Alia Bhatt: ‘ರಣವೀರ್​ ಸಿಂಗ್​ ಜತೆ ಏನು ಬೇಕಾದ್ರೂ ಮಾತಾಡ್ತೀನಿ’; ಮದುವೆ ಬಳಿಕ ಆಲಿಯಾ ಭಟ್​ ಅಚ್ಚರಿಯ ಹೇಳಿಕೆ

Koffee with Karan 7: ಸೆಲೆಬ್ರಿಟಿಗಳ ಬದುಕಿನ ವೈಯಕ್ತಿಕ ವಿಚಾರಗಳನ್ನು ಕರಣ್​ ಜೋಹರ್​ ಅವರು ಕೆದಕುತ್ತಾರೆ. ಹಾಗಾಗಿ ಪ್ರೇಕ್ಷಕರಿಗೆ ‘ಕಾಫಿ ವಿತ್​ ಕರಣ್​’ ಶೋ ಬಗ್ಗೆ ಹೆಚ್ಚು ಆಸಕ್ತಿ ಇದೆ.

Alia Bhatt: ‘ರಣವೀರ್​ ಸಿಂಗ್​ ಜತೆ ಏನು ಬೇಕಾದ್ರೂ ಮಾತಾಡ್ತೀನಿ’; ಮದುವೆ ಬಳಿಕ ಆಲಿಯಾ ಭಟ್​ ಅಚ್ಚರಿಯ ಹೇಳಿಕೆ
ಆಲಿಯಾ ಭಟ್​. ರಣವೀರ್​ ಸಿಂಗ್​. ರಣಬೀರ್​ ಕಪೂರ್​
Follow us
TV9 Web
| Updated By: ಮದನ್​ ಕುಮಾರ್​

Updated on: Jul 08, 2022 | 10:13 AM

ನಟಿ ಆಲಿಯಾ ಭಟ್​ (Alia Bhatt) ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ವರ್ಷ ಏಪ್ರಿಲ್​ನಲ್ಲಿ ನಟ ರಣಬೀರ್​ ಕಪೂರ್​ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸದ್ಯ ಅನೇಕ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿರುವ ಈ ಜನಪ್ರಿಯ ನಟಿ ‘ಕಾಫಿ ವಿತ್​ ಕರಣ್​ ಸೀಸನ್​ 7’ (Koffee with Karan) ಶೋಗೆ ಅತಿಥಿಯಾಗಿ ಬಂದಿದ್ದಾರೆ. ಅವರ ಜೊತೆ ರಣವೀರ್​ ಸಿಂಗ್​ ಕೂಡ ಸಾತ್​ ನೀಡಿದ್ದಾರೆ. ಜುಲೈ 7ರಂದು ಮೊದಲ ಎಪಿಸೋಡ್​ ಪ್ರಸಾರ ಆಗಿದೆ. ಇದರಲ್ಲಿ ಅನೇಕ ವಿಚಾರಗಳನ್ನು ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ (Ranveer Singh) ಹಂಚಿಕೊಂಡಿದ್ದಾರೆ. ಕರಣ್​ ಜೋಹರ್​ ಕೇಳಿದ ಕೆಲವು ನೇರ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದ್ದಾರೆ.

‘ಗಲ್ಲಿ ಬಾಯ್​’ ಸಿನಿಮಾದಲ್ಲಿ ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಅವರು ತೆರೆ ಹಂಚಿಕೊಂಡಿದ್ದರು. ಆ ವೇಳೆ ಅವರಿಬ್ಬರ ನಡುವೆ ಆತ್ಮೀಯತೆ ಬೆಳೆಯಿತು. ಇಬ್ಬರೂ ಬೆಸ್ಟ್​ ಫ್ರೆಂಡ್ಸ್​ ಆದರು. ಈಗ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ಅವರು ಮತ್ತೆ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿರುವುದು ಕರಣ್​ ಜೋಹರ್​. ಆ ಕಾರಣದಿಂದ ತಮ್ಮ ಸಿನಿಮಾದ ನಾಯಕ-ನಾಯಕಿಯನ್ನೇ ಮೊದಲ ಎಪಿಸೋಡ್​ಗೆ ಕರಣ್​ ಆಹ್ವಾನಿಸಿದ್ದಾರೆ.

ಸಾಮಾನ್ಯವಾಗಿ ಮದುವೆ ಬಳಿಕ ಬೇರೆ ನಟರ ಜೊತೆ ನಟಿಯರು ಹೆಚ್ಚು ಆಪ್ತವಾಗಿ ಇರುವುದಿಲ್ಲ. ಆದರೆ ಆಲಿಯಾ ಭಟ್​ ಹಾಗಲ್ಲ. ರಣಬೀರ್ ಕಪೂರ್​ ಜೊತೆ ಮದುವೆ ಆದ ನಂತರವೂ ಅವರು ರಣವೀರ್ ಸಿಂಗ್​ ಜೊತೆ ಆತ್ಮೀಯತೆ ಕಾಯ್ದುಕೊಂಡಿದ್ದಾರೆ. ‘ರಣವೀರ್​ ಸಿಂಗ್​ ಜತೆ ನಾನು ಏನು ಬೇಕಾದರೂ ಮಾತನಾಡುತ್ತೇನೆ’ ಎಂದು ಅವರು ಹೇಳಿದ್ದಾರೆ. ಸಂಜಯ್​ ಲೀಲಾ ಬನ್ಸಾಲಿ ಜೊತೆ ಹೇಗೆ ಕೆಲಸ ಮಾಡಬೇಕು ಎಂಬುದು ತಿಳಿಯದ ಕಾರಣ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಶೂಟಿಂಗ್​ ಸಮಯದಲ್ಲಿ ಆಲಿಯಾ ಕಷ್ಟಪಟ್ಟಿದ್ದರು. ಆಗ ಅವರಿಗೆ ಸೂಕ್ತ ಸಲಹೆ, ಮಾರ್ಗದರ್ಶನ ನೀಡಿದ್ದೇ ರಣವೀರ್​ ಸಿಂಗ್​ ಎಂಬುದು ಕೂಡ ‘ಕಾಫಿ ವಿತ್​ ಕರಣ್​ ಸೀಸನ್​ 7’ ಶೋನ ಮೊದಲ ಎಪಿಸೋಡ್​ನಲ್ಲಿ ಗೊತ್ತಾಗಿದೆ.

ಇದನ್ನೂ ಓದಿ
Image
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ
Image
‘ನನ್ನನ್ನೇಕೆ ದೂಷಿಸುತ್ತೀರಿ?’; ಏಕಾಏಕಿ ಸಿಟ್ಟಾದ ನಿರ್ಮಾಪಕ ಕರಣ್​ ಜೋಹರ್
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

ಇದನ್ನೂ ಓದಿ: Samantha: ಸಮಂತಾ-ನಾಗ ಚೈತನ್ಯ ವಿಚ್ಛೇದನಕ್ಕೆ ಅಸಲಿ ಕಾರಣ ಬಹಿರಂಗ ಆಗುವ ಸಮಯ ಬಂತಾ? ಹೆಚ್ಚಿತು ಕೌತುಕ

ಸಮಂತಾ ರುತ್​ ಪ್ರಭು, ಸಾರಾ ಅಲಿ ಖಾನ್​, ಜಾನ್ವಿ ಕಪೂರ್​ ಸೇರಿದಂತೆ ಅನೇಕ ನಟ-ನಟಿಯರು ಈ ಶೋಗೆ ಬರುವವರಿದ್ದಾರೆ. ಸೆಲೆಬ್ರಿಟಿಗಳ ಬದುಕಿನ ವೈಯಕ್ತಿಕ ವಿಚಾರಗಳನ್ನು ಕರಣ್​ ಜೋಹರ್​ ಕೆದಕಲಿದ್ದಾರೆ. ಹಾಗಾಗಿ ಪ್ರೇಕ್ಷಕರಿಗೆ ಈ ಶೋ ಬಗ್ಗೆ ಹೆಚ್ಚು ಆಸಕ್ತಿ ಇದೆ.

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್