AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರದಲ್ಲಿ ಹೀನಾಯವಾಗಿ ಸೋತ ‘ಕಂಗುವ’ ಸಿನಿಮಾ ಈಗ ಒಟಿಟಿಯಲ್ಲಿ ರಿಲೀಸ್

ಬಿಗ್ ಬಜೆಟ್​ನಲ್ಲಿ ನಿರ್ಮಾಣವಾದ ‘ಕಂಗುವ’ ಸಿನಿಮಾಗೆ ಬಾಕ್ಸ್ ಆಫೀಸ್​ನಲ್ಲಿ ಲಾಭ ಆಗಲಿಲ್ಲ. ಥಿಯೇಟರ್​ನಲ್ಲಿ ಈ ಚಿತ್ರವನ್ನು ನೋಡದೇ ಇರುವವರು ಒಟಿಟಿಯಲ್ಲಾದರೂ ನೋಡಿ ಗೆಲ್ಲಿಸುತ್ತಾರೆ ಎಂಬ ಭರವಸೆಯೊಂದಿಗೆ ಒಟಿಟಿಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೂರ್ಯ, ಬಾಬಿ ಡಿಯೋಲ್, ದಿಶಾ ಪಟಾನಿ ಮುಂತಾದವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ.

ಚಿತ್ರಮಂದಿರದಲ್ಲಿ ಹೀನಾಯವಾಗಿ ಸೋತ ‘ಕಂಗುವ’ ಸಿನಿಮಾ ಈಗ ಒಟಿಟಿಯಲ್ಲಿ ರಿಲೀಸ್
ಸೂರ್ಯ
ಮದನ್​ ಕುಮಾರ್​
|

Updated on: Dec 06, 2024 | 7:54 PM

Share

ಕಾಲಿವುಡ್​ ನಟ ಸೂರ್ಯ ಅಭಿನಯದ ‘ಕಂಗುವ’ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಹೀನಾಯವಾಗಿ ಸೋಲು ಅನುಭವಿಸಿತು. ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ನಿರ್ಮಾಣವಾಗಿದ್ದ ಈ ಸಿನಿಮಾಗೆ ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಆಗಲಿಲ್ಲ. ಹಾಗಾಗಿ ಈಗ ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್​ ಆಗಲಿದೆ. ಅದಕ್ಕೆ ದಿನಾಂಕ ನಿಗದಿ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ನವೆಂಬರ್​ 14ರಂದು ‘ಕಂಗುವ’ ಸಿನಿಮಾ ಬಿಡುಗಡೆ ಆಗಿತ್ತು. ತಮಿಳಿನ ಈ ಸಿನಿಮಾ ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಕಂಡಿತ್ತು. ಆದರೆ ಈಗ ಒಂದು ತಿಂಗಳು ಕಳೆಯುವುದರೊಳಗೆ ಒಟಿಟಿ ಅಂಗಳಕ್ಕೆ ಬರುತ್ತಿದೆ. ಬಿಡುಗಡೆ ಆದಾಗ ನೆಗೆಟಿವ್ ವಿಮರ್ಶೆಗಳು ಬಂದಿದ್ದವು. ‘ಒಟಿಟಿಯಲ್ಲಿ ನೋಡಿದರೆ ಆಯ್ತು ಬಿಡು’ ಎಂದುಕೊಂಡಿದ್ದ ಪ್ರೇಕ್ಷಕರಿಗಾಗಿ ಈ ಸಿನಿಮಾ ಒಟಿಟಿಗೆ ಬರುತ್ತಿದೆ.

‘ಕಂಗುವ’ ಸಿನಿಮಾದ ಒಟಿಟಿ ಪ್ರಸಾರ ಹಕ್ಕುಗಳನ್ನು ‘ಅಮೇಜಾನ್ ಪ್ರೈಂ ವಿಡಿಯೋ’ ಸಂಸ್ಥೆ ಖರೀದಿಸಿದೆ. ಡಿಸೆಂಬರ್​ 8ರಿಂದ ಪ್ರಸಾರ ಆರಂಭ ಆಗಲಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ‘ಅಮೇಜಾನ್ ಪ್ರೈಂ ವಿಡಿಯೋ’ ಮಾಹಿತಿ ಹಂಚಿಕೊಂಡಿದೆ. ಚಿತ್ರಮಂದಿರದಲ್ಲಿ ನೆಗೆಟಿವ್ ಪ್ರತಿಕ್ರಿಯೆ ಪಡೆದ ಈ ಚಿತ್ರಕ್ಕೆ ಪ್ರೇಕ್ಷಕರು ಒಟಿಟಿಯಲ್ಲಿ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ನಟ ಸೂರ್ಯಗಿಂತ ಮೂರು ಪಟ್ಟು ಜಾಸ್ತಿ ಸಂಬಳ ಪಡೆಯುತ್ತಿದ್ದ ಪತ್ನಿ ಜ್ಯೋತಿಕಾ

ಅಂದಹಾಗೆ, ‘ಅಮೇಜಾನ್ ಪ್ರೈಂ ವಿಡಿಯೋ’ ಮೂಲಕ ಪ್ರಸಾರ ಆಗಲಿರುವುದು ‘ಕಂಗುವ’ ಸಿನಿಮಾದ ತಮಿಳು, ಕನ್ನಡ, ಮಲಯಾಳಂ ಹಾಗೂ ತೆಲುಗು ವರ್ಷನ್​ ಮಾತ್ರ. ಹಿಂದಿ ವರ್ಷನ್​ ಬಿಡುಗಡೆ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ. ಹಾಗಾಗಿ ಉತ್ತರ ಭಾರತದಲ್ಲಿನ ಪ್ರೇಕ್ಷಕರ ಇನ್ನಷ್ಟು ದಿನ ಕಾಯಬೇಕಾಗಿದೆ.

ನಟ ಸೂರ್ಯ ಅವರು ‘ಕಂಗುವ’ ಸಿನಿಮಾದಲ್ಲಿ ಡಿಫರೆಂಟ್​ ಪಾತ್ರ ಮಾಡಿದ್ದಾರೆ. ಅವರ ಜೊತೆ ಬಾಲಿವುಡ್​ ನಟ ಬಾಬಿ ಡಿಯೋಲ್ ಕೂಡ ನಟಿಸಿದ್ದಾರೆ. ನಾಯಕಿಯಾಗಿ ದಿಶಾ ಪಟಾನಿ ಕಾಣಿಸಿಕೊಂಡಿದ್ದಾರೆ. ಶಿವ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ಕೆ.ಇ. ಜ್ಞಾನವೇಲ್ ರಾಜಾ ಅವರು ಬಂಡವಾಳ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ