Shiva Rajkumar: ಜಗಮೆಚ್ಚಿದ ‘ಭಜರಂಗಿ 2’; ಕನ್ನಡ ಚಿತ್ರಗಳ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಶಿವಣ್ಣ ನಟನೆಯ ಚಿತ್ರ
Bhajarangi 2: ಒಳ್ಳೆಯ ಸಿನಿಮಾಗಳನ್ನು ಕನ್ನಡ ಅಭಿಮಾನಿಗಳು ಎಂದಿಗೂ ಕೈಬಿಡುವುದಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಹಲವು ಕಾರಣಗಳಿಂದ ‘ಭಜರಂಗಿ 2’ ಚಿತ್ರ ಚಿತ್ರಮಂದಿರದಲ್ಲಿ ಬಹಳ ಕಾಲದವರೆಗೆ ನಿಲ್ಲಲು ಸಾಧ್ಯವಾಗಿರಲಿಲ್ಲ. ಆದರೆ ಓಟಿಟಿಯಲ್ಲಿ ತೆರೆಕಂಡ ಚಿತ್ರವನ್ನು ಸಿನಿಪ್ರೇಮಿಗಳು ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ.
ಶಿವರಾಜ್ಕುಮಾರ್ (Shiva Rajkumar) ಅವರ ‘ಭಜರಂಗಿ 2’ (Bhajarangi 2) ಚಿತ್ರ ಬಿಡುಗಡೆಗೂ ಮುನ್ನವೇ ಬಹಳ ನಿರೀಕ್ಷೆ ಹುಟ್ಟುಹಾಕಿತ್ತು. ಬಹಳ ಕಾಲದಿಂದ ಕಾದು, ಅಕ್ಟೋಬರ್ 29ರಂದು ಚಿತ್ರ ಬಿಡುಗಡೆಯಾದಾಗ, ಸಂಭ್ರಮದಿಂದ ಬರಮಾಡಿಕೊಂಡಿದ್ದ ಅಭಿಮಾನಿಗಳಿಗೆ ಪುನೀತ್ (Puneeth Rajkumar) ನಿಧನದ ಸುದ್ದಿ ಬರಸಿಡಿಲಿನಂತೆ ಎರಗಿತ್ತು. ನಂತರ ಕೆಲ ದಿನ ಚಿತ್ರದ ಪ್ರದರ್ಶನ ನಿಂತಿತು. ಕಾಲಾನಂತರದಲ್ಲಿ ಚಿತ್ರ ಚೇತರಿಕೆ ಕಂಡರೂ ನಿರೀಕ್ಷಿತ ಮಟ್ಟ ತಲುಪಲಿಲ್ಲ. ಆದರೆ ಕನ್ನಡ ಚಿತ್ರಪ್ರೇಮಿಗಳು ಒಳ್ಳೆಯ ಚಿತ್ರವನ್ನು ಎಂದಿಗೂ ಕೈಬಿಡುವುದಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಹೌದು. ಇತ್ತೀಚೆಗೆ ಅಂದರೆ ಡಿಸೆಂಬರ್ 23ರಿಂದ ‘ಭಜರಂಗಿ 2’ ಚಿತ್ರವನ್ನು ಓಟಿಟಿಯಲ್ಲಿ ಬಿಡುಗಡೆ ಮಾಡಲಾಯಿತು. ಜೀ5ನಲ್ಲಿ (Zee5) ತೆರೆಕಂಡ ಚಿತ್ರವನ್ನು ಕನ್ನಡ ಚಿತ್ರಪ್ರೇಮಿಗಳು ಪ್ರೀತಿಯಿಂದ ಬರಮಾಡಿಕೊಂಡಿದ್ದಾರೆ. ಇದರ ಪರಿಣಾಮ, ಚಿತ್ರ ಕೇವಲ ಮೂರೇ ದಿನದಲ್ಲಿ ಹಿಂದಿನ ದಾಖಲೆಗಳನ್ನು ಮುರಿದಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ.
‘ಭಜರಂಗಿ 2’ ಸೃಷ್ಟಿಸಿದ ಹೊಸ ದಾಖಲೆ ಏನು? ಜೀ5ನಲ್ಲಿ ತೆರೆಕಂಡಿರುವ ‘ಭಜರಂಗಿ 2’ ಬಿಡುಗಡೆಯಾದ ಕೇವಲ ಮೂರು ದಿನದಲ್ಲಿ ಬರೋಬ್ಬರಿ 5 ಕೋಟಿ ನಿಮಿಷಗಳ ವೀಕ್ಷಣೆ ಪಡೆದಿದೆ. ಓಟಿಟಿಯಲ್ಲಿ ಇಷ್ಟು ಕಡಿಮೆ ಅವಧಿಯಲ್ಲಿ ಬೃಹತ್ ವೀಕ್ಷಣೆ ಪಡೆದ ಮೊದಲ ಕನ್ನಡ ಚಿತ್ರ ಇದಾಗಿದ್ದು, ದಾಖಲೆ ಬರೆದಿದೆ. ಇದು ಚಿತ್ರತಂಡ ಹಾಗೂ ಶಿವರಾಜ್ಕುಮಾರ್ ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ. ಜೀ5 ಈ ಕುರಿತು ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದೆ. ಅಲ್ಲದೇ ವೀಕ್ಷಕರಿಗೆ ಧನ್ಯವಾದ ಸಲ್ಲಿಸಿದೆ.
ಈ ಕುರಿತು ಜೀ5 ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:
ಭಜರಂಗಿಯ – ೨ ಚಿತ್ರದ ಭರ್ಜರಿ ಮೈಲಿಗಲ್ಲು – ??? ವೀಕ್ಷಕರೆಲ್ಲರಿಗೂ ಧನ್ಯವಾದಗಳು ❤ ಅಧ್ಬುತ ಫ್ಯಾಂಟಸಿ Blockbuster ಭಜರಂಗಿ 2 ಈಗಲೇ ನೋಡಿ #ZEE5 ನಲ್ಲಿhttps://t.co/vCMcO8exOb #Bhajarangi2 #Bhajarangi2OnZEE5 #ShivarajKumar #BhavanaMenon pic.twitter.com/KLSQwY9KA3
— ZEE5 Kannada (@ZEE5Kannada) December 27, 2021
ಎ ಹರ್ಷ (A Harsha) ನಿರ್ದೇಶನದ ಈ ಚಿತ್ರದಲ್ಲಿ ಭಾವನಾ ಮೆನನ್ (Bhavana Menon) ನಾಯಕಿಯಾಗಿ ಅಭಿನಯಿಸಿದ್ದಾರೆ. ಭಜರಂಗಿ ಲೋಕಿ (Loki), ಶ್ರುತಿ (Shruthi), ಶಿವರಾಜ್ ಕೆ.ಆರ್. ಪೇಟೆ ಸೇರಿದಂತೆ ಅನೇಕ ಕಲಾವಿದರು ಬಣ್ಣ ಹಚ್ಚಿದ್ದಾರೆ. ಖ್ಯಾತ ನಿರ್ಮಾಪಕರಾದ ಜಯಣ್ಣ-ಭೋಗೇಂದ್ರ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಅರ್ಜುನ್ ಜನ್ಯ (Arjun Janya) ಸಂಗೀತ ಸಂಯೋಜಿಸಿದ್ದಾರೆ.
ಇದನ್ನೂ ಓದಿ:
Shiva Rajkumar: ಶಿವಣ್ಣ ಹೃದಯವಂತಿಕೆಗಿಲ್ಲ ಸರಿಸಾಟಿ; ಮಕ್ಕಳೊಂದಿಗೆ ಖೋ ಖೋ ಆಡುತ್ತಿರುವ ಅಪರೂಪದ ವಿಡಿಯೋ ಇಲ್ಲಿದೆ
Diganth: ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿರುವ ನಟ ದಿಗಂತ್; ಅವರ ಖಾತೆಯಲ್ಲಿ ಒಟ್ಟು ಎಷ್ಟು ಸಿನಿಮಾಗಳಿವೆ ಗೊತ್ತಾ?