AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಕಾಲಕ್ಕೆ 70 ಹೊಸ ಪ್ರಾಜೆಕ್ಟ್​ ಘೋಷಿಸಿದ ಅಮೇಜಾನ್ ಪ್ರೈಮ್ ವಿಡಿಯೋ; ಒಟಿಟಿ ಪ್ರಿಯರಿಗೆ ಹಬ್ಬ

ಮುಂದಿನ ಎರಡು ವರ್ಷಗಳಲ್ಲಿ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ರಿಲೀಸ್ ಆಗುವ ಸೀರಿಸ್ ಹಾಗೂ ಸಿನಿಮಾಗಳ ಪಟ್ಟಿ ಬಿಡುಗಡೆ ಆಗಿದೆ. ಪ್ರಮುಖ ಸೀರಿಸ್​ಗಳಾದ ‘ಪಂಚಾಯತ್ 3’, ‘ದಿ ಫ್ಯಾಮಿಲಿ ಮ್ಯಾನ್ 3’, ‘ಮಿರ್ಜಾಪುರ್ 3’ ಘೋಷಣೆ ಆಗಿವೆ.

ಏಕಕಾಲಕ್ಕೆ 70 ಹೊಸ ಪ್ರಾಜೆಕ್ಟ್​ ಘೋಷಿಸಿದ ಅಮೇಜಾನ್ ಪ್ರೈಮ್ ವಿಡಿಯೋ; ಒಟಿಟಿ ಪ್ರಿಯರಿಗೆ ಹಬ್ಬ
ಏಕಕಾಲಕ್ಕೆ 70 ಹೊಸ ಪ್ರಾಜೆಕ್ಟ್​ ಘೋಷಿಸಿದ ಅಮೇಜಾನ್ ಪ್ರೈಮ್ ವಿಡಿಯೋ
Follow us
ರಾಜೇಶ್ ದುಗ್ಗುಮನೆ
|

Updated on: Mar 22, 2024 | 12:00 PM

ಒಟಿಟಿ ಕ್ಷೇತ್ರದಲ್ಲಿ ಇಂದು ಸ್ಪರ್ಧೆ ಜೋರಾಗಿದೆ.  ಹಲವು ಪ್ಲಾಟ್​ಫಾರ್ಮ್​ಗಳು ಹೊಸ ಹೊಸ ಸೀರಿಸ್ ಹಾಗೂ ಸಿನಿಮಾಗಳ ಮೂಲಕ ಪ್ರೇಕ್ಷಕರ ಎದುರು ಬರುವ ಪ್ರಯತ್ನದಲ್ಲಿವೆ. ಅಮೇಜಾನ್ ಪ್ರೈಮ್ ವಿಡಿಯೋ (Amazon Prime Video) ಕೂಡ ಇದರಲ್ಲಿ ಹಿಂದೆ ಬಿದ್ದಿಲ್ಲ. ಹಿಂದಿ ಹಾಗೂ ಇಂಗ್ಲಿಷ್ ಮಾತ್ರವಲ್ಲದೆ ದೇಶದ ಸ್ಥಳೀಯ ಭಾಷೆಯ ಸಿನಿಮಾಗಳಿಗೂ ಪ್ರಾಮುಖ್ಯತೆ ನೀಡುವ ಕೆಲಸ ಈ ಒಟಿಟಿ ಸಂಸ್ಥೆಯಿಂದ ಆಗುತ್ತಿದೆ. ಇತ್ತೀಚೆಗೆ ಅದ್ದೂರಿ ಕಾರ್ಯಕ್ರಮ ಆಯೋಜನೆ ಮಾಡಿ ಬರೋಬ್ಬರಿ ಸೀರಿಸ್ ಹಾಗೂ ಸಿನಿಮಾ ಸೇರಿ 70 ಪ್ರಾಜೆಕ್ಟ್​ಗಳನ್ನು ಪ್ರೈಮ್ ವಿಡಿಯೋ ಘೋಷಣೆ ಮಾಡಿದೆ.

ಮುಂದಿನ ಎರಡು ವರ್ಷಗಳಲ್ಲಿ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ರಿಲೀಸ್ ಆಗುವ ಸೀರಿಸ್ ಹಾಗೂ ಸಿನಿಮಾಗಳ ಪಟ್ಟಿ ಬಿಡುಗಡೆ ಆಗಿದೆ. ಪ್ರಮುಖ ಸೀರಿಸ್​ಗಳಾದ ‘ಪಂಚಾಯತ್ 3’, ‘ದಿ ಫ್ಯಾಮಿಲಿ ಮ್ಯಾನ್ 3’, ‘ಮಿರ್ಜಾಪುರ್ 3’ ಘೋಷಣೆ ಆಗಿವೆ. ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ‘ಕಾಂತಾರ: ಚಾಪ್ಟರ್ 1’ ಕೂಡ ಥಿಯೇಟರ್​ನಲ್ಲಿ ರಿಲೀಸ್ ಆದ ಬಳಿಕ ಒಟಿಟಿಗೆ ಲಗ್ಗೆ ಇಡಲಿದೆ. ಈ ಮೂಲಕ ಈಗಾಗಲೇ ಡೀಲ್ ಪೂರ್ಣಗೊಂಡಿದೆ.

70 ಪ್ರಾಜೆಕ್ಟ್​ಗಳ ಪೈಕಿ 40 ಅಮೇಜಾನ್ ಒರಿಜಿನಲ್ ಸೀರಿಸ್ ಹಾಗೂ ಸಿನಿಮಾಗಳು ಇವೆ. ಉಳಿದ 29 ಸಿನಿಮಾಗಳು ಥಿಯೇಟರ್​ನಲ್ಲಿ ರಿಲೀಸ್ ಆದ ಬಳಿಕ ಈ ಒಟಿಟಿ ಪ್ಲಾಟ್​ಫಾರ್ಮ್​ಗೆ ಬರಲಿವೆ. ಇದರಲ್ಲಿ ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಭಾರತದ ಎಲ್ಲಾ ಭಾಷೆಯ ಸಿನಿಮಾಗಳನ್ನು ಇದು ಒಳಗೊಂಡಿದೆ.

ಇದನ್ನೂ ಓದಿ: ಶೂಟಿಂಗ್​ಗೂ ಮೊದಲೇ ನಡೆಯಿತು ‘ಕಾಂತಾರ: ಅಧ್ಯಾಯ 1’ ಒಟಿಟಿ ಬಿಸ್ನೆಸ್; ಮಾಹಿತಿ ನೀಡಿದ ಪ್ರೈಮ್ ವಿಡಿಯೋ

ಅಮೇಜಾನ್ ಪ್ರೈಮ್ ವಿಡಿಯೋ ಒಟಿಟಿ ಜಗತ್ತಿನ ಸ್ಪರ್ಧೆಯಲ್ಲಿ ಮುನ್ನಡೆ ಸಾಧಿಸಿದೆ. ಒಳ್ಳೊಳ್ಳೆಯ ಕಂಟೆಂಟ್​ಗಳನ್ನು ಇದು ನೀಡುತ್ತಿದೆ. ಸ್ಥಳೀಯ ಭಾಷೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕಳೆದ ವರ್ಷ (2013) ಅಮೇಜಾನ್ ಪ್ರೈಮ್​ನ ಕಂಟೆಂಟ್​ಗಳನ್ನು ವಿಶ್ವದ 210 ದೇಶಗಳಲ್ಲಿ ವೀಕ್ಷಣೆ ಕಂಡಿವೆ. ವಿದೇಶದ ಕಂಟೆಂಟ್​ಗಳನ್ನು ನಮ್ಮ ದೇಶದಲ್ಲಿ ಹಾಗೂ ನಮ್ಮ ದೇಶದ ಸಿನಿಮಾಗಳನ್ನು ವಿದೇಶದಲ್ಲಿ ನೋಡಲು ‘ಅಮೇಜಾನ್ ಪ್ರೈಮ್ ವಿಡಿಯೋ’ ಸಹಕಾರಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!