AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Srinivas Gowda: ಮೂಡ್ ಇಲ್ಲ ಅಂದ್ರೆ ಸೋನು ಶ್ರೀನಿವಾಸ್​ ಗೌಡ 3 ದಿನ ಸ್ನಾನ ಮಾಡಲ್ಲ; ಎಲ್ಲರ ಎದುರು ಸತ್ಯ ಬಯಲು

Bigg Boss Kannada OTT | Sonu Srinivas Gowda: ಸೋನು ಶ್ರೀನಿವಾಸ್​ ಗೌಡ ಅವರನ್ನು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಟ್ರೋಲ್​ ಮಾಡಲಾಗುತ್ತಿದೆ. ತಾವು 3 ದಿನ ಸ್ನಾನ ಮಾಡಿಲ್ಲ ಎಂಬ ಸತ್ಯವನ್ನು ಸೋನು ಗೌಡ ಒಪ್ಪಿಕೊಂಡಿದ್ದಾರೆ.

Sonu Srinivas Gowda: ಮೂಡ್ ಇಲ್ಲ ಅಂದ್ರೆ ಸೋನು ಶ್ರೀನಿವಾಸ್​ ಗೌಡ 3 ದಿನ ಸ್ನಾನ ಮಾಡಲ್ಲ; ಎಲ್ಲರ ಎದುರು ಸತ್ಯ ಬಯಲು
ಸೋನು ಶ್ರೀನಿವಾಸ್ ಗೌಡ
TV9 Web
| Updated By: ಮದನ್​ ಕುಮಾರ್​|

Updated on:Aug 15, 2022 | 9:36 AM

Share

ಬಿಗ್ ಬಾಸ್​ ಮನೆಯಲ್ಲಿ ಕಿಚ್ಚ ಸುದೀಪ್​ (Kichcha Sudeep) ಅವರು ಮೊದಲ ವಾರದ ಪಂಚಾಯಿತಿ ನಡೆಸಿಕೊಟ್ಟಿದ್ದಾರೆ. ಈ ವೇಳೆ ಹಲವು ವಿಚಾರಗಳು ಚರ್ಚೆ ಆಗಿವೆ. ಸಾಕಷ್ಟು ತಮಾಷೆಯ ಪ್ರಸಂಗಗಳಿಗೆ ಈ ಎಪಿಸೋಡ್​ ಸಾಕ್ಷಿ ಆಗಿದೆ. ಈ ರಿಯಾಲಿಟಿ ಶೋನಲ್ಲಿ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಹೆಚ್ಚು ಫೇಮಸ್​​ ಆಗುತ್ತಿದ್ದಾರೆ. ತುಂಬ ಓಪನ್​ ಆಗಿ ಮಾತನಾಡುವ ಕಾರಣದಿಂದ ಅವರು ಗಮನ ಸೆಳೆಯುತ್ತಿದ್ದಾರೆ. ಅನೇಕ ವಿಷಯಗಳನ್ನು ಅವರು ಮುಚ್ಚುಮರೆ ಇಲ್ಲದೇ ಹಂಚಿಕೊಂಡಿದ್ದಾರೆ. ಆ ಮೂಲಕ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ​(Bigg Boss Kannada OTT) ಶೋನಲ್ಲಿ ಸೋನು ಗೌಡ ಅವರು ಚರ್ಚೆಗೆ ಒಳಗಾಗುತ್ತಿದ್ದಾರೆ. ಅಚ್ಚರಿ ಎಂದರೆ, ‘ಮೂಡ್​ ಇಲ್ಲದಿದ್ದರೆ ನಾನು ಮೂರು ದಿನ ಸ್ನಾನ ಮಾಡಲ್ಲ’ ಎಂದು ಅವರು ಹೇಳಿಕೊಂಡಿದ್ದಾರೆ. ಈ ವಿಷಯ ಕೇಳಿ ಎಲ್ಲರೂ ಬಿದ್ದು ಬಿದ್ದು ನಕ್ಕಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಒಟಿಟಿ’ ಕಾರ್ಯಕ್ರಮದಲ್ಲಿ ಒಂದು ವಾರ ಕಳೆದಿದೆ. ವಾರದ ಪಂಚಾಯಿತಿಯಲ್ಲಿ ಸ್ಪರ್ಧಿಗಳಿಗೆ ಸುದೀಪ್​ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ‘ಈ ಮನೆಯಲ್ಲಿ ತಮ್ಮ ವಸ್ತುಗಳನ್ನು ಹೆಚ್ಚು ಗಲೀಜು ಮಾಡಿ ಇಟ್ಟುಕೊಳ್ಳುವವರು ಯಾರು’ ಎಂದು ಕೇಳಿದ್ದಕ್ಕೆ ಹಲವರ ಹೆಸರು ಹೊರಬಂದವು. ಇದೇ ವೇಳೆ ಸ್ನಾನದ ಬಗ್ಗೆಯೂ ಪ್ರಸ್ತಾಪ ಆಯ್ತು.

‘ಸೋನು ಗೌಡ ಸ್ನಾನ ಮಾಡುವುದಿಲ್ಲ’ ಎಂದು ಸಾನ್ಯಾ ಅಯ್ಯರ್​ ಆರೋಪಿಸಿದರು. ‘ಹೌದು, ನಾನು ಇವತ್ತು ಸ್ನಾನ ಮಾಡಿಲ್ಲ’ ಎಂದು ಸುದೀಪ್​ ಎದುರು ಸೋನು ಗೌಡ ಒಪ್ಪಿಕೊಂಡರು. ‘ಇಲ್ಲಿ ಎಷ್ಟೋ ಜನರು ಸ್ನಾನದ ವಿಚಾರದಲ್ಲಿ ಡ್ರಾಮಾ ಮಾಡುತ್ತಾರೆ. ಎಲ್ಲರೂ ಪ್ರತಿ ದಿನ ಸ್ನಾನ ಮಾಡ್ತಾರೆ. ನಮ್ಮ ಮನೆಯಲ್ಲಿ ಒಮ್ಮೊಮ್ಮೆ ಮೂಡ್​ ಇಲ್ಲ ಅಂದರೆ ಮೂರು ದಿನಕ್ಕೊಮ್ಮೆ ಸ್ನಾನ ಮಾಡ್ತೀನಿ’ ಎಂದು ಸೋನು ಹೇಳಿದ್ದಾರೆ. ಅವರ ಮಾತು ಕೇಳಿ ಎಲ್ಲರೂ ಜೋರಾಗಿ ನಕ್ಕಿದ್ದಾರೆ.

ಇದನ್ನೂ ಓದಿ
Image
Sonu Srinivas Gowda: ‘ನೀವು ಹೀಗೆ ಮಾಡಿದ್ರೆ ಈ ಶೋ ನಡೆಯಲ್ಲ’: ಸುದೀಪ್​ ಕೋಪಕ್ಕೆ ಕಾರಣವಾಯ್ತು ಸೋನು ಗೌಡ ವರ್ತನೆ
Image
Sonu Srinivas Gowda: ‘ಸೋನು ಬಾತ್​ ರೂಮ್​ ಯಾಕೆ ಹುಡುಕಲಿಲ್ಲ?’: ವೇದಿಕೆ ಮೇಲೆ ಸುದೀಪ್​ ಕೇಳಿದ್ರು ನೇರ ಪ್ರಶ್ನೆ
Image
Sonu Srinivas Gowda: ಸೋನು ಶ್ರೀನಿವಾಸ್​ ಗೌಡಗೆ ಮುಗಿಬಿದ್ದು ವೋಟ್​ ಮಾಡಿದ ಜನರು; ಬಿಗ್​ ಬಾಸ್​ನಲ್ಲಿ ವೈರಲ್​ ಹುಡುಗಿ ಸೇಫ್​
Image
Sonu Srinivas Gowda: ಸೋನು ಶ್ರೀನಿವಾಸ್​ ಗೌಡ ಫೋನ್​ ನಂಬರ್​ ಏನು? ಅದ್ರಲ್ಲೂ ಚಾಲಕಿತನ ತೋರಿದ ರೀಲ್ಸ್​ ಬೆಡಗಿ

ಸೋನು ಶ್ರೀನಿವಾಸ್​ ಗೌಡ ಅವರನ್ನು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಟ್ರೋಲ್​ ಮಾಡಲಾಗುತ್ತಿದೆ. ಅವರಿಗೆ ಈ ವೇದಿಕೆಯಲ್ಲಿ ಅವಕಾಶ ಸಿಕ್ಕಿದ್ದಕ್ಕೆ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೊದಲ ವಾರವೇ ಅವರು ಎಲಿಮಿನೇಟ್​ ಆಗಬಹುದು ಎಂದು ಕೆಲವರು ಊಹಿಸಿದ್ದರು. ಆದರೆ ವೀಕ್ಷಕರಿಂದ ಚೆನ್ನಾಗಿ ವೋಟ್​ ಪಡೆದ ಕಾರಣ ಅವರು ಮೊದಲ ವಾರ ಸೇಫ್​ ಆಗಿದ್ದಾರೆ. ಈಗ ಸ್ನಾನದ ವಿಚಾರಕ್ಕೆ ಟ್ರೋಲ್​ ಆಗುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:21 am, Mon, 15 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ