ಆನೆ ನೋಡಿಕೊಂಡ ಬೊಮ್ಮನ್​-ಬೆಳ್ಳಿ ದಂಪತಿಗೆ ಇದೆಂಥಾ ಸ್ಥಿತಿ; ಸಿನಿಮಾ ತಂಡದವರಿಂದಲೇ ಮೋಸ

ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಬೊಮ್ಮನ್ ಹಾಗೂ ಬೆಳ್ಳಿ ಈ ಬಗ್ಗೆ ಮಾತನಾಡಿದ್ದಾರೆ. ನಿರ್ದೇಶಕಿ ಕಾರ್ತಿಕಿ ಅವರಿಗೆ ಈ ದಂಪತಿ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಆನೆ ನೋಡಿಕೊಂಡ ಬೊಮ್ಮನ್​-ಬೆಳ್ಳಿ ದಂಪತಿಗೆ ಇದೆಂಥಾ ಸ್ಥಿತಿ; ಸಿನಿಮಾ ತಂಡದವರಿಂದಲೇ ಮೋಸ
ಬೆಳ್ಳಿ-ಬೊಮ್ಮ
Follow us
ರಾಜೇಶ್ ದುಗ್ಗುಮನೆ
|

Updated on: Aug 07, 2023 | 7:56 AM

ಕಾರ್ತಿಕಿ​ ಗೋನ್ಸಾಲ್ವಿಸ್ ನಿರ್ದೇಶನದಲ್ಲಿ ಮೂಡಿಬಂದ ‘ದಿ ಎಲಿಫೆಂಟ್​ ವಿಸ್ಪರರ್ಸ್​’ (The Elephant Whisperers) ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಅವಾರ್ಡ್ ಸಿಕ್ಕಿದೆ. ಈ ಡಾಕ್ಯುಮೆಂಟರಿಯಲ್ಲಿ ಬೊಮ್ಮನ್​ ಮತ್ತು ಬೆಳ್ಳಿ (Bomman and Bellie) ದಂಪತಿ ಗಮನ ಸೆಳೆದಿದ್ದರು. ಆನೆಯನ್ನು ಅವರು ನೋಡಿಕೊಂಡ ರೀತಿಗೆ ಎಲ್ಲರೂ ಭಾವುಕರಾಗಿದ್ದರು. ಆನೆ ಮತ್ತು ಮನುಷ್ಯ ನಡುವಿನ ಸಂಬಂಧವನ್ನು ಅದ್ಭುತವಾಗಿ ವಿವರಿಸಲಾಗಿತ್ತು. ಈಗ ಈ ದಂಪತಿ ಸಿನಿಮಾ ನಿರ್ಮಾತೃರ ವಿರುದ್ಧ ಗಂಭೀರ ಆರೋಪ ಒಂದನ್ನು ಮಾಡಿದ್ದಾರೆ. ತಮಗೆ ಯಾವುದೇ ಸಂಭಾವನೆ ಸಿಕ್ಕಿಲ್ಲ ಎಂದು ದೂರಿದ್ದಾರೆ.

ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಬೊಮ್ಮನ್ ಹಾಗೂ ಬೆಳ್ಳಿ ಈ ಬಗ್ಗೆ ಮಾತನಾಡಿದ್ದಾರೆ. ನಿರ್ದೇಶಕಿ ಕಾರ್ತಿಕಿ ಅವರಿಗೆ ಈ ದಂಪತಿ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. 2 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೋರಲಾಗಿದೆ. ಸಾಕ್ಷ್ಯಚಿತ್ರ ಶೂಟ್ ಮಾಡುವ ಸಂದರ್ಭದಲ್ಲಿ ಒಂದು ಮನೆ ಕಟ್ಟಿಕೊಡುವ ಭರವಸೆ ನೀಡಲಾಗಿತ್ತು. ಒಂದು ವಾಹನ ಹಾಗೂ ಆರ್ಥಿಕ ಸಹಾಯದ ಭರವಸೆಯನ್ನೂ ಇವರಿಗೆ ಕಾರ್ತಿಕಿ ನೀಡಿದ್ದರು. ಆದರೆ, ಅದಾವುದೂ ನೆರವೇರಿಲ್ಲ.

‘ನಮ್ಮನ್ನು ರಿಯಲ್ ಹೀರೋಗಳು ಎಂದು ಎಲ್ಲ ಕಡೆಗಳಲ್ಲೂ ಪರಿಚಯಿಸಲಾಯಿತು. ಆದರೆ, ತಂಡದವರ ಕಡೆಯಿಂದ ನಮಗೆ ಹಣದ ಸಹಾಯ ಸಿಕ್ಕಿಲ್ಲ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹಾಗೂ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ದೇಣಿಗೆಗಳನ್ನು ತಂಡದವರು ಸ್ವೀಕರಿಸಿದ್ದಾರೆ. ಆದರೆ, ನಮಗೆ ಯಾವುದೇ ಪರಿಹಾರ ನೀಡದೆ ತಂಡದವರು ಎಲ್ಲಾ ಹಣಕಾಸಿನ ಲಾಭಗಳನ್ನು ಪಡೆದರು’ ಎಂದು ದಂಪತಿ ಆರೋಪಿಸಿದ್ದಾರೆ.

ಬೊಮ್ಮನ್ ಹಾಗೂ ಬೆಳ್ಳಿಯ ಮದುವೆ ದೃಶ್ಯವೊಂದು ಸಾಕ್ಷ್ಯಚಿತ್ರದಲ್ಲಿ ಬರುತ್ತದೆ. ಇದಕ್ಕಾಗಿ ಈ ದಂಪತಿಯೇ ಹಣ ಖರ್ಚು ಮಾಡಿದ್ದರಂತೆ. ‘ನಿರ್ದೇಶಕಿ ಕಾರ್ತಿಕಿ ಅವರು ನಮ್ಮ ಮದುವೆಯ ದೃಶ್ಯವನ್ನು ಮರುಸೃಷ್ಟಿ ಮಾಡಲು ಬಯಸಿದ್ದರು. ಹೀಗಾಗಿ ಆ ದೃಶ್ಯವನ್ನು ಸೇರಿಸಲಾಗಿದೆ. ಈ ದೃಶ್ಯದ ಶೂಟ್​ಗೆ ಬೇಕಿರುವ ಸಿದ್ಧತೆಯನ್ನು ನಾವೇ ಮಾಡಿಕೊಂಡಿದ್ದೆವು. ಇದಕ್ಕಾಗಿ ನಮ್ಮ ಉಳಿತಾಯ ಖಾತೆಯಿಂದ ಹಣ ಬಳಕೆ ಮಾಡಿಕೊಳ್ಳಲಾಗಿದೆ. ಈ ಹಣವನ್ನು ಮರಳಿ ನೀಡುವುದಾಗಿ ಅವರು ಹೇಳಿದ್ದರು. ಆದರೆ, ಅದು ಭರವಸೆಯಾಗಿಯೇ ಉಳಿದಿದೆ’ ಎಂದಿದ್ದಾರೆ ಬೊಮ್ಮನ್ ಹಾಗೂ ಬೆಳ್ಳಿ.

ಇದನ್ನೂ ಓದಿ: ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಂಡ ಮಾವುತರಿಗೆ ತಮಿಳುನಾಡು ಸಿಎಂ ಬಂಪರ್​ ಕೊಡುಗೆ

‘ಆಸ್ಕರ್ ಗೆದ್ದ ನಂತರದಲ್ಲಿ ಕಾರ್ತಿಕಿ ಅವರು ಸಂಪೂರ್ಣವಾಗಿ ಬದಲಾದರು. ಅವರು ಪ್ರತಿಕ್ರಿಯೆ ನೀಡುವುದನ್ನೇ ನಿಲ್ಲಿಸಿಬಿಟ್ಟರು’ ಎಂದು ಬೊಮ್ಮನ್ ಹಾಗೂ ಬೆಳ್ಳಿ ಆರೋಪಿಸಿದ್ದಾರೆ. ಇದಕ್ಕೆ ಕಾರ್ತಿಕಿ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು