ಆರ್ಯವರ್ಧನ್​ ಗುರೂಜಿ ಕುಟುಂಬದ ಆಸ್ತಿ 5 ಸಾವಿರ ಕೋಟಿ ರೂಪಾಯಿ; ಶಾಕ್​ ಆದ ಸ್ಪರ್ಧಿಗಳು

Aryavardhan Guruji | Bigg Boss OTT Kannada: ‘ನಾನು ಚಿಕ್ಕ ವಯಸ್ಸಿಗೆ ಊರು ಬಿಟ್ಟು ಬಂದೆ. ನನಗೂ ಆಸ್ತಿ ಕೊಟ್ಟಿದ್ದಾರೆ. ನಾನು ಏನೂ ಕಷ್ಟಪಟ್ಟಿಲ್ಲ’ ಎಂದು ಆರ್ಯವರ್ಧನ್​ ಗುರೂಜಿ ಹೇಳಿದ್ದಾರೆ.

ಆರ್ಯವರ್ಧನ್​ ಗುರೂಜಿ ಕುಟುಂಬದ ಆಸ್ತಿ 5 ಸಾವಿರ ಕೋಟಿ ರೂಪಾಯಿ; ಶಾಕ್​ ಆದ ಸ್ಪರ್ಧಿಗಳು
ಆರ್ಯವರ್ಧನ್ ಗುರೂಜಿ
Follow us
TV9 Web
| Updated By: ಮದನ್​ ಕುಮಾರ್​

Updated on:Aug 08, 2022 | 1:19 PM

ವೂಟ್​ ಸೆಲೆಕ್ಟ್​ನಲ್ಲಿ ಪ್ರಸಾರ ಆಗುತ್ತಿರುವ ‘ಬಿಗ್​ ಬಾಸ್​ ಒಟಿಟಿ ಕನ್ನಡ’ (Bigg Boss OTT Kannada) ಶೋ ಹಲವು ಕಾರಣಗಳಿಂದ ಸದ್ದು ಮಾಡುತ್ತಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ಪರ್ಧಿಗಳು ವಿವಿಧ ಕ್ಷೇತ್ರಗಳಿಂದ ಬಂದಿದ್ದಾರೆ. ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್​ ಗುರೂಜಿ (Aryavardhan Guruji) ಕೂಡ ಗಮನ ಸೆಳೆಯುತ್ತಿದ್ದಾರೆ. ಅವರು ಬಿಗ್​ ಬಾಸ್​ ಮನೆಗೆ ಹೋಗುವುದಕ್ಕೂ ಮುನ್ನವೇ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ಈಗ ಮತ್ತೆ ಸದ್ದು ಮಾಡುತ್ತಿದ್ದಾರೆ. ‘ನಾನು ಯಾರು’ ಎಂಬ ಟಾಸ್ಕ್​ನಲ್ಲಿ ಎಲ್ಲ ಸ್ಪರ್ಧಿಗಳು ತಮ್ಮ ಹಿನ್ನೆಲೆ ಬಗ್ಗೆ ಹೇಳಿಕೊಂಡಿದ್ದಾರೆ. ಈ ವೇಳೆ ಆರ್ಯವರ್ಧನ್​ ಗುರೂಜಿ ಅವರು ತಮ್ಮ ಆಸ್ತಿಯ (Aryavardhan Guruji Net Worth) ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅವರು ಹೇಳಿದ್ದು ಕೇಳಿ ಎಲ್ಲ ಸ್ಪರ್ಧಿಗಳು ಅಚ್ಚರಿ ಹೊರಹಾಕಿದ್ದಾರೆ.

‘ಹಾಸನ ಮತ್ತು ಬೇಲೂರು ಮಧ್ಯೆ ನಮ್ಮದು 40 ಎಕರೆ ಜಮೀನು ಇದೆ. ಸುತ್ತಲೂ ಕಾಡು-ಬೆಟ್ಟ ಇದೆ. ಮೂರು ಕೆರೆ ಇದೆ. ಸುತ್ತ ಮುತ್ತ ಯಾವುದೇ ಮನೆ ಇಲ್ಲ. ಇಂದು ಎಲ್ಲರೂ ಸಿಟಿಯಲ್ಲಿ ದುಡ್ಡು ಸಂಪಾದನೆ ಮಾಡಿ ಹಳ್ಳಿಗೆ ಹೋಗುತ್ತಾರೆ. ಆದರೆ ನಾವು ಹಳ್ಳಿಯಲ್ಲಿ ಇದ್ದು ಬೆಂಗಳೂರಿಗೆ ಬಂದವರು. ನಮಗೆ ಹಳ್ಳಿ ಎಂದರೆ ಬೋರು. ಸಾಕಷ್ಟು ಜಮೀನು ನಮಗೆ ಇದೆ. ನಾನು ಸುಳ್ಳು ಹೇಳಲ್ಲ. ನಮ್ಮ ಅಜ್ಜನ ಆಸ್ತಿ ಏನಿಲ್ಲವೆಂದರೂ 5 ಸಾವಿರ ಕೋಟಿ ರೂಪಾಯಿ ಬೆಲೆ ಬಾಳುತ್ತದೆ’ ಎಂದು ಆರ್ಯವರ್ಧನ್​ ಗುರೂಜಿ ಹೇಳಿದ್ದಾರೆ.

‘ನಾನು ಚಿಕ್ಕ ವಯಸ್ಸಿಗೆ ಊರು ಬಿಟ್ಟು ಬಂದೆ. ನನಗೂ ಆಸ್ತಿ ಕೊಟ್ಟಿದ್ದಾರೆ. ನಾನು ಏನೂ ಕಷ್ಟಪಟ್ಟಿಲ್ಲ. ನಾನು ಎಲ್ಲವನ್ನೂ ಚಾಲೆಂಜ್​ ಎಂದು ಸ್ವೀಕರಿಸುತ್ತೇನೆ. ಕೇಳಿದವರಿಗೆಲ್ಲ ನಾನು ದುಡ್ಡ ಕೊಟ್ಟಿದ್ದೇನೆ. ಅದು ಜೀವನದಲ್ಲಿ ನಾನು ಮಾಡಿದ ದೊಡ್ಡ ತಪ್ಪು. ಚಿತ್ರರಂಗದ ದೊಡ್ಡ ದೊಡ್ಡ ನಿರ್ಮಾಪಕರು ಮತ್ತು ನಿರ್ದೇಶಕರಿಗೆ ದುಡ್ಡು ಕೊಟ್ಟಿದ್ದೇನೆ’ ಎಂದಿದ್ದಾರೆ ಆರ್ಯವರ್ಧನ್​ ಗುರೂಜಿ. ಮೂರು ಬಾರಿ ದೆವ್ವವನ್ನು ನೋಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ
Image
Sonu Srinivas Gowda: ಖಾಸಗಿ ವಿಡಿಯೋ ಲೀಕ್​ ಆಗಿದ್ದು ಹೇಗೆ? ಎಲ್ಲವನ್ನೂ ಎಳೆಎಳೆಯಾಗಿ ವಿವರಿಸಿದ ಸೋನು ಶ್ರೀನಿವಾಸ್​ ಗೌಡ
Image
Sanya Iyer: ಅಪ್ಪನೇ ಮಗಳ ಖಾಸಗಿ ವಿಡಿಯೋ ರೆಕಾರ್ಡ್​ ಮಾಡಿದ್ದ; ಸಾನ್ಯಾ ಅಯ್ಯರ್​ ತಾಯಿ ಹೇಳಿದ ಕರಾಳ ಸತ್ಯಗಳು
Image
Sonu Srinivas Gowda: ಮೊದಲ ವಾರವೇ ಸೋನು ಗೌಡ ನಾಮಿನೇಟ್​; 8 ಸ್ಪರ್ಧಿಗಳ ಮೇಲಿದೆ ಎಲಿಮಿನೇಷನ್​ ತೂಗುಗತ್ತಿ
Image
Sonu Srinivas Gowda: ‘ಸುದೀಪ್​ ಇರುವ ವೇದಿಕೆಗೆ ಇದು ಗೌರವ ಅಲ್ಲ’: ಸೋನು ಶ್ರೀನಿವಾಸ್​ ಗೌಡ ಆಯ್ಕೆ ಆಗಿದ್ದಕ್ಕೆ ನೆಟ್ಟಿಗರು ಗರಂ

ಬಿಗ್​ ಬಾಸ್​ ಮನೆಯಲ್ಲಿ ಕೆಲವು ಸ್ಪರ್ಧಿಗಳು ತಮ್ಮ ಖಾಸಗಿ ಜೀವನದ ನೋವಿನ ಕಥೆಯನ್ನು ಹೇಳಿಕೊಂಡು ಸಿಂಪಥಿ ಗಿಟ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಆರ್ಯವರ್ಧನ್​ ಗುರೂಜಿ ಅವರ ಆರೋಪ. ‘ಯಾವ ದುಃಖವೂ ನನಗೆ ದುಃಖ ಎನಿಸುವುದಿಲ್ಲ. ಸವಾಲನ್ನು ಗೆಲ್ಲುವುದು ನಮ್ಮ ಧರ್ಮ. ಅಮ್ಮನಿಗೆ ಕಷ್ಟ ಬಂತು, ಅಪ್ಪನಿಗೆ ಕಷ್ಟ ಬಂತು ಎಂಬುದು ಸರಿಯಲ್ಲ. ಎಲ್ಲರ ಫ್ಯಾಮಿಲಿಯಲ್ಲೂ ಇದು ಇರುವಂಥದ್ದು. ಅತ್ತೆ-ಮಾವನನ್ನು ದೇವರ ಥರ ನೋಡಿಕೊಳ್ಳುತ್ತೇನೆ’ ಎಂದು ಆರ್ಯವರ್ಧನ್​ ಗುರೂಜಿ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:39 am, Mon, 8 August 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ