AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬಂತು ಆಲಿಯಾ ಭಟ್, ಶಾರ್ವರಿ ಅಭಿನಯದ ‘ಆಲ್ಫಾ’ ಸಿನಿಮಾ

ಆಲಿಯಾ ಭಟ್, ಶಾರ್ವರಿ ಮಾತ್ರವಲ್ಲದೇ, ಬಾಬಿ ಡಿಯೋಲ್, ಅನಿಲ್ ಕಪೂರ್ ಕೂಡ ‘ಆಲ್ಫಾ’ ಸಿನಿಮಾದಲ್ಲಿ ನಟಿಸಿದ್ದಾರೆ. ‘ವಾರ್’ ಸಿನಿಮಾದ ಕಬೀರ್ ಪಾತ್ರಧಾರಿಯಾಗಿ ಹೃತಿಕ್ ರೋಷನ್ ಅವರ ಅತಿಥಿ ಪಾತ್ರವೂ ಈ ಚಿತ್ರದಲ್ಲಿದೆ. ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಸಾಧಾರಣ ಗಳಿಕೆ ಕಂಡಿದ್ದ ಈ ಚಿತ್ರ ಈಗ ಒಟಿಟಿಗೆ ಬಂದಿದೆ.

ಒಟಿಟಿಗೆ ಬಂತು ಆಲಿಯಾ ಭಟ್, ಶಾರ್ವರಿ ಅಭಿನಯದ ‘ಆಲ್ಫಾ’ ಸಿನಿಮಾ
Alpha Movie Poster
ಮದನ್​ ಕುಮಾರ್​
|

Updated on: Aug 27, 2026 | 5:01 PM

Share

ಖ್ಯಾತ ಬಾಲಿವುಡ್ ನಟಿ ಆಲಿಯಾ ಭಟ್ (Alia Bhatt) ಹಾಗೂ ಶಾರ್ವರಿ ವಾಘ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ‘ಆಲ್ಫಾ’ (Alpha) ಸಿನಿಮಾ ಈಗ ಒಟಿಟಿ ಅಂಗಳಕ್ಕೆ ಬಂದಿದೆ. ವೈಆರ್‌ಎಫ್‌ ಸ್ಪೈ ಯೂನಿವರ್ಸ್‌ನ ಮೊದಲ ಮಹಿಳಾ ಪ್ರಧಾನ ಆ್ಯಕ್ಷನ್ ಥ್ರಿಲ್ಲರ್ ಚಿತ್ರ ಎಂಬ ಕಾರಣಕ್ಕೆ ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ನಿರೀಕ್ಷೆ ಇತ್ತು. ಜುಲೈ 3ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾ, ಇದೀಗ ಪ್ರಸಿದ್ಧ ಒಟಿಟಿ ಸಂಸ್ಥೆ ನೆಟ್‌ಫ್ಲಿಕ್ಸ್ (Netflix) ಮೂಲಕ ಪ್ರೇಕ್ಷಕರ ಮನೆ ಬಾಗಿಲಿಗೆ ತಲುಲಿದೆ.

ಆಗಸ್ಟ್ 28ರಿಂದ ‘ಆಲ್ಫಾ’ ಚಿತ್ರ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ ಎಂದು ನೆಟ್‌ಫ್ಲಿಕ್ಸ್ ಸಂಸ್ಥೆಯು ಅಧಿಕೃತವಾಗಿ ಪ್ರಕಟಿಸಿದೆ. ಚಿತ್ರಮಂದಿರಗಳಲ್ಲಿ ಈ ಸಿನಿಮಾವನ್ನು ಮಿಸ್ ಮಾಡಿಕೊಂಡವರು ಈಗ ಮನೆಯಲ್ಲೇ ಕುಳಿತು ವೀಕ್ಷಿಸಬಹುದು. ಥಿಯೇಟರ್​ಗಳಲ್ಲಿ ನೋಡಿದ ಪ್ರೇಕ್ಷಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದರು. ಈಗ ಒಟಿಟಿ ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಬೇಕು.

ಚಿತ್ರದ ಕಥಾಹಂದರ ಏನು?

ಶಿವ ರವೈಲ್ ನಿರ್ದೇಶನದ ‘ಆಲ್ಫಾ’ ಸಿನಿಮಾದಲ್ಲಿ ಆಲಿಯಾ ಭಟ್ ಅವರು ಸೀತಾ ಎಂಬ ತರಬೇತಿ ಪಡೆದ ರಾ ಏಜೆಂಟ್ ಪಾತ್ರದಲ್ಲಿದ್ದರೆ, ಶಾರ್ವರಿ ಅವರು ದುರ್ಗಾ ಕೌಲ್ ಎಂಬ ಆಕೆಯ ಸಹೋದರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಖಳನಾಯಕ ‘ಕರ್ನಲ್ ಫತೇಹ್ ಸಿಂಗ್ ಲಖಾವತ್’ ಎಂಬ ಪಾತ್ರವನ್ನು ಬಾಬಿ ಡಿಯೋಲ್ ಮಾಡಿದ್ದಾರೆ. ‘ಆಲ್ಫಾ’ ಎಂಬ ಶಕ್ತಿಶಾಲಿ ಸೀರಮ್ ಪ್ರಯೋಗದ ಮೂಲಕ ಸೀತಾಳನ್ನು ಸೂಪರ್-ಸೋಲ್ಜರ್ ಆಗಿ ಬದಲಾಯಿಸುವ ಕಥೆಯನ್ನು ಈ ಚಿತ್ರ ಒಳಗೊಂಡಿದೆ.

ಸುಮಾರು 100 ಕೋಟಿ ರೂಪಾಯಿ ನಿರ್ಮಾಣ ವೆಚ್ಚದಲ್ಲಿ ಮೂಡಿಬಂದಿದ್ದ ‘ಆಲ್ಫಾ’ ಚಿತ್ರವು ಥಿಯೇಟರ್‌ಗಳಲ್ಲಿ ಸಾಧಾರಣ ಪ್ರದರ್ಶನ ಕಂಡು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಒಟ್ಟು 58.86 ಕೋಟಿ ರೂಪಾಯಿ ನೆಟ್ ಗಳಿಕೆ ಮಾಡಿದ್ದ ಈ ಸಿನಿಮಾ, ವಿದೇಶಿ ಮಾರುಕಟ್ಟೆಯಿಂದ ಸುಮಾರು 29.05 ಕೋಟಿ ರೂಪಾಯಿ ಬಾಚಿಕೊಂಡಿತ್ತು.

ಇದನ್ನೂ ಓದಿ: ‘ತುಂಬಾಡ್ 2’ ಶೂಟಿಂಗ್ ಅಖಾಡಕ್ಕೆ ಆಲಿಯಾ ಭಟ್ ಎಂಟ್ರಿ; ಹೆಚ್ಚಿತು ನಿರೀಕ್ಷೆ

ಈ ಮೂಲಕ ‘ಆಲ್ಫಾ’ ಚಿತ್ರವು ಜಾಗತಿಕವಾಗಿ ಒಟ್ಟು 99.10 ಕೋಟಿ ರೂಪಾಯಿ ಗ್ರಾಸ್ ಗಳಿಸುವಲ್ಲಿ ಯಶಸ್ವಿಯಾಗಿತ್ತು. 2026ರ ಬಾಲಿವುಡ್‌ನ ಅತಿ ಹೆಚ್ಚು ಗಳಿಕೆ ಕಂಡ ಸಿನಿಮಾಗಳ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದರೂ, ವೈಆರ್‌ಎಫ್ ಸ್ಪೈ ಯೂನಿವರ್ಸ್‌ನಲ್ಲಿಯೇ ಅತ್ಯಂತ ಕಡಿಮೆ ಗಳಿಕೆ ಕಂಡ ಚಿತ್ರವಾಗಿ ಇದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು