Cuttputlli: ತಪ್ಪು ತಿದ್ದಿಕೊಂಡ ಅಕ್ಷಯ್​ ಕುಮಾರ್​; ಒಂದು ನಿರ್ಧಾರದಿಂದ ಆಯ್ತು ನೂರಾರು ಕೋಟಿ ರೂ. ಲಾಭ

Akshay Kumar | Cuttputlli: ಸೆಪ್ಟೆಂಬರ್​ 2ರಂದು ಈ ಚಿತ್ರದ ಸ್ಟ್ರೀಮಿಂಗ್​ ಆರಂಭ ಆಗಲಿದೆ. ಈಗಾಗಲೇ ರಿಲೀಸ್​ ಆಗಿರುವ ಟ್ರೇಲರ್​ ಸಖತ್​ ಕೌತುಕ ಮೂಡಿಸಿದೆ.

Cuttputlli: ತಪ್ಪು ತಿದ್ದಿಕೊಂಡ ಅಕ್ಷಯ್​ ಕುಮಾರ್​; ಒಂದು ನಿರ್ಧಾರದಿಂದ ಆಯ್ತು ನೂರಾರು ಕೋಟಿ ರೂ. ಲಾಭ
ಅಕ್ಷಯ್ ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on: Aug 26, 2022 | 9:36 AM

ನಟ ಅಕ್ಷಯ್​ ಕುಮಾರ್​ (Akshay Kumar) ಅವರಿಗೆ ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇದೆ. ಹಲವು ವರ್ಷಗಳಿಂದ ಅವರು ಹಿಂದಿ ಚಿತ್ರರಂಗದಲ್ಲಿ ಆಳ್ವಿಕೆ ಮಾಡಿಕೊಂಡು ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಅವರಿಗೆ ಯಾಕೋ ಅದೃಷ್ಟ ಕೈ ಹಿಡಿಯುತ್ತಿಲ್ಲ ಎಂಬುದು ಅಭಿಮಾನಿಗಳ ಪಾಲಿನ ಬೇಸರ. ಅವರ ಸಿನಿಮಾ ಮಾತ್ರವಲ್ಲದೇ ಇಡೀ ಬಾಲಿವುಡ್​ ಇಂಡಸ್ಟ್ರಿಯೇ ಸೊರಗಿದೆ. ಈ ವರ್ಷ ಚಿತ್ರಮಂದಿರದಲ್ಲಿ ರಿಲೀಸ್​ ಆದ ಅಕ್ಷಯ್​ ಕುಮಾರ್​ ಅವರ ಸಿನಿಮಾಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಆಗಿಲ್ಲ. ಹಾಗಾಗಿ ಅವರೀಗ ಒಂದು ಬುದ್ಧಿವಂತಿಕೆಯ ನಿರ್ಧಾರ ತೆಗೆದುಕೊಂಡಿದ್ದಾರೆ. ನೇರವಾಗಿ ಥಿಯೇಟರ್​ನಲ್ಲಿ ಸಿನಿಮಾ ರಿಲೀಸ್​ ಮಾಡಿ ಕೈ ಸುಟ್ಟುಕೊಳ್ಳುವಂತಹ ತಪ್ಪು ಮಾಡಲು ಅವರು ಸಿದ್ಧರಿಲ್ಲ. ಹಾಗಾಗಿ ಹೊಸ ಸಿನಿಮಾವನ್ನು ಒಟಿಟಿಯಲ್ಲಿ (OTT) ಬಿಡುಗಡೆ ಮಾಡುತ್ತಿದ್ದಾರೆ. ಅವರು ನಟಿಸಿರುವ ‘ಕಟ್​ಪುಟ್​ಲಿ’ ಸಿನಿಮಾ ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​ (Disney plus Hotstar) ಮೂಲಕ ರಿಲೀಸ್​ ಆಗಲಿದೆ.

ಚಿತ್ರಮಂದಿರದಲ್ಲಿ ಸಿನಿಮಾ ರಿಲೀಸ್​ ಮಾಡಿದರೆ ಖರ್ಚು ಜಾಸ್ತಿ. ಜನರು ಥಿಯೇಟರ್​ಗೆ ಬಂದು ಸಿನಿಮಾ ನೋಡದಿದ್ದರೆ ನಿರ್ಮಾಪಕರಿಗೆ ದೊಡ್ಡ ಮಟ್ಟದಲ್ಲಿ ನಷ್ಟ ಆಗುತ್ತದೆ. ಈ ವರ್ಷ ಬಿಡುಗಡೆಯಾದ ‘ಸಾಮ್ರಾಟ್​ ಪೃಥ್ವಿರಾಜ್​’, ‘ರಕ್ಷಾ ಬಂಧನ್​’, ‘ಬಚ್ಚನ್​ ಪಾಂಡೆ’ ಚಿತ್ರಗಳು ನಿರೀಕ್ಷಿತ ಮಟ್ಟದಲ್ಲಿ ಹಣ ಗಳಿಸಲು ಸಾಧ್ಯವಾಗದೇ ಸೋತವು. ಹಾಗಾಗಿ ‘ಕಟ್​ಪುಟ್​ಲಿ’ ಸಿನಿಮಾ ತಂಡದವರು ಥಿಯೇಟರ್​ ಸಹವಾಸ ಬೇಡ ಅಂತ ನೇರವಾಗಿ ಒಟಿಟಿ ಹಾದಿ ಹಿಡಿದಿದ್ದಾರೆ.

ಅಕ್ಷಯ್​ ಕುಮಾರ್​ ನಟನೆಯ ‘ಅತರಂಗಿ ರೇ’, ‘ಲಕ್ಷ್ಮೀ’ ಸಿನಿಮಾ ಕೂಡ ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​ ಮೂಲಕ ರಿಲೀಸ್​ ಆಗಿ ಲಾಭ ಗಳಿಸಿದ್ದವು. ಹಾಗಾಗಿ ಇದೇ ಸಂಸ್ಥೆಗೆ ಈಗ ‘ಕಟ್​ಪುಟ್​ಲಿ’ ಸಿನಿಮಾದ ಹಕ್ಕುಗಳನ್ನು ಮಾರಲಾಗಿದೆ. ಮೂಲಗಳ ಪ್ರಕಾರ ಬರೋಬ್ಬರಿ 125 ಕೋಟಿ ರೂಪಾಯಿಗೆ ಸಿನಿಮಾ ಸೇಲ್​ ಆಗಿದೆ. ಇದರಿಂದ ನಿರ್ಮಾಪಕರ ಮುಖದಲ್ಲಿ ನಗು ಮೂಡಿದೆ ಎಂದು ‘ಬಾಲಿವುಡ್​ ಹಂಗಾಮ’ ವರದಿ ಮಾಡಿದೆ.

ಇದನ್ನೂ ಓದಿ
Image
ಅಕ್ಷಯ್​ ಕುಮಾರ್​ಗೆ 3ನೇ ಸೋಲು; ಭಾರತ ಬಿಟ್ಟು ಕೆನಡಾಗೆ ಪಲಾಯನ ಮಾಡುವ ಪ್ಲ್ಯಾನ್​ ನೆನಪಿಸಿದ ನೆಟ್ಟಿಗರು
Image
Akshay Kumar: ಸೋದರಿಯನ್ನು ನೆನೆದು ಎಲ್ಲರ ಎದುರು ಕಣ್ಣೀರು ಹಾಕಿದ ಅಕ್ಷಯ್​ ಕುಮಾರ್​; ವಿಡಿಯೋ ವೈರಲ್​
Image
Akshay Kumar: ಅತಿ ಹೆಚ್ಚು ಟ್ಯಾಕ್ಸ್​ ಪಾವತಿಸಿದ ಅಕ್ಷಯ್​ ಕುಮಾರ್​; ಆದಾಯ ತೆರಿಗೆ ಇಲಾಖೆಯಿಂದ ಮೆಚ್ಚುಗೆ ಪತ್ರ
Image
Akshay Kumar: ರಾಜಕೀಯಕ್ಕೆ ಬರುತ್ತಾರಾ ಅಕ್ಷಯ್​ ಕುಮಾರ್​? ನೇರ ಪ್ರಶ್ನೆಗೆ ಉತ್ತರಿಸಿದ ‘ಕಿಲಾಡಿ’ ನಟ

‘ಕಟ್​ಪುಟ್​ಲಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಅವರು ಪೊಲೀಸ್​ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ರಾಕುಲ್​ ಪ್ರೀತ್​ ಸಿಂಗ್​ ಕಾಣಿಸಿಕೊಂಡಿದ್ದಾರೆ. ರಂಜಿತ್​ ಎಂ. ತಿವಾರಿ ನಿರ್ದೇಶನ ಮಾಡಿದ್ದು, ‘ಪೂಜಾ ಎಂಟರ್​ಟೇನ್ಮೆಂಟ್’​ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಸೆಪ್ಟೆಂಬರ್​ 2ರಂದು ಈ ಚಿತ್ರದ ಸ್ಟ್ರೀಮಿಂಗ್​ ಆರಂಭ ಆಗಲಿದೆ. ಈಗಾಗಲೇ ರಿಲೀಸ್​ ಆಗಿರುವ ಟ್ರೇಲರ್​ ಸಖತ್​ ಕೌತುಕ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ