Vijay 69: ಅನುಪಮ್​ ಖೇರ್​ ಹೊಸ ಚಿತ್ರಕ್ಕೆ ‘ವಿಜಯ್​ 69’ ಶೀರ್ಷಿಕೆ; ಇಂಥ ಟೈಟಲ್​ ಇಟ್ಟಿದ್ದಕ್ಕೆ ಇದೆ ಒಂದು ಕಾರಣ

Anupam Kher: ಹಲವು ವರ್ಷಗಳಿಂದ ಅನುಪಮ್​ ಖೇರ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರು ನಟಿಸುತ್ತಿರುವ 537ನೇ ಚಿತ್ರವಾಗಿ ‘ವಿಜಯ್​ 69’ ಮೂಡಿಬರಲಿದೆ.

Vijay 69: ಅನುಪಮ್​ ಖೇರ್​ ಹೊಸ ಚಿತ್ರಕ್ಕೆ ‘ವಿಜಯ್​ 69’ ಶೀರ್ಷಿಕೆ; ಇಂಥ ಟೈಟಲ್​ ಇಟ್ಟಿದ್ದಕ್ಕೆ ಇದೆ ಒಂದು ಕಾರಣ
ಅನುಪಮ್ ಖೇರ್
Follow us
ಮದನ್​ ಕುಮಾರ್​
|

Updated on: May 04, 2023 | 1:21 PM

ಬಾಲಿವುಡ್​ ನಟ ಅನುಪಮ್​ ಖೇರ್​ (Anupam Kher) ಅವರು ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿಕೊಂಡು ಅವರು ಮುನ್ನುಗ್ಗುತ್ತಿದ್ದಾರೆ. ಹಿಂದಿ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲೂ ಅವರಿಗೆ ಬೇಡಿಕೆ ಇದೆ. ದೇಶಾದ್ಯಂತ ಅವರು ಅಭಿಮಾನಿಗಳನ್ನು ಹೊಂದಿದ್ದಾರೆ. ಅನುಪಮ್​ ಖೇರ್​ ಅವರಿಗೆ 68 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರು ಫಿಟ್ನೆಸ್​ ಕಾಯ್ದುಕೊಂಡಿದ್ದಾರೆ. ಈಗ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕೆ ‘ವಿಜಯ್​ 69’  (Vijay 69)ಎಂದು ಶೀರ್ಷಿಕೆ ಇಡಲಾಗಿದೆ. ಇಂಥ ಟೈಟಲ್​ ಇಟ್ಟಿದ್ದಕ್ಕೆ ವಿಶೇಷ ಕಾರಣ ಕೂಡ ಇದೆ. ಅನುಪಮ್​ ಖೇರ್ ಅಭಿಮಾನಿಗಳು ಈ ಸಿನಿಮಾ ಮೇಲೆ ನಿರೀಕ್ಷೆ ಇಟ್ಟುಕೊಳ್ಳುವಂತಾಗಿದೆ. ವಯಸ್ಸಿಗೆ ತಕ್ಕಂತಹ ಪಾತ್ರವನ್ನು ಅನುಪಮ್​ ಖೇರ್​ ಆಯ್ಕೆ ಮಾಡಿಕೊಂಡಿದ್ದಾರೆ. ಶೀರ್ಷಿಕೆ ಅನೌನ್ಸ್​ ಮಾಡುವುದರ ಜೊತೆಗೆ ಹೊಸ ಪೋಸ್ಟರ್​ ಕೂಡ ಬಿಡುಗಡೆ ಮಾಡಲಾಗಿದೆ. ಫ್ಯಾನ್ಸ್​ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ.

ಯಶ್​ ರಾಜ್​ ಫಿಲ್ಮ್ಸ್​ ಸಂಸ್ಥೆಯ ‘ವೈಆರ್​ಎಫ್​ ಎಂಟರ್​ಟೇನ್ಮೆಂಟ್​’ ಒಟಿಟಿ ಮೂಲಕ ‘ವಿಜಯ್​ 69’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾ ನೇರವಾಗಿ ಒಟಿಟಿ ಮೂಲಕ ಸ್ಟ್ರೀಮಿಂಗ್​ ಆಗಲಿದೆ. ಮನೀಶ್​ ಶರ್ಮಾ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಅಕ್ಷಯ್​ ರಾಯ್​ ನಿರ್ದೇಶನ ಮಾಡುತ್ತಿದ್ದಾರೆ.

ಅನುಪಮ್​ ಖೇರ್​ ಅವರ ರಿಯಲ್​ ಲೈಫ್​ ವ್ಯಕ್ತಿತ್ವಕ್ಕೂ ‘ವಿಜಯ್​ 69’ ಚಿತ್ರಕ್ಕೂ ಸಾಮ್ಯತೆ ಇದೆ. ಯಾಕೆಂದರೆ, ಈ ವಯಸ್ಸಿನಲ್ಲಿ ಕೂಡ ಅನುಪಮ್​ ಖೇರ್​ ಅವರು ಹೊಸ ಸವಾಲುಗಳನ್ನು ಸ್ವೀಕರಿಸುತ್ತಿದ್ದಾರೆ. ಹೊಸ ಕೌಶಲಗಳನ್ನು ಕಲಿಯುತ್ತಿದ್ದಾರೆ. ಅದೇ ರೀತಿಯ ಪಾತ್ರದ ಕುರಿತು ‘ವಿಜಯ್​ 69’ ಸಿನಿಮಾ ಮೂಡಿಬರಲಿದೆ. 69ನೇ ವಯಸ್ಸಿನಲ್ಲಿ ಟ್ರೈಥ್ಲಾನ್​ ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದು ನಿರ್ಧರಿಸುವ ವ್ಯಕ್ತಿಯಾಗಿ ಅನುಪಮ್ ಖೇರ್​ ನಟಿಸಲಿದ್ದಾರೆ.

‘ಘೋಸ್ಟ್​’ ನಟ ಅನುಪಮ್​ ಖೇರ್​ಗೆ ಜನ್ಮದಿನದ ಸಡಗರ; 68ನೇ ವಯಸ್ಸಲ್ಲೂ ಫುಲ್​ ಆ್ಯಕ್ಟೀವ್​

ಹಲವು ವರ್ಷಗಳಿಂದ ಅನುಪಮ್​ ಖೇರ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಅನುಪಮ್​ ಖೇರ್​ ನಟಿಸುತ್ತಿರುವ 537ನೇ ಚಿತ್ರವಾಗಿ ‘ವಿಜಯ್​ 69’ ಮೂಡಿಬರಲಿದೆ. ಈ ಸಿನಿಮಾದ ಪೋಸ್ಟರ್​ನಲ್ಲಿ ಅನುಪಮ್​ ಖೇರ್​ ಅವರು ಸೈಕಲ್ ರೇಸ್​​ನಲ್ಲಿ ಭಾಗವಹಿಸಿರುವುದು ಹೈಲೈಟ್​ ಆಗಿದೆ. ಅವರ ಹೊಸ ಸಿನಿಮಾಗೆ ಅಭಿಮಾನಿಗಳು ಶುಭ ಕೋರಿದ್ದಾರೆ.

Anupam Kher: ‘ಆ ವ್ಯಕ್ತಿಯೇ ಅಶ್ಲೀಲ, ಅವಕಾಶವಾದಿ’: ನಡಾವ್​ ಲಪಿಡ್ ಬಗ್ಗೆ ಅನುಪಮ್​ ಖೇರ್​ ಗರಂ

2022ರಲ್ಲಿ ಅನುಪಮ್​ ಖೇರ್​ ನಟಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಿಡುಗಡೆ ಆಯಿತು. ಆ ಸಿನಿಮಾದಲ್ಲಿ ಅವರು ಮಾಡಿದ ಕಾಶ್ಮೀರಿ ಪಂಡಿತನ ಪಾತ್ರ ಜನಮೆಚ್ಚುಗೆ ಪಡೆದುಕೊಂಡಿತು. ‘ದಿ ಕಾಶ್ಮೀರ್ ಫೈಲ್ಸ್’ ಯಶಸ್ಸಿನ ಬಳಿಕ ಅನುಪಮ್​ ಖೇರ್​ ಅವರಿಗೆ ಇದ್ದ ಡಿಮ್ಯಾಂಡ್​ ಹೆಚ್ಚಾಯಿತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ