ಕಾಲಿವುಡ್ ನಟ ಸೂರ್ಯ ಅಭಿನಯದ ‘ಕಂಗುವ’ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಹೀನಾಯವಾಗಿ ಸೋಲು ಅನುಭವಿಸಿತು. ನೂರಾರು ಕೋಟಿ ರೂಪಾಯಿ ಬಜೆಟ್ನಲ್ಲಿ ನಿರ್ಮಾಣವಾಗಿದ್ದ ಈ ಸಿನಿಮಾಗೆ ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಆಗಲಿಲ್ಲ. ಹಾಗಾಗಿ ಈಗ ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ. ಅದಕ್ಕೆ ದಿನಾಂಕ ನಿಗದಿ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.
ನವೆಂಬರ್ 14ರಂದು ‘ಕಂಗುವ’ ಸಿನಿಮಾ ಬಿಡುಗಡೆ ಆಗಿತ್ತು. ತಮಿಳಿನ ಈ ಸಿನಿಮಾ ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಕಂಡಿತ್ತು. ಆದರೆ ಈಗ ಒಂದು ತಿಂಗಳು ಕಳೆಯುವುದರೊಳಗೆ ಒಟಿಟಿ ಅಂಗಳಕ್ಕೆ ಬರುತ್ತಿದೆ. ಬಿಡುಗಡೆ ಆದಾಗ ನೆಗೆಟಿವ್ ವಿಮರ್ಶೆಗಳು ಬಂದಿದ್ದವು. ‘ಒಟಿಟಿಯಲ್ಲಿ ನೋಡಿದರೆ ಆಯ್ತು ಬಿಡು’ ಎಂದುಕೊಂಡಿದ್ದ ಪ್ರೇಕ್ಷಕರಿಗಾಗಿ ಈ ಸಿನಿಮಾ ಒಟಿಟಿಗೆ ಬರುತ್ತಿದೆ.
‘ಕಂಗುವ’ ಸಿನಿಮಾದ ಒಟಿಟಿ ಪ್ರಸಾರ ಹಕ್ಕುಗಳನ್ನು ‘ಅಮೇಜಾನ್ ಪ್ರೈಂ ವಿಡಿಯೋ’ ಸಂಸ್ಥೆ ಖರೀದಿಸಿದೆ. ಡಿಸೆಂಬರ್ 8ರಿಂದ ಪ್ರಸಾರ ಆರಂಭ ಆಗಲಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ‘ಅಮೇಜಾನ್ ಪ್ರೈಂ ವಿಡಿಯೋ’ ಮಾಹಿತಿ ಹಂಚಿಕೊಂಡಿದೆ. ಚಿತ್ರಮಂದಿರದಲ್ಲಿ ನೆಗೆಟಿವ್ ಪ್ರತಿಕ್ರಿಯೆ ಪಡೆದ ಈ ಚಿತ್ರಕ್ಕೆ ಪ್ರೇಕ್ಷಕರು ಒಟಿಟಿಯಲ್ಲಿ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.
ಇದನ್ನೂ ಓದಿ: ನಟ ಸೂರ್ಯಗಿಂತ ಮೂರು ಪಟ್ಟು ಜಾಸ್ತಿ ಸಂಬಳ ಪಡೆಯುತ್ತಿದ್ದ ಪತ್ನಿ ಜ್ಯೋತಿಕಾ
ಅಂದಹಾಗೆ, ‘ಅಮೇಜಾನ್ ಪ್ರೈಂ ವಿಡಿಯೋ’ ಮೂಲಕ ಪ್ರಸಾರ ಆಗಲಿರುವುದು ‘ಕಂಗುವ’ ಸಿನಿಮಾದ ತಮಿಳು, ಕನ್ನಡ, ಮಲಯಾಳಂ ಹಾಗೂ ತೆಲುಗು ವರ್ಷನ್ ಮಾತ್ರ. ಹಿಂದಿ ವರ್ಷನ್ ಬಿಡುಗಡೆ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ. ಹಾಗಾಗಿ ಉತ್ತರ ಭಾರತದಲ್ಲಿನ ಪ್ರೇಕ್ಷಕರ ಇನ್ನಷ್ಟು ದಿನ ಕಾಯಬೇಕಾಗಿದೆ.
ನಟ ಸೂರ್ಯ ಅವರು ‘ಕಂಗುವ’ ಸಿನಿಮಾದಲ್ಲಿ ಡಿಫರೆಂಟ್ ಪಾತ್ರ ಮಾಡಿದ್ದಾರೆ. ಅವರ ಜೊತೆ ಬಾಲಿವುಡ್ ನಟ ಬಾಬಿ ಡಿಯೋಲ್ ಕೂಡ ನಟಿಸಿದ್ದಾರೆ. ನಾಯಕಿಯಾಗಿ ದಿಶಾ ಪಟಾನಿ ಕಾಣಿಸಿಕೊಂಡಿದ್ದಾರೆ. ಶಿವ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ಕೆ.ಇ. ಜ್ಞಾನವೇಲ್ ರಾಜಾ ಅವರು ಬಂಡವಾಳ ಹೂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.