ಕನ್ನಡದ ‘ಟಾಕೀಸ್​’ ಲಾಂಚ್​ ಮಾಡಿದ ಶಿವಣ್ಣ; ಇದರಲ್ಲಿ ಇದ್ದಾರೆ ಸಾವಿರಕ್ಕೂ ಹೆಚ್ಚು ಕಲಾವಿದರು

‘ಟಾಕೀಸ್​’ ಮೂಲಕ ಕನ್ನಡದ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರಿಗೆ ಅವಕಾಶ ಸಿಗಲಿದೆ. ಇದರ ಬಗ್ಗೆ ಶಿವರಾಜ್​ಕುಮಾರ್​ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಕನ್ನಡದ ‘ಟಾಕೀಸ್​’ ಲಾಂಚ್​ ಮಾಡಿದ ಶಿವಣ್ಣ; ಇದರಲ್ಲಿ ಇದ್ದಾರೆ ಸಾವಿರಕ್ಕೂ ಹೆಚ್ಚು ಕಲಾವಿದರು
ಶಿವರಾಜ್​ಕುಮಾರ್​, ರತ್ನಾಕರ್​ ಕಾಮತ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 03, 2022 | 7:05 AM

ಹೊಸ ಪ್ರಯತ್ನಗಳಿಗೆ ನಟ ಶಿವರಾಜ್​ಕುಮಾರ್​ (Shivarajkumar) ಅವರು ಸದಾ ಬೆಂಬಲವಾಗಿ ನಿಲ್ಲುತ್ತಾರೆ. ಹೊಸ ತಂಡಗಳ ಆಹ್ವಾನಕ್ಕೆ ಅವರು ಓಗೊಟ್ಟು ಬರುತ್ತಾರೆ. ಆ ಮೂಲಕ ಕನ್ನಡ ಚಿತ್ರರಂಗದ ಬೆಳವಣಿಗೆಗೆ ಅವರು ಸಾಥ್​ ನೀಡುತ್ತಲೇ ಬಂದಿದ್ದಾರೆ. ಈಗ ಕನ್ನಡದ ಹೊಸ ಒಟಿಟಿ ಪ್ಲಾಟ್​ಫಾರ್ಮ್​ಗೆ ‘ಹ್ಯಾಟ್ರಿಕ್​ ಹೀರೋ’ ಪ್ರೋತ್ಸಾಹ ನೀಡಿದ್ದಾರೆ. ‘ಟಾಕೀಸ್​’ ಎಂಬ ಒಟಿಟಿಯನ್ನು ಶಿವಣ್ಣ ಲಾಂಚ್​ ಮಾಡಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯಕ್ರಮಕ್ಕೆ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಸ್ವಯಂ ಪ್ರಭ ಸಂಸ್ಥೆಯ ರತ್ನಾಕರ್ ಕಾಮತ್​ ಅವರು ಆರಂಭಿಸಿರುವ ‘ಟಾಕೀಸ್​’ಗೆ ಶಿವರಾಜ್​ಕುಮಾರ್​ ಶುಭ ಹಾರೈಸಿದರು. ಇಂದಿನ ಕಾಲದಲ್ಲಿ ಒಟಿಟಿ ವೇದಿಕೆಯ (OTT platform) ಪ್ರಾಮುಖ್ಯತೆ ಬಗ್ಗೆ ಅವರು ಮಾತನಾಡಿದರು. ಎಕ್ಸ್​ಕ್ಲೂಸಿವ್​ ಆಗಿ ಕನ್ನಡದ ಕಂಟೆಂಟ್​ಗಳಿಗಾಗಿ ‘ಟಾಕೀಸ್​’ (Talkies Kannada OTT) ಆರಂಭ ಆಗಿದೆ. ಇದರಲ್ಲಿ ಹಲವು ವಿಶೇಷತೆಗಳಿವೆ. ಹಾಗಾಗಿ ಶಿವಣ್ಣ ಅವರು ಈ ತಂಡದ ಬೆನ್ನು ತಟ್ಟಿದ್ದಾರೆ. ಇಂಥ ಕಾರ್ಯಗಳಿಗೆ ತಮ್ಮ ಬೆಂಬಲ ಯಾವಾಗಲೂ ಇರಲಿದೆ ಎಂದು ಅವರು ಭರವಸೆ ನೀಡಿದರು.

ಈ ಮೊದಲು ತುಳು ಸಿನಿಮಾ ಮತ್ತು ಕಿರುಚಿತ್ರಗಳನ್ನು ಪ್ರಸಾರ ಮಾಡುತ್ತಿದ್ದ ‘ಟಾಕೀಸ್​’ ಈಗ ತನ್ನ ವ್ಯಾಪ್ತಿ ಹಿರಿದಾಗಿಸಿಕೊಂಡಿದೆ. ಕನ್ನಡಕ್ಕೂ ಕಾಲಿಟ್ಟಿದ್ದು, ಸಕಲ ತಯಾರಿಯೊಂದಿಗೆ ಕಾರ್ಯಾರಂಭ ಮಾಡಿದೆ. ಇದರಲ್ಲಿ ಕನ್ನಡದ ಅನೇಕ ಒರಿಜಿನಲ್​ ಕಂಟೆಂಟ್​ಗಳು ಲಭ್ಯ ಆಗುತ್ತಿವೆ. ಖ್ಯಾತ ಕಲಾವಿದರು ನಟಿಸಿರುವ ಸಿನಿಮಾ, ಕಿರುಚಿತ್ರ, ವೆಬ್​ ಸೀರಿಸ್​ಗಳನ್ನು ಪ್ರೇಕ್ಷಕರು ‘ಟಾಕೀಸ್​’ನಲ್ಲಿ ನೋಡಬಹುದು.

ವಿಜಯ್​ ರಾಘವೇಂದ್ರ, ಪ್ರಮೋದ್​ ಶೆಟ್ಟಿ, ರಂಜನಿ ರಾಘವನ್​, ಮಂಜು ಪಾವಗಡ, ವೈಷ್ಣವಿ ಗೌಡ, ಭೂಮಿ ಶೆಟ್ಟಿ, ಹರೀಶ್​ ರಾಜ್​ ಸೇರಿದಂತೆ 1200ಕ್ಕೂ ಅಧಿಕ ಕಲಾವಿದರು ‘ಟಾಕೀಸ್​’ ಜೊತೆ ಕೈ ಜೋಡಿಸಿದ್ದಾರೆ. 700ಕ್ಕೂ ಹೆಚ್ಚು ತಂತ್ರಜ್ಞರು ಕೆಲಸ ಮಾಡಿದ್ದಾರೆ. 200ಕ್ಕೂ ಅಧಿಕ ದಿನಗಳ ಪರಿಶ್ರಮದಿಂದ ಈ ಒಟಿಟಿ ಶುರುವಾಗಿದೆ. 400ಕ್ಕಿಂತಲೂ ಹೆಚ್ಚಿನ ಕನ್ನಡ ಸಿನಿಮಾಗಳು ಇದರಲ್ಲಿ ಲಭ್ಯವಾಗುತ್ತಿವೆ. ಇದರ ಜೊತೆಗೆ ಇನ್ನೂ ಹೊಸ ಹೊಸ ಮನರಂಜನಾ ಕಂಟೆಂಟ್​ಗಳನ್ನು ನಿರ್ಮಿಸುವ ಗುರಿಯೊಂದಿಗೆ ‘ಟಾಕೀಸ್​’ ಮುಂದಡಿ ಇಟ್ಟಿದೆ. ಇದರಿಂದ ಸಾಕಷ್ಟು ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಅವಕಾಶ ಸಿಗಲಿದೆ.

‘ಟಾಕೀಸ್​’ ಬಗ್ಗೆ ಶಿವರಾಜ್​ಕುಮಾರ್​ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ‘ಕನ್ನಡಿಗರಿಂದ ಕನ್ನಡಿಗರಿಗೋಸ್ಕರ ಎಂಬ ಆಶಯದೊಂದಿಗೆ ಈ ಟಾಕೀಸ್​ ಒಟಿಟಿ ಶುರುವಾಗಿದೆ. ಇದರಿಂದ ಕನ್ನಡಿಗರಿಗೆ ಉದ್ಯೋಗ ಸಿಗುತ್ತದೆ. ಇದು ಬೇರೆ ಭಾಷೆಯ ಒಟಿಟಿಗಿಂತಲೂ ಕಮ್ಮಿ ಇಲ್ಲದಂತೆ ಬೆಳೆಯುತ್ತದೆ ಎಂಬ ನಂಬಿಕೆ ನನಗಿದೆ. ಈ ಅವಕಾಶವನ್ನು ಕನ್ನಡದ ಕಲಾವಿದರು ಮತ್ತು ತಂತ್ರಜ್ಞರು ಉಪಯೋಗ ಮಾಡಿಕೊಳ್ಳಬೇಕು. ಓಕೆ ಆಗದಿದ್ದರೂ ಪರವಾಗಿಲ್ಲ. ಧೈರ್ಯವಾಗಿ ಕಥೆ ಹೇಳಿ. ಒಳ್ಳೊಳ್ಳೆಯ ವೆಬ್​ ಸಿರೀಸ್​ ಕನ್ನಡದಲ್ಲಿ ನಿರ್ಮಾಣ ಆಗಲಿ. ನಮ್ಮಲ್ಲೂ ಸಾಕಷ್ಟು ಜನ ಬುದ್ಧಿವಂತರು ಇದ್ದಾರೆ. ಅವರ ಪ್ರತಿಭೆಯನ್ನು ಗುರುತಿಸಲು ಬಂದಿರುವ ರತ್ನಾಕರ್​ ಕಾಮತ್​ ಅವರಿಗೆ ಧನ್ಯವಾಗಳು’ ಎಂದು ಶಿವಣ್ಣ ಹೇಳಿದ್ದಾರೆ.

ಲಾಕ್​ಡೌನ್​ ಬಳಿಕ ಒಟಿಟಿ ಪ್ಲಾಟ್​ಫಾರ್ಮ್​ಗಳ ಬಳಕೆ ಹೆಚ್ಚಿದೆ. ಮುಂದಿನ ದಿನಗಳಲ್ಲಿ ಶಿವರಾಜ್​ಕುಮಾರ್​ ಅವರು ಕೂಡ ವೆಬ್​ ಸರಣಿಗಳಲ್ಲಿ ನಟಿಸಲಿದ್ದಾರೆ. ಆ ಬಗ್ಗೆ ಇದೇ ವೇದಿಕೆಯಲ್ಲಿ ಅವರು ಮಾಹಿತಿ ಹಂಚಿಕೊಂಡರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ:

‘ಕೆಜಿಎಫ್​ 2’ ಎದುರು ಸೋತ ‘ಬೀಸ್ಟ್​’ ಚಿತ್ರಕ್ಕೆ ಈಗ ಉಳಿದಿದ್ದು ಒಟಿಟಿ ಆಯ್ಕೆ ಮಾತ್ರ; ಯಾವಾಗ ರಿಲೀಸ್​?

1ನೇ ಸೀಸನ್​ಗೆ 40 ಲಕ್ಷ ರೂ, 2ನೇ ಸೀಸನ್​ಗೆ 20 ಕೋಟಿ ರೂ. ಸಂಬಳ ಪಡೆದ ‘ಪಾತಾಳ್​ ಲೋಕ್​’ ನಟ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ