ಆಲಿಯಾ ಭಟ್ (Alia Bhatt) ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ (Gangubai Kathiawadi) ಬಾಕ್ಸ್ ಆಫೀಸ್ನಲ್ಲಿ ಮ್ಯಾಜಿಕ್ ಮಾಡಿದೆ. ಈ ಚಿತ್ರ ಅಂದುಕೊಂಡ ಮಟ್ಟಕ್ಕಿಂತಲೂ ಉತ್ತಮ ಗಳಿಕೆ ಮಾಡುತ್ತಿದೆ. ಭಾರತದ ಬಾಕ್ಸ್ ಆಫೀಸ್ನಲ್ಲಿ ಈ ಚಿತ್ರ ಬರೋಬ್ಬರಿ 82 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಕಾರಣಕ್ಕೆ ಸಿನಿಮಾ ಒಟಿಟಿಯಲ್ಲಿ ತೆರೆಗೆ ಬರೋದು ಮತ್ತಷ್ಟು ವಿಳಂಬ ಆಗಲಿದೆ. ಒಟಿಟಿಯಲ್ಲಿ ಸಿನಿಮಾ ಕಣ್ತುಂಬಿಕೊಳ್ಳಬೇಕು ಎಂದು ಕಾದು ಕೂತವರಿಗೆ ಈ ವಿಚಾರ ಬೇಸರ ತರಿಸಿದೆ. ಹಾಗಾದರೆ, ಈ ಸಿನಿಮಾ ಒಟಿಟಿಯಲ್ಲಿ ತೆರೆಗೆ ಬರೋದು ಯಾವಾಗ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.
ಫೆಬ್ರವರಿ 25ರಂದು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರ ತೆರೆಕಂಡು ಶನಿವಾರಕ್ಕೆ 9 ದಿನ ಆಗಿದೆ. 9 ದಿನದಲ್ಲಿ ಭಾರತದ ಬಾಕ್ಸ್ ಆಫೀಸ್ನಲ್ಲಿ 82 ಕೋಟಿ ರೂಪಾಯಿ ಬಾಚಿಕೊಂಡಿದೆ. ಮಹಾರಾಷ್ಟ್ರದ ಮುಂಬೈ ಸೇರಿ ಹಲವು ಕಡೆಗಳಲ್ಲಿ ಶೆ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಇದೆ. ಆದಾಗ್ಯೂ, ಸಿನಿಮಾ ಒಳ್ಳೆಯ ರೀತಿಯಲ್ಲಿ ಕಲೆಕ್ಷನ್ ಮಾಡುತ್ತಿರುವುದು ಚಿತ್ರತಂಡದ ಸಂತಸ ಹೆಚ್ಚಿಸಿದೆ.
ಫೆಬ್ರವರಿ 25ಕ್ಕೆ ಸಿನಿಮಾ ತೆರೆಗೆ ಬಂದಿದೆ. ಇದಾದ ಒಂದು ತಿಂಗಳ ಬಳಿಕ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಮಾಡೋಕೆ ಡೀಲ್ ಮಾಡಿಕೊಳ್ಳಲಾಗಿತ್ತು. ನೆಟ್ಫ್ಲಿಕ್ಸ್ ಒಟಿಟಿ ಹಕ್ಕನ್ನು ಪಡೆದುಕೊಂಡಿದೆ. ಆದರೆ, ಈಗ ಚಿತ್ರತಂಡ ನೆಟ್ಫ್ಲಿಕ್ಸ್ಗೆ ವಿಶೇಷ ಮನವಿ ಮಾಡಿಕೊಂಡಿದ್ದು, ಎರಡು ತಿಂಗಳು ಬಿಟ್ಟು ಸಿನಿಮಾ ರಿಲೀಸ್ ಮಾಡೋಕೆ ಕೋರಿದೆ. ಹೀಗಾಗಿ, ಏಪ್ರಿಲ್ 25ರ ಸುಮಾರಿಗೆ ಈ ಸಿನಿಮಾ ನೆಟ್ಫ್ಲಿಕ್ಸ್ನಲ್ಲಿ ರಿಲೀಸ್ ಆಗಲಿದೆ.
ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಬತ್ತಳಿಕೆಯಿಂದ ಬಂದಿರುವ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಆಲಿಯಾ ಭಟ್ ಅವರು ಅಭಿನಯಿಸಿದ್ದು, ಅತಿಥಿ ಪಾತ್ರದಲ್ಲಿ ಅಜಯ್ ದೇವಗನ್ ಕಾಣಿಸಿಕೊಂಡಿದ್ದಾರೆ. ಹಲವು ಕಾರಣಗಳಿಂದಾಗಿ ಈ ಸಿನಿಮಾ ಸದ್ದು ಮಾಡಿದೆ. ಗಂಗೂಬಾಯಿ ಕಾಠಿಯಾವಾಡಿ ಜೀವನ ಆಧರಿಸಿ ಈ ಚಿತ್ರ ಮೂಡಿಬಂದಿದ್ದು, ಆಲಿಯಾ ಭಟ್ ಅವರು ವೇಶ್ಯೆ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಆಲಿಯಾಗೆ ಬಾಲಿವುಡ್ನಲ್ಲಿ ಭರ್ಜರಿ ಡಿಮ್ಯಾಂಡ್ ಇದೆ. ಈಗಾಗಲೇ ಅವರು ಹಲವು ಹಿಟ್ ಸಿನಿಮಾಗಳನ್ನು ನೀಡಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರ ಸೂಪರ್ ಹಿಟ್ ಸಿನಿಮಾಗಳ ಸಾಲಿಗೆ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರ ಕೂಡ ಸೇರಿಕೊಂಡಿದೆ. ಈ ಚಿತ್ರಕ್ಕಾಗಿ ಅವರು ತೆಗೆದುಕೊಂಡ ಸಂಭಾವನೆ ಎಷ್ಟು ಎಂಬ ಬಗ್ಗೆ ಮಾಹಿತಿ ಹರಿದಾಡುತ್ತಿದೆ. ಮೂಲಗಳ ಪ್ರಕಾರ ಆಲಿಯಾ ಭಟ್ ಅವರು ಬರೋಬ್ಬರಿ 20 ಕೋಟಿ ರೂಪಾಯಿಯನ್ನು ಜೇಬಿಗೆ ಇಳಿಸಿಕೊಂಡಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಇದನ್ನೂ ಓದಿ:‘ಗಂಗೂಬಾಯಿ..’ ಚಿತ್ರಕ್ಕೆ 20 ಕೋಟಿ ರೂ. ಸಂಬಳ ಪಡೆದ ಆಲಿಯಾ ಭಟ್; ಅಜಯ್ ದೇವಗನ್ಗೆ ಸಿಕ್ಕಿದ್ದೆಷ್ಟು?
ಆಲಿಯಾ ಭಟ್ ಬಾಯ್ಫ್ರೆಂಡ್ ಮೇಲೆ ಕಣ್ಣಿಟ್ಟ ಪೂಜಾ ಹೆಗ್ಡೆ; ಏನಿದು ಹೊಸ ಕಥೆ?