ವೆಬ್​ ಸರಣಿಗೆ ಆ್ಯಕ್ಷನ್​ಕಟ್​ ಹೇಳಲು ರೆಡಿ ಆದ ಆರ್ಯನ್ ಖಾನ್​; ಹಣ ಹೂಡಲು ಶಾರುಖ್​ ರೆಡಿ

ಜೈಲಿನಿಂದ ಹೊರ ಬಂದ ನಂತರದಲ್ಲಿ ಆರ್ಯನ್ ಖಾನ್ ಅವರ ಜೀವನ ಮೊದಲಿನ ಸ್ಥಿತಿಗೆ ಮರಳಿದೆ. ಐಪಿಎಲ್​ ಆಕ್ಷನ್ ಹಾಗೂ ಐಪಿಎಲ್ ಪಂದ್ಯಗಳಲ್ಲಿ ಆರ್ಯನ್ ಕಾಣಿಸಿಕೊಂಡಿದ್ದಾರೆ. ಈಗ ಅವರು ಮಹತ್ವದ ಹೆಜ್ಜೆ ಇಡುತ್ತಿದ್ದಾರೆ.

 ವೆಬ್​ ಸರಣಿಗೆ ಆ್ಯಕ್ಷನ್​ಕಟ್​ ಹೇಳಲು ರೆಡಿ ಆದ ಆರ್ಯನ್ ಖಾನ್​; ಹಣ ಹೂಡಲು ಶಾರುಖ್​ ರೆಡಿ
ಆರ್ಯನ್​-ಶಾರುಖ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 11, 2022 | 6:30 PM

ಸೆಲೆಬ್ರಿಟಿಗಳ ಮಕ್ಕಳು ಹೀರೋ/ಹೀರೋಯಿನ್ ಆಗೋಕೆ ಹೆಚ್ಚು ಆಸಕ್ತಿ ತೋರುತ್ತಾರೆ. ಶಿಕ್ಷಣ ಮುಗಿದ ತಕ್ಷಣ ನಟನಾ ತರಬೇತಿ ಪಡೆದು ಬಣ್ಣ ಹಚ್ಚೋಕೆ ರೆಡಿ ಆಗಿ ಬಿಡುತ್ತಾರೆ. ಆದರೆ, ತಾಂತ್ರಿಕ ವರ್ಗದಲ್ಲಿ ಕೆಲಸ ಮಾಡುತ್ತೇನೆ ಎಂದು ಮುಂದೆ ಬರುವವರು ಸೆಲೆಬ್ರಿಟಿ ವಲಯದಲ್ಲಿ ತುಂಬಾನೇ ಕಡಿಮೆ. ಶಾರುಖ್ ಖಾನ್ (Shah Rukh Khan) ಮಗ ಆರ್ಯನ್ ಖಾನ್ (Aryan Khan) ಅವರು ಈ ವಿಚಾರದಲ್ಲಿ ಭಿನ್ನವಾಗಿ ಕಾಣಿಸುತ್ತಾರೆ. ತಂದೆಗೆ ಸಾಕಷ್ಟು ಸ್ಟಾರ್​ಗಿರಿ ಇರುವ ಹೊರತಾಗಿಯೂ ಆರ್ಯನ್​ ನಟನೆ ಮಾಡುತ್ತಿಲ್ಲ. ಬದಲಿಗೆ ನಿರ್ದೇಶನಕ್ಕೆ ಇಳಿಯುತ್ತಿದ್ದಾರೆ. ಹೊಸ ವೆಬ್​ ಸರಣಿಗೆ ಆ್ಯಕ್ಷನ್​ಕಟ್ ಹೇಳಲು ಆರ್ಯನ್​ ಖಾನ್ ರೆಡಿ ಆಗಿದ್ದಾರೆ.

ಆರ್ಯನ್ ಖಾನ್ ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ಇದಕ್ಕೆ ಕಾರಣವಾಗಿದ್ದು ಡ್ರಗ್ಸ್​ ಕೇಸ್. ಮುಂಬೈನ ಹಡಗೊಂದರಲ್ಲಿ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು, ಆರ್ಯನ್ ಖಾನ್ ಕೂಡ ಡ್ರಗ್ಸ್ ಹೊಂದಿದ್ದರು ಎನ್ನುವ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಒಂದು ತಿಂಗಳ ಕಾಲ ಅವರು ಜೈಲಿನಲ್ಲೇ ಇದ್ದರು. ಈ ಸಂದರ್ಭದಲ್ಲಿ ಆರ್ಯನ್ ಖಾನ್ ಸಾಕಷ್ಟು ಸುದ್ದಿ ಆದರು. ಕೆಟ್ಟ ಕಾರಣದಿಂದ ಅವರು ಸಾಕಷ್ಟು ಜನರಿಗೆ ಪರಿಚಯವಾದರು. ಜೈಲಿನಿಂದ ಹೊರ ಬಂದ ನಂತರದಲ್ಲಿ ಆರ್ಯನ್ ಖಾನ್ ಅವರ ಜೀವನ ಮೊದಲಿನ ಸ್ಥಿತಿಗೆ ಮರಳಿದೆ. ಐಪಿಎಲ್​ ಆಕ್ಷನ್ ಹಾಗೂ ಐಪಿಎಲ್ ಪಂದ್ಯಗಳಲ್ಲಿ ಆರ್ಯನ್ ಕಾಣಿಸಿಕೊಂಡಿದ್ದಾರೆ. ಈಗ ಅವರು ಮಹತ್ವದ ಹೆಜ್ಜೆ ಇಡುತ್ತಿದ್ದಾರೆ.

ವೆಬ್ ಸರಣಿ ನಿರ್ದೇಶನ ಮಾಡಲು ಆರ್ಯನ್ ಖಾನ್ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಇದಕ್ಕಾಗಿ ಲುಕ್​ ಟೆಸ್ಟ್​ ಶೂಟ್ ಕೂಡ ನಡೆದಿದೆ. ‘ಜೆರ್ಸಿ’ ಸಿನಿಮಾದಲ್ಲಿ ನಟಿಸಿರುವ ಪ್ರೀತ್​ ಕಮಾನಿ ಸೆಟ್​ನಲ್ಲಿ ಕಾಣಿಸಿಕೊಂಡಿದ್ದು, ಅವರು ಈ ವೆಬ್ ಸರಣಿಯಲ್ಲಿ ನಟಿಸಲಿದ್ದಾರೆಯೇ ಎನ್ನುವ ಅನುಮಾನ ಹುಟ್ಟಿಕೊಂಡಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರ ಬೀಳಬೇಕಿದೆ.

ಶಾರುಖ್ ಖಾನ್ ಅವರು ‘ರೆಡ್​ ಚಿಲ್ಲೀಸ್​’ ಹೆಸರಿನ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಅನೇಕ ಹಿಟ್ ಚಿತ್ರಗಳು ಈ ನಿರ್ಮಾಣ ಸಂಸ್ಥೆಯಿಂದ ಹೊರಬಂದಿವೆ. ಆರ್ಯನ್ ಖಾನ್ ನಿರ್ದೇಶನ ಮಾಡುತ್ತಿರುವ ವೆಬ್​ ಸರಣಿಗೆ ‘ರೆಡ್​ ಚಿಲ್ಲೀಸ್’ ಬಂಡವಾಳ ಹೂಡಲಿದೆ ಅನ್ನೋದು ವಿಶೇಷ. ಈ ಮೂಲಕ ಮಗನ ಚಿತ್ರಕ್ಕೆ ಅವರು ಬೆಂಬಲವಾಗಿ ನಿಲ್ಲುತ್ತಿದ್ದಾರೆ.

ಆರ್ಯನ್ ಖಾನ್ ನೇರವಾಗಿ ನಿರ್ದೇಶನಕ್ಕೆ ಇಳಿಯುತ್ತಿಲ್ಲ. ಕಳೆದ ನಾಲ್ಕು ವರ್ಷಗಳಿಂದ ಅವರು ಸ್ಕ್ರಿಪ್ಟ್ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಸಮಯ ಸಿಕ್ಕಾಗಲೆಲ್ಲ ವೆಬ್ ಸರಣಿ ಕೆಲಸದಲ್ಲಿ ಅವರು ಪಾಲ್ಗೊಳ್ಳುತ್ತಿದ್ದಾರೆ. ಈಗ ಅದನ್ನು ಜಾರಿಗೆ ತರುವ ಪ್ರಯತ್ನ ನಡೆದಿದೆ.

ಇದನ್ನೂ ಓದಿ: ‘ಸಲ್ಮಾನ್ ಖಾನ್​​, ಶಾರುಖ್ ಖಾನ್​​​ಗೆ ನನ್ನ ಹೋಲಿಸಬೇಡಿ’; ಯಶ್​ ನೇರ ಮಾತು

ಆರ್ಯನ್ ಖಾನ್ ಡ್ರಗ್ಸ್​ ಪ್ರಕರಣ: ಆರೋಪಿಗಳ ಸಂಚು ನಿರೂಪಿಸುವ ಪುರಾವೆ ಇಲ್ಲ ಎಂದ ಬಾಂಬೆ ಹೈಕೋರ್ಟ್

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್