ಬಾಲಿವುಡ್​ನಲ್ಲಿ ಸೋತ ಆಮಿರ್ ಖಾನ್​ ನಟನೆಯ ‘ಲಾಲ್​ ಸಿಂಗ್ ಚಡ್ಡಾ’ಗೆ ಒಟಿಟಿಯಲ್ಲಿ ಭವ್ಯ ಸ್ವಾಗತ  

 ‘ಅಟ್ಯಾಕ್’ ಸೇರಿದಂತೆ ಅನೇಕ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಸೋತವು. ಆದರೆ, ಈ ಚಿತ್ರಗಳು ಒಟಿಟಿಯಲ್ಲಿ ಗೆದ್ದವು. ಈ ಸಾಲಿಗೆ ಈಗ ಆಮಿರ್ ಖಾನ್ ಸಿನಿಮಾ ಕೂಡ ಸೇರ್ಪಡೆ ಆಗುತ್ತಿದೆ.

ಬಾಲಿವುಡ್​ನಲ್ಲಿ ಸೋತ ಆಮಿರ್ ಖಾನ್​ ನಟನೆಯ ‘ಲಾಲ್​ ಸಿಂಗ್ ಚಡ್ಡಾ’ಗೆ ಒಟಿಟಿಯಲ್ಲಿ ಭವ್ಯ ಸ್ವಾಗತ  
ಆಮಿರ್ ಖಾನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 13, 2022 | 9:18 PM

ಆಮಿರ್ ಖಾನ್ (Aamir Khan) ನಟನೆಯ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡಲು ಸಾಧ್ಯವಾಗಿಲ್ಲ. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ರೂಪಾಯಿ ಕೂಡ ಮುಟ್ಟದೆ ಆಟ ಮುಗಿಸಿದೆ. ಈ ಚಿತ್ರವನ್ನು ತುಂಬಾನೇ ತಡವಾಗಿ ಒಟಿಟಿಯಲ್ಲಿ ತರುವ ಆಲೋಚನೆ ಚಿತ್ರತಂಡಕ್ಕೆ ಇತ್ತು. ಆದರೆ, ವಿಮರ್ಶೆಯಲ್ಲಿ ಚಿತ್ರಕ್ಕೆ ಹೇಳಿಕೊಳ್ಳುವಂತಹ ಮೆಚ್ಚುಗೆ ಸಿಗದ ಕಾರಣ ಸಿನಿಮಾ ಕೆಲವೇ ವಾರಗಳಲ್ಲಿ ಥಿಯೇಟರ್​ನಿಂದ ಕಾಲ್ಕಿತ್ತಿತು. ಈಗ ‘ಲಾಲ್ ಸಿಂಗ್ ಚಡ್ಡಾ’ (Laal Singh Chaddha) ಸಿನಿಮಾ ಒಟಿಟಿಯಲ್ಲಿ ಗೆದ್ದಿದೆ. ನೆಟ್​​ಫ್ಲಿಕ್ಸ್​ನಲ್ಲಿ ಪ್ರಸಾರಕಂಡ ಈ ಚಿತ್ರವನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ.

ಆಗಸ್ಟ್ 11ರಂದು ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಚಿತ್ರಮಂದಿರದಲ್ಲಿ ರಿಲೀಸ್ ಆಯಿತು. ಬೈಕಾಟ್ ಬಿಸಿಯ ಜತೆಗೆ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆಗಳು ಸಿಕ್ಕವು. ಅಕ್ಟೋಬರ್ 5ರಂದು ‘ಲಾಲ್​ ಸಿಂಗ್ ಚಡ್ಡಾ’ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಒಟಿಟಿಯಲ್ಲಿ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ಈ ಸಿನಿಮಾ ನೆಟ್​ಫ್ಲಿಕ್ಸ್ ಪ್ಲಾಟ್​ಫಾರ್ಮ್​​ನಲ್ಲಿ ಒಳ್ಳೆಯ ವಿಮರ್ಶೆ ಪಡೆದುಕೊಳ್ಳುತ್ತಿದೆ. ಟ್ರೆಂಡಿಂಗ್ ವಿಚಾರದಲ್ಲಿ ಭಾರತದಲ್ಲಿ ಮೊದಲ ಸ್ಥಾನ ಹಾಗೂ ವಿಶ್ವ ಮಟ್ಟದಲ್ಲಿ ಸಿನಿಮಾ ಎರಡನೇ ಸ್ಥಾನದಲ್ಲಿದೆ.

‘ಲಾಲ್ ಸಿಂಗ್ ಚಡ್ಡಾ’ ಚಿತ್ರ ಬರೋಬ್ಬರಿ 66 ಲಕ್ಷ ಗಂಟೆ ವೀಕ್ಷಣೆ ಕಂಡಿದೆ. ವಿದೇಶಗಳಲ್ಲೂ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಈ ವಾರ ನೆಟ್​ಫ್ಲಿಕ್ಸ್​ನಲ್ಲಿ13 ರಾಷ್ಟ್ರಗಳಲ್ಲಿ ಈ ಚಿತ್ರ  ಟಾಪ್ 10 ಸ್ಥಾನದಲ್ಲಿದೆ. ಆಮಿರ್ ಖಾನ್ ಚಿತ್ರಕ್ಕೆ ಒಟಿಟಿಯಲ್ಲಿ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿರುವ ವಿಚಾರವನ್ನು ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ
Image
‘ನಯನತಾರಾಗೆ ಮಗು ಕೂಡ ಜನಿಸಿತು, ಮದುವೆ ವಿಡಿಯೋ ಎಲ್ಲಿ?’ ನೆಟ್​​ಫ್ಲಿಕ್ಸ್​ಗೆ ನೆಟ್ಟಿಗರ ಪ್ರಶ್ನೆ
Image
‘ಲಾಲ್ ಸಿಂಗ್ ಚಡ್ಡಾ’ದಿಂದ ಆಮಿರ್ ಖಾನ್​ಗೆ 100 ಕೋಟಿ ರೂಪಾಯಿ ನಷ್ಟ​? ಸೋಲಿನ ಹೊಣೆ ಹೊತ್ತ ನಟ
Image
Box Office Collection: ಆಮಿರ್​​ Vs ಅಕ್ಷಯ್​​; ಮೊದಲ ದಿನ ‘ಲಾಲ್​ ಸಿಂಗ್​ ಚಡ್ಡಾ’ ಗಳಿಕೆ 12 ಕೋಟಿ ರೂ., ‘ರಕ್ಷಾ ಬಂಧನ್’​ಗೆ 8.20 ಕೋಟಿ
Image
Laal Singh Chaddha Twitter review: ಲಾಲ್​ ಸಿಂಗ್ ಚಡ್ಡಾ ಟ್ವಿಟರ್​ ವಿಮರ್ಶೆ: ಅಮೀರ್ ಅಭಿನಯಕ್ಕೆ ಸಿನಿಪ್ರಿಯರು ಫಿದಾ

‘ಅಟ್ಯಾಕ್’ ಸೇರಿದಂತೆ ಅನೇಕ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಸೋತವು. ಆದರೆ, ಈ ಚಿತ್ರಗಳು ಒಟಿಟಿಯಲ್ಲಿ ಗೆದ್ದವು. ಈ ಸಾಲಿಗೆ ಈಗ ಆಮಿರ್ ಖಾನ್ ಸಿನಿಮಾ ಕೂಡ ಸೇರ್ಪಡೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಅವರ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಗೆಲ್ಲಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.

ಇದನ್ನೂ ಓದಿ: ‘ಲಾಲ್ ಸಿಂಗ್ ಚಡ್ಡಾ’ದಿಂದ ಆಮಿರ್ ಖಾನ್​ಗೆ 100 ಕೋಟಿ ರೂಪಾಯಿ ನಷ್ಟ​? ಸೋಲಿನ ಹೊಣೆ ಹೊತ್ತ ನಟ

ಆಸ್ಕರ್ ವಿನ್ನಿಂಗ್ ಸಿನಿಮಾ ‘ಫಾರೆಸ್ಟ್​ ಗಂಪ್​​’ನ ಹಿಂದಿ ರಿಮೇಕ್ ‘ಲಾಲ್ ಸಿಂಗ್ ಚಡ್ಡಾ’. ತುಂಬಾನೇ ಕಷ್ಟಪಟ್ಟು ಈ ಚಿತ್ರದ ರಿಮೇಕ್ ರೈಟ್ಸ್​ ಅನ್ನು ಆಮಿರ್ ಖಾನ್ ತಂದಿದ್ದರು. ಈ ಚಿತ್ರಕ್ಕಾಗಿ ನಾಲ್ಕೈದು ವರ್ಷ ಅವರು ಮುಡಿಪಿಟ್ಟಿದ್ದರು. ಎಲ್ಲವೂ ವ್ಯರ್ಥವಾದಂತೆ ಆಯ್ತು ಎಂದು ಬಹುತೇಕರು ಭಾವಿಸಿದ್ದರು. ಆದರೆ, ಒಟಿಟಿಯಲ್ಲಿ ಸಿನಿಮಾ ನೋಡಿ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿರುವುದು ಚಿತ್ರತಂಡದ ಖುಷಿ ಹೆಚ್ಚಿಸಿದೆ.

Published On - 8:47 pm, Thu, 13 October 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ