ರ ಪ್ರವಾಹದಲ್ಲಿ ಕೇರಳದ 400ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು. ಅನೇಕರು ನಾಪತ್ತೆಯಾದರು. 1924ರ ಬಳಿಕ ಕೇರಳದಲ್ಲಿ ಉಂಟಾದ ಅತಿ ಭೀಕರ ಪ್ರವಾಹ ಅದು.
ಮಲಯಾಳಂ ಚಿತ್ರರಂಗದ ಮೇಲೆ ನಿಗಾ: ಚಿತ್ರೀಕರಣ ಸೆಟ್ನಲ್ಲಿ ಮಾರುವೇಷದಲ್ಲಿ ಪೊಲೀಸರು
ಈವರೆಗೂ 160 ಕೋಟಿ ರೂಪಾಯಿಗಳನ್ನು ಗಳಿಸುವ ಮೂಲಕ ಮಲಯಾಳಂ ಚಿತ್ರರಂಗದ ಅತಿ ದೊಡ್ಡ ಬ್ಲಾಕ್ ಬಸ್ಟರ್ ಸಿನಿಮಾ ಎಂಬ ಖ್ಯಾತಿಗೆ ‘2018’ ಒಳಗಾಗಿದೆ. ಟೊವಿನೋ ಥಾಮಸ್ ಜೊತೆ ಆಸಿಫ್ ಅಲಿ, ಅಪರ್ಣಾ ಬಾಲಮುರಳಿ, ವಿನೀತ್ ಶ್ರೀನಿವಾಸನ್, ಕಲೈಯರಸನ್, ಸುದೇಶ್, ಅಜು ವರ್ಗೀಸ್, ತನ್ವಿ ರಾಮ್, ಗೌತಮಿ ನಾಯರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಜೂಡ್ ಆಂಥೊನಿ ಜೋಸೆಫ್ ಅವರು ನಿರ್ದೇಶನ ಮಾಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.