AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿ ಸಿನಿಮಾಗಳಿಗೂ ಸೆನ್ಸಾರ್ ಪ್ರಮಾಣಪತ್ರ ಕಡ್ಡಾಯ? ‘ಸತ್ಲುಜ್’ ವಿವಾದದ ಬೆನ್ನಲ್ಲೇ ಕೇಂದ್ರದ ಚಿಂತನೆ

ದಿಲ್ಜಿತ್ ದೋಸಾಂಜ್ ನಟನೆಯ ‘ಸತ್ಲುಜ್’ ಸಿನಿಮಾವನ್ನು ಸೆನ್ಸಾರ್ ಪ್ರಮಾಣಪತ್ರ ಇಲ್ಲದೇ ಒಟಿಟಿಯಲ್ಲಿ ಬಿಡುಗಡೆ ಮಾಡಿದ್ದರಿಂದ ದೊಡ್ಡ ವಿವಾದ ಸೃಷ್ಟಿ ಆಗಿದೆ. ಈ ಹಿನ್ನೆಲೆಯಲ್ಲಿ ಒಟಿಟಿ ಸಿನಿಮಾಗಳಿಗೂ ಸೆನ್ಸಾರ್ ಪ್ರಮಾಣಪತ್ರ ಕಡ್ಡಾಯ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಆ ಕುರಿತು ಇಲ್ಲಿದೆ ವಿವರ..

ಒಟಿಟಿ ಸಿನಿಮಾಗಳಿಗೂ ಸೆನ್ಸಾರ್ ಪ್ರಮಾಣಪತ್ರ ಕಡ್ಡಾಯ? ‘ಸತ್ಲುಜ್’ ವಿವಾದದ ಬೆನ್ನಲ್ಲೇ ಕೇಂದ್ರದ ಚಿಂತನೆ
Diljit Dosanjh
ಮದನ್​ ಕುಮಾರ್​
|

Updated on: Jul 15, 2026 | 10:40 PM

Share

ಮುಖ್ಯಾಂಶಗಳು

  • ಇನ್ಮುಂದೆ ಒಟಿಟಿ ಚಿತ್ರಗಳಿಗೂ ಅನ್ವಯ ಆಗುತ್ತಾ ಸೆನ್ಸಾರ್ ನಿಯಮ?
  • ‘ಸತ್ಲುಜ್’ ಸಿನಿಮಾ ಬ್ಯಾನ್ ಆದ ನಂತರ ಕೇಂದ್ರ ಸರ್ಕಾರದ ಚಿಂತನೆ.
  • ಒಟಿಟಿಗೂ ಸೆನ್ಸಾರ್ ಇರಬೇಕು ಎಂಬ ವಾದಕ್ಕೆ ಮತ್ತೆ ಸಿಗುತ್ತಿದೆ ಪುಷ್ಟಿ.

ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುವ ಸಿನಿಮಾಗಳಿಗೆ ಸೆನ್ಸಾರ್ ಮಂಡಳಿಯ (CBFC) ಪ್ರಮಾಣಪತ್ರ ಕಡ್ಡಾಯವಾಗಿರುವಂತೆ, ಇನ್ನು ಮುಂದೆ ಒಟಿಟಿ (OTT) ಪ್ಲಾಟ್‌ಫಾರ್ಮ್‌ಗಳಲ್ಲಿ ನೇರವಾಗಿ ಬಿಡುಗಡೆಯಾಗುವ ಚಿತ್ರಗಳಿಗೂ ಸೆನ್ಸಾರ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ ‘ಸತ್ಲುಜ್’ (Satluj) ಸಿನಿಮಾ ವಿವಾದದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ‘ಇಂಡಿಯಾ ಟುಡೇ’ ವರದಿ ಮಾಡಿದೆ.

‘ಸತ್ಲುಜ್’ ಚಿತ್ರದಿಂದ ಶುರುವಾದ ವಿವಾದ:

ಮೂಲಗಳ ಪ್ರಕಾರ, ಮಾನವ ಹಕ್ಕುಗಳ ಹೋರಾಟಗಾರ ಜಸ್ವಂತ್ ಸಿಂಗ್ ಖಾಲ್ರಾ ಅವರ ಜೀವನ ಆಧರಿತ ‘ಸತ್ಲುಜ್’ ಚಿತ್ರವನ್ನು ಯಾವುದೇ ಸೆನ್ಸಾರ್ ಪ್ರಮಾಣಪತ್ರ ಇಲ್ಲದೇ ಒಟಿಟಿಯಲ್ಲಿ ಪ್ರಸಾರ ಮಾಡಲಾಗಿತ್ತು. ಇದು ಕಾನೂನುಬಾಹಿರವಾಗಿದ್ದು, ಈ ಹಿನ್ನೆಲೆಯಲ್ಲಿ 2021ರ ಐಟಿ ನಿಯಮಗಳಿಗೆ (IT Rules, 2021) ಅಗತ್ಯ ತಿದ್ದುಪಡಿ ತರಲು ಸರ್ಕಾರ ಯೋಚಿಸುತ್ತಿದೆ.

ಜೀ5 ವಿರುದ್ಧ ಕ್ರಮದ ಸಾಧ್ಯತೆ:

ಜುಲೈ 3ರಂದು ಪ್ರಸಾರ ಆರಂಭಿಸಿದ್ದ ‘ಸತ್ಲುಜ್’ ಸಿನಿಮಾವನ್ನು ರಾಷ್ಟ್ರೀಯ ಭದ್ರತೆಯ ಕಾರಣ ನೀಡಿ ಕೇವಲ 48 ಗಂಟೆಗಳಲ್ಲೇ ಜೀ5 ಒಟಿಟಿಯಿಂದ ತೆಗೆದುಹಾಕಲಾಗಿತ್ತು. ಸೆನ್ಸಾರ್ ಮಂಡಳಿಯು ಈ ಚಿತ್ರಕ್ಕೆ ಬರೋಬ್ಬರಿ 127 ಕಟ್‌ಗಳನ್ನು ಸೂಚಿಸಿತ್ತಾದರೂ, ಯಾವುದೇ ಕಟ್‌ಗಳಿಲ್ಲದ ಆವೃತ್ತಿಯನ್ನು ಜೀ5 ಪ್ರಸಾರ ಮಾಡಿತ್ತು ಎನ್ನಲಾಗಿದೆ. ಹೀಗಾಗಿ ನಿಯಮ ಉಲ್ಲಂಘಿಸಿ ಸಿನಿಮಾ ಪ್ರಸಾರ ಮಾಡಿದ ಒಟಿಟಿ ಸಂಸ್ಥೆ ‘ಜೀ5’ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಮುಂದಾಗಿದೆ.

ಕ್ರಿಮಿನಲ್ ಮೊಕದ್ದಮೆಗೆ ಸೂಚನೆ:

ಮತ್ತೊಂದೆಡೆ, ಒಟಿಟಿಯಿಂದ ಬ್ಯಾನ್ ಆದ ಬಳಿಕವೂ ಪಂಜಾಬ್‌ನ ವಿವಿಧ ಗುರುದ್ವಾರಗಳು ಮತ್ತು ಖಾಸಗಿ ಸಮುದಾಯ ಕಾರ್ಯಕ್ರಮಗಳಲ್ಲಿ ಈ ಚಿತ್ರವನ್ನು ಅನಧಿಕೃತವಾಗಿ ಪ್ರದರ್ಶಿಸಲಾಗುತ್ತಿದೆ. ಇಂತಹ ಅಕ್ರಮ ಪ್ರದರ್ಶನಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕೇಂದ್ರ ಸರ್ಕಾರವು ಆಯಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಸದ್ಯಕ್ಕೆ ಈ ಒಟಿಟಿ ಸೆನ್ಸಾರ್ ನಿಯಮದ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲವಾದರೂ, ಶೀಘ್ರದಲ್ಲೇ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆಯಿದೆ.

ಇದನ್ನೂ ಓದಿ: ‘ಸತ್ಲುಜ್’ ಸಿನಿಮಾ ವಿವಾದ; ಒಟಿಟಿ ಬ್ಯಾನ್ ಬೆನ್ನಲ್ಲೇ ಐಎಂಡಿಬಿ ರೇಟಿಂಗ್ ಮಾಯ

ಸಾಮಾನ್ಯವಾಗಿ ಭಾರತದಲ್ಲಿ ಸಿನಿಮಾಗಳ ಪ್ರಮಾಣೀಕರಣಕ್ಕೆ ‘ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ’ ಪ್ರಮುಖ ಸಂಸ್ಥೆಯಾಗಿದೆ. ಚಿತ್ರಮಂದಿರಗಳಲ್ಲಿ ಯಾವುದೇ ಸಿನಿಮಾ ಬಿಡುಗಡೆಯಾಗಲು ಈ ಮಂಡಳಿಯ ಅನುಮೋದನೆ ಕಡ್ಡಾಯ. ಆದರೆ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಸದ್ಯಕ್ಕೆ ಸಿಬಿಎಫ್‌ಸಿ ವ್ಯಾಪ್ತಿಯಿಂದ ಹೊರಗಿವೆ. ಇದು ವೆಬ್ ಸರಣಿ ಮತ್ತು ಸಿನಿಮಾ ನಿರ್ಮಾಪಕರಿಗೆ ಯಾವುದೇ ಸೆನ್ಸಾರ್ ತಪಾಸಣೆ ಇಲ್ಲದೇ ತಮ್ಮ ಕಂಟೆಂಟ್​ಗಳನ್ನು ನೇರವಾಗಿ ಬಿಡುಗಡೆ ಮಾಡುವ ಸ್ವಾತಂತ್ರ್ಯ ನೀಡಿದೆ. ಆ ಕಾರಣದಿಂದಲೇ ‘ಸತ್ಲುಜ್’ ಚಿತ್ರವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲಾಗಿತ್ತು. ಆದರೆ ಒಟಿಟಿಯಲ್ಲಿ ಸಿನಿಮಾ ಬಿಡುಗಡೆ ಆದ ಬಳಿಕ ಅದನ್ನು ಡಿಲೀಟ್ ಮಾಡಿಸಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ