50 ದಿನ ಪೂರೈಸಿದ ‘ಬ್ಲಿಂಕ್’ ಸಿನಿಮಾ, ತೆಲುಗು, ತಮಿಳು ಡಬ್​ಗೆ ಚಿಂತನೆ

ಹೊಸಬರ ತಂಡ ಸೇರಿ ಮಾಡಿದ ‘ಬ್ಲಿಂಕ್’ ಸಿನಿಮಾ ಬಿಡುಗಡೆ ಆದಾಗ ಕೇವಲ ಎಂಟು ಶೋಗಳು ದೊರೆತಿದ್ದವು, ಬಳಿಕ ಕಂಟೆಂಟ್​ನಿಂದ ಗಮನ ಸೆಳೆದು ಶೋಗಳ ಸಂಖ್ಯೆ ಹೆಚ್ಚಿಸಿಕೊಂಡು ಈಗ 50 ದಿನ ಪೂರೈಸಿದೆ ಸಿನಿಮಾ.

50 ದಿನ ಪೂರೈಸಿದ ‘ಬ್ಲಿಂಕ್’ ಸಿನಿಮಾ, ತೆಲುಗು, ತಮಿಳು ಡಬ್​ಗೆ ಚಿಂತನೆ
Follow us
ಮಂಜುನಾಥ ಸಿ.
|

Updated on: May 22, 2024 | 9:12 PM

ಕೋವಿಡ್​ನಿಂದಾಗಿ ನಾನಾ ಸಮಸ್ಯೆಗಳನ್ನು ಎದುರಿಸಿ ಕಷ್ಟಪಟ್ಟು ಸಿನಿಮಾ ಮಾಡಿ, ಅಷ್ಟೇ ಕಷ್ಟಪಟ್ಟು ಸಿನಿಮಾ ಬಿಡುಗಡೆ ಮಾಡಿದ ಮೇಲೆ ಸಿನಿಮಾ ಜನಮೆಚ್ಚುಗೆ ಗಳಿಸಿದರೆ ಅದರ ಖುಷಿಯೇ ಬೇರೆ. ಅದೇ ರೀತಿಯ ಖುಷಿಯನ್ನು ಈಗ ‘ಬ್ಲಿಂಕ್’ ಸಿನಿಮಾ ತಂಡ ಅನುಭವಿಸುತ್ತಿದೆ. ಯುವಕರು ಮಾಡಿದ ಭಿನ್ನ ಪ್ರಯತ್ನ ‘ಬ್ಲಿಂಕ್’ (Blink) ಹಿಟ್ ಎನಿಸಿಕೊಂಡಿದೆ. 50 ದಿನವನ್ನು ಈ ಸಿನಿಮಾ ಪೂರೈಸಿದ್ದು, ಚಿತ್ರತಂಡ ಸಂಭ್ರಮಾಚರಣೆ ಮಾಡಿದೆ. ಶ್ರೀನಿಧಿ ಬೆಂಗಳೂರು ನಿರ್ದೇಶನದ ಟೈಮ್‌ ಟ್ರಾವೆಲ್‌ ಸಿನಿಮಾ “ಬ್ಲಿಂಕ್‌” ಅಮೇಜಾನ್ ಒಟಿಟಿಯಲ್ಲಿ ಈಗಾಗಲೇ ಬಿಡುಗಡೆಯಾಗಿದ್ದು, ಅಲ್ಲಿಯೂ ಸಹ ಬಹಳ ಒಳ್ಳೆಯ ಪ್ರತಿಕ್ರಿಯೆ ಪಡೆಯುತ್ತಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿನಿಮಾದ ನಿರ್ಮಾಪಕ ರವಿಚಂದ್ರ ಎ ಜೆ, ಸಿನಿಮಾ ಇಷ್ಟು ಚೆನ್ನಾಗಿ ಪ್ರದರ್ಶನಗೊಳ್ಳುತ್ತದೆ ಎಂಬ ನಿರೀಕ್ಷೆ ಇರಲಿಲ್ಲ. ಮನೆಯವರು ಖುಷಿಯಾಗಿದ್ದಾರೆ. ತಂಡ ಖುಷಿಯಾಗಬೇಕು ಎಂದರೆ ಅಂದುಕೊಂಡಿರುವ ದುಡ್ಡ ಬರಬೇಕು. ಇಡೀ ಸಿನಿಮಾ ತಂಡ ಪ್ರಾಮಾಣಿಕವಾಗಿ ದುಡಿದಿದೆ. ಅವರಿಗೆಲ್ಲಾ ಮುಂದೆ ಒಳ್ಳೆ ಸಿನಿ ಕರಿಯರ್ ಸಿಗಬೇಕು. ಆದಷ್ಟು ಬೇಗ ತೆಲುಗಿಗೂ ಈ ಸಿನಿಮಾವನ್ನು ಡಬ್ ಮಾಡಿಸುತ್ತೇವೆ. ತಮಿಳು ಡಬ್ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.

ಇದನ್ನೂ ಓದಿ:‘ಬ್ಲಿಂಕ್’ ಸಿನಿಮಾ ಪೈರಸಿ ಕಾಪಿ ನೋಡಿದ್ರಾ? QR ಕೋಡ್ ಹಾಕಿ ವಿಶೇಷ ಮನವಿ ಮಾಡಿದ ನಿರ್ಮಾಪಕ

ನಟ ದೀಕ್ಷಿತ್ ಶೆಟ್ಟಿ ಮಾತನಾಡಿ, ‘ಎಷ್ಟೋ ವರ್ಷಗಳ ನಂತರ ಹೊಸಬರ ತಂಡ ಮಾಡಿದ ಸಿನಿಮಾ ಒಂದು 50 ದಿನ ಪೂರೈಸಿದೆ. ನಮಗೆ ನಂಬಲು ಆಗುತ್ತಿಲ್ಲ. ಮೊದಲ ದಿನದಿಂದ ಇಲ್ಲಿವರೆಗೂ ಬಹಳಷ್ಟು ಹೋರಾಟ ಮಾಡಿದ್ದೇವು. ನಾವು ಜನರನ್ನು ಕರೆದುಕೊಂಡು ಥಿಯೇಟರ್ ತುಂಬಿಸುತ್ತಿದ್ದೇವೆ ಎಂದು ಒಂದಷ್ಟು ಜನ ಮಾತಾನಾಡಿಕೊಂಡರು. ಹಾಗೇ ಹೇಳಿದವರಿಗೆ ಉತ್ತರವಾಗಿ ಸಿನಿಮಾ 50 ದಿನ ಪೂರೈಸಿದೆ. ಸಿನಿಮಾ ಅಷ್ಟು ಕೋಟಿ ಮಾಡಬೇಕು. ಇಷ್ಟು ಕೋಟಿ ಮಾಡಬೇಕು ಎನ್ನುವುದು ನನ್ನ ತಲೆಯಲ್ಲಿ ಇರಲಿಲ್ಲ. ನಿರ್ಮಾಪಕರು ಗೆಲ್ಲಬೇಕು. ನಿಲ್ಲಬೇಕು ಅನ್ನುವುದಷ್ಟೇ ಇತ್ತು. ಹಾಕಿದ ಬಂಡವಾಳ ವಾಪಸ್ ಬರುವುದರಲ್ಲಿದೆ. ಹೀಗಾಗಿ ಖುಷಿ ಇದೆ’ ಎಂದರು.

ಒಟಿಟಿಯಲ್ಲಿಯೂ ಮಿಂಚುತ್ತಿರುವ ‘ಬ್ಲಿಂಕ್’

ಥಿಯೇಟರ್ ನಲ್ಲಿ ಮೆಚ್ಚುಗೆ ಪಡೆದಿದ್ದ ‘ಬ್ಲಿಂಕ್’ ಸಿನಿಮಾ ಒಟಿಟಿಯಲ್ಲಿಯೂ ಸದ್ದು ಮಾಡುತ್ತಿದೆ. ಅಮೇಜಾನ್ ಪ್ರೈಮ್ ನಲ್ಲಿ ಸ್ಟ್ರೀಮ್ ಆರಂಭಿಸಿದ 3 ದಿನದಲ್ಲಿಯೇ 7 ಮಿಲಿಯನ್ಸ್ ಮಿನಿಟ್ ಸ್ಟ್ರೀಮಿಂಗ್ ಕಂಡಿದೆ ಈ ಸಿನಿಮಾ. 4 ನೇ ದಿನ 10 ಮಿಲಿಯನ್ ಮಿನಿಟ್ಸ್ ತಲುಪಿದೆ. ‘ಬ್ಲಿಂಕ್’ ಚಿತ್ರಕ್ಕೆ ಶ್ರೀನಿಧಿ ಬೆಂಗಳೂರು ಆಕ್ಷನ್ ಕಟ್ ಹೇಳಿದ್ದಾರೆ. ರವಿಚಂದ್ರ ಎ.ಜೆ. ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿದ್ದಾರೆ. ಚೈತ್ರಾ ಆಚಾರ್, ಗೋಪಾಲ್ ದೇಶಪಾಂಡೆ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸಿದ್ದಾರೆ.

ಶಿವರಾತ್ರಿ ಹಬ್ಬದಂದು ಸೂಪರ್ ಸ್ಟಾರ್ಸ್ ಸಿನಿಮಾಗಳ ಮಧ್ಯೆ ತೆರೆಗೆ ಬಂದ ‘ಬ್ಲಿಂಕ್’ ಸಿನಿಮಾಗೆ ಪ್ರಾರಂಭದಲ್ಲಿ ಅಷ್ಟಾಗಿ ಉತ್ತಮ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಆದರೆ ಆರಂಭದ ದಿನಗಳಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು, ಸಿನಿಮಾದ ಬಗ್ಗೆ ಮಾತನಾಡಿ ಆದ ಮೌತ್ ಪಬ್ಲಿಸಿಟಿಯಿಂದ ‘ಬ್ಲಿಂಕ್’ ಶೋಗಳು ಏರಿಕೆಯಾಗುತ್ತಾ ಹೋದವು. ಕನ್ನಡ ಸಿನಿಮಾಗಳಿಗೆ ಶೋ ಸಿಕ್ತಿಲ್ಲ ಎಂಬ ಆಪವಾದದ ನಡುವೆ 8 ಶೋಗಳಿಂದ 82 ಶೋ ‘ಬ್ಲಿಂಕ್’ ಪಾಲಾಯ್ತು. ಹೀಗಾಗಿ ಶೋ ಹೆಚ್ಚಳದಿಂದ ಪ್ರೇಕ್ಷಕರ ಪ್ರೀತಿಯೂ ಪಡೆದ ‘ಬ್ಲಿಂಕ್’ ಸಿನಿಮಾ ಆಫ್ ಸೆಂಚುರಿ ಬಾರಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!