AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬರಲಿದೆ ‘ಆಚಾರ್ ಆ್ಯಂಡ್ ಕೋ..’ ಸಿನಿಮಾ; ರಿಲೀಸ್ ದಿನಾಂಕ ಘೋಷಿಸಿದ ಅಮೇಜಾನ್ ಪ್ರೈಮ್ ವಿಡಿಯೋ

60ರ ದಶಕದ ಕಥೆಯನ್ನು ನಿರ್ದೇಶಕಿ ಸಿಂಧು ಶ್ರೀನಿವಾಸಮೂರ್ತಿ ಅದ್ಭುತವಾಗಿ ಕಟ್ಟಿಕೊಟ್ಟರು. ಅಂದಿನ ಕಾಲದ ಕೂಡುಕುಟುಂಬದ ಕಥೆಯನ್ನು ಸಿನಿಮಾದಲ್ಲಿ ಹೇಳಲಾಗಿದೆ. ಆಗಸ್ಟ್ 22ರಂದು ಚಿತ್ರ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಾಣುತ್ತಿದೆ.

ಒಟಿಟಿಗೆ ಬರಲಿದೆ ‘ಆಚಾರ್ ಆ್ಯಂಡ್ ಕೋ..’ ಸಿನಿಮಾ; ರಿಲೀಸ್ ದಿನಾಂಕ ಘೋಷಿಸಿದ ಅಮೇಜಾನ್ ಪ್ರೈಮ್ ವಿಡಿಯೋ
ಆಚಾರ್ ಆ್ಯಂಡ್ ಕೋ
Follow us
ರಾಜೇಶ್ ದುಗ್ಗುಮನೆ
|

Updated on: Aug 21, 2023 | 2:39 PM

ಪುನೀತ್ ರಾಜ್​ಕುಮಾರ್ ಪತ್ನಿ ಅಶ್ವಿನಿ (Ashwini Puneeth Rajkumar) ನಿರ್ಮಾಣದ ‘ಆಚಾರ್​ ಆ್ಯಂಡ್ ಕೋ’ ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗಿ ಸದ್ದು ಮಾಡಿತು. ಜುಲೈ 28ರಂದು ಥಿಯೇಟರ್​ನಲ್ಲಿ ರಿಲೀಸ್ ಆದ ಈ ಚಿತ್ರವನ್ನು ಅಭಿಮಾನಿಗಳು ಇಷ್ಟಪಟ್ಟರು. ಈ ಚಿತ್ರ ಈಗ ಒಟಿಟಿಗೆ ಕಾಲಿಡುತ್ತಿದೆ. ರಿಲೀಸ್ ಆದ ತಿಂಗಳ ಒಳಗೆ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ‘ಆಚಾರ್​ ಆ್ಯಂಡ್ ಕೋ’ (Achar & Co..) ಚಿತ್ರ ಪ್ರಸಾರ ಕಾಣಲು ರೆಡಿ ಆಗಿದೆ. ಥಿಯೇಟರ್​ನಲ್ಲಿ ಸಿನಿಮಾ ಮಿಸ್ ಮಾಡಿಕೊಂಡವರು ಅಮೇಜಾನ್ ಪ್ರೈಮ್ ವಿಡಿಯೋ ಒಟಿಟಿಯಲ್ಲಿ ನೋಡಬಹುದು.

60ರ ದಶಕದ ಕಥೆಯನ್ನು ನಿರ್ದೇಶಕಿ ಸಿಂಧು ಶ್ರೀನಿವಾಸಮೂರ್ತಿ ಅದ್ಭುತವಾಗಿ ಕಟ್ಟಿಕೊಟ್ಟರು. ಅಂದಿನ ಕಾಲದ ಕೂಡುಕುಟುಂಬದ ಕಥೆಯನ್ನು ಸಿನಿಮಾದಲ್ಲಿ ಹೇಳಲಾಗಿದೆ. ಆಗಸ್ಟ್ 22ರಂದು ಚಿತ್ರ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಾಣುತ್ತಿದೆ. ಸಿಂಧು ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಇವರ ಜೊತೆ ಅನಿರುದ್ಧ್ ಆಚಾರ್ಯ, ಹರ್ಷಿಲ್ ಕೌಶಿಕ್ ಹಾಗೂ ಸುಧಾ ಬೆಳವಾಡಿ ಮೊದಲಾದವರು ಬಣ್ಣ ಹಚ್ಚಿದ್ದಾರೆ.

ಹೊಸ ಪ್ರತಿಭೆಗಳಿಗೆ ಮಣೆ ಹಾಕಬೇಕು ಎಂಬುದು ಪುನೀತ್ ರಾಜ್​ಕುಮಾರ್ ಅವರ ಕನಸಾಗಿತ್ತು. ಈ ಕನಸನ್ನು ನನಸು ಮಾಡಲು ‘ಪಿಆರ್​ಕೆ ಪ್ರೊಡಕ್ಷನ್’ ಆರಂಭಿಸಿದರು. ಪುನೀತ್ ನಿಧನದ ಬಳಿಕ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ನಿರ್ಮಾಣ ಸಂಸ್ಥೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಈ ಚಿತ್ರದ ಕಥೆಯನ್ನು ಇಷ್ಟಪಟ್ಟು ಅವರು ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: ಅಮೆರಿಕ, ಆಸ್ಟ್ರೇಲಿಯಾದಲ್ಲೂ ರಿಲೀಸ್ ಆಗಲಿದೆ ‘ಆಚಾರ್​ ಆ್ಯಂಡ್ ಕೋ’; ಹೊಸ ಅಪ್​ಡೇಟ್ ನೀಡಿದ ತಂಡ

​​‘ಆಚಾರ್ & ಕೋ’ ಸಿನಿಮಾದ ಹಲವು ವಿಭಾಗದಲ್ಲಿ ಮಹಿಳೆಯರು ಕೆಲಸ ಮಾಡಿದ್ದಾರೆ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ. ನಿರ್ದೇಶಕರು, ನಿರ್ಮಾಪಕರು, ಸಂಗೀತ ನಿರ್ದೇಶಕರು, ಸೌಂಡ್ ಇಂಜಿನಿಯರ್, ವಸ್ತ್ರ ವಿನ್ಯಾಸಕರು, ಮುಖ್ಯ ಪಾತ್ರಧಾರಿ ಹೀಗೆ ಹಲವು ವಿಭಾಗಗಳಲ್ಲಿ ಮಹಿಳೆಯರೇ ಇದ್ದಾರೆ. ಈ ಕಾರಣಕ್ಕೆ ಸಿನಿಮಾ ವಿಶೇಷ ಎನಿಸಿಕೊಂಡಿದೆ. ಸಂಗೀತ ಸಂಯೋಜನೆಯನ್ನು ಬಿಂದುಮಾಲಿನಿ ನಾರಾಯಣಸ್ವಾಮಿ ಮಾಡಿದ್ದಾರೆ. ಕಾಸ್ಟ್ಯೂಮ್​ ಡಿಸೈನ್ ಅನ್ನು ಇಂಚರಾ ಸುರೇಶ್ ಮಾಡಿದ್ದಾರೆ. ಸೌಂಡ್ ಇಂಜಿನಿಯರ್ ಆಗಿ ಹೇಮಾ ಸುವರ್ಣ ಕೆಲಸ ಮಾಡಿದ್ದಾರೆ. ವಿಶ್ವಾಸ್ ಕಶ್ಯಪ್ ಅವರ ಕಲಾ ನಿರ್ದೇಶನ ಚಿತ್ರಕ್ಕಿದೆ. 60ರ ದಶಕದ ಸೆಟ್​ಗಳನ್ನು ನಿರ್ಮಾಣ ಮಾಡುವ ಚಾಲೆಂಜ್ ಇವರಿಗೆ ಇತ್ತು. ಅಭಿಮನ್ಯು ಸದಾನಂದ್ ಛಾಯಾಗ್ರಹಣ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ