AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿ ವೀಕ್ಷಕರಿಗೆ ಗುಡ್​​ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಒಟಿಟಿ (OTT) ಪ್ಲಾಟ್‌ಫಾರ್ಮ್‌ಗಳ ವಿಷಯಕ್ಕೆ ಸೆನ್ಸಾರ್ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಚಿತ್ರಮಂದಿರಗಳಲ್ಲಿ ಪ್ರಸಾರ ಆಗುವ ಸಿನಿಮಾಗಳ ಕೆಲ ದೃಶ್ಯಗಳಿಗೆ ಸೆನ್ಸಾರ್ ಮಂಡಳಿ ಕತ್ತರಿ ಹಾಕುತ್ತದೆ. ಆದರೆ, ಒಟಿಟಿಯಲ್ಲಿ ಆ ರೀತಿ ಆಗೋದಿಲ್ಲ. ಇದು ಒಟಿಟಿ ವೀಕ್ಷಕರಿಗೆ ಸಂತಸ ತಂದಿದೆ. ಮಾಹಿತಿ ತಂತ್ರಜ್ಞಾನ ನಿಯಮಗಳು 2021ರ ಅಡಿಯಲ್ಲಿ ವಯಸ್ಸಿನ ಆಧಾರದ ಮೇಲೆ ವಿಷಯವನ್ನು ವರ್ಗೀಕರಿಸಬೇಕಿದೆ ಎಂದು ಕೇಂದ್ರ ಅಭಿಪ್ರಾಯಪಟ್ಟಿದೆ.

ಒಟಿಟಿ ವೀಕ್ಷಕರಿಗೆ ಗುಡ್​​ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ
ಒಟಿಟಿ
ರಾಜೇಶ್ ದುಗ್ಗುಮನೆ
|

Updated on: Dec 18, 2025 | 7:28 AM

Share

ಚಿತ್ರಮಂದಿರಗಳಲ್ಲಿ ರಿಲೀಸ್ ಆಗುವ ಸಿನಿಮಾಗಳಿಗೆ ಯಾವ ರೀತಿಯಲ್ಲಿ ಸೆನ್ಸಾರ್ ಮಾಡಲಾಗುತ್ತದೆಯೋ ಅದೇ ರೀತಿ ಒಟಿಟಿಯಲ್ಲಿ ಪ್ರಸಾರವಾಗುವ ಸಿನಿಮಾ ಹಾಗೂ ವೆಬ್ ಸರಣಿಗಳಿಗೆ ಸೆನ್ಸಾರ್ ಆಗಬೇಕು ಎಂದು ಒಂದು ವರ್ಗದ ಜನರು ಧ್ವನಿ ಎತ್ತಿದ್ದಾರೆ. ಆದರೆ, ಇದು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ನೆಟ್​ಫ್ಲಿಕ್ಸ್​, ಅಮೇಜಾನ್ ಪ್ರೈಮ್ ವಿಡಿಯೋ, ಹಾಟ್​ಸ್ಟಾರ್ ಸೇರಿದಂತೆ ಇತರ ಒಟಿಟಿ ಪ್ಲಾಟ್​​ಫಾರ್ಮ್​ನಲ್ಲಿರುವ ಕಂಟೆಂಟ್​ಗಳಿಗೆ ಸೆನ್ಸಾರ್ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಮಕ್ಕಳು ತಮ್ಮ ಬಳಿ ಮೊಬೈಲ್ ಇಲ್ಲದಿದ್ದರೂ ಒಟಿಟಿ ಪ್ಲಾಟ್​ಫಾರ್ಮ್​ಗಳನ್ನು ಸುಲಭದಲ್ಲಿ ವೀಕ್ಷಿಸಬಹುದಾಗಿದೆ. ತಂದೆ-ತಾಯಿ ಮೊಬೈಲ್ ಪಡೆದೋ ಅಥವಾ ಟಿವಿಯಲ್ಲಿ ಒಟಿಟಿ ಸಿನಿಮಾ ವೀಕ್ಷಿಸಬಹುದು. ಇಂಥ ಸಂದರ್ಭದಲ್ಲಿ ಸೆನ್ಸಾರ್ ರಹಿತ ಸಿನಿಮಾಗಳು, ವೆಬ್​ ಸೀರಿಸ್​ಗಳನ್ನು ಅವರು ವೀಕ್ಷಿಸಿದರೆ ಅವರ ಮೇಲೆ ಅದು ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ಹೀಗಾಗಿ, ಸೆನ್ಸಾರ್ ಆಗಬೇಕು ಎಂದು ಅನೇಕರು ಆಗ್ರಹಿಸಿದ್ದರು. ಇದಕ್ಕೆ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಉತ್ತರಿಸಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಸಹಾಯಕ ಸಚಿವ ಎಲ್​. ಮುರುಗನ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘2021ರ ಮಾಹಿತಿ ತಂತ್ರಜ್ಞಾನ ನಿಯಮಗಳ ಅಡಿಯಲ್ಲಿ ಒಟಿಟಿ ಪ್ಲಾಟ್​​ಫಾರ್​ಮ್​ಗಳನ್ನು ನಿಯಂತ್ರಿಸಲಾಗುತ್ತಿದೆ. ವಯಸ್ಸನ್ನು ಆಧರಿಸಿ ಒಟಿಟಿ ಪ್ಲಾಟ್​​ಫಾರ್ಮ್​ಗಗಳು ವಿಷಯಗಳನ್ನು ವರ್ಗೀಕರಿಸುತ್ತಿವೆ’ ಎಂದು ಮಾಹಿತಿ ನೀಡಿದರು. ಈಗಾಗಲೇ ಕೇಂದ್ರ ಸರ್ಕಾರವು ಅಶ್ಲೀಲ ವಿಷಯಗಳನ್ನು ಹರಡುತ್ತಿದ್ದ 43 ಒಟಿಟಿ ಪ್ಲಾಟ್​​ಫಾರ್ಮ್​ಗಳನ್ನು ನಿಷೇಧಿಸಿದ ಬಗ್ಗೆಯೂ ಮಾಹಿತಿ ನೀಡಿದೆ.

ಒಟಿಟಿ ಸಿನಿಮಾ-ಸೀರಿಸ್​ಗಳಿಗೆ ಸೆನ್ಸಾರ್ ಪ್ರಕ್ರಿಯೆ ಶುರುವಾದರೆ ಎಲ್ಲಾ ಸಿನಿಮಾ ಹಾಗೂ ಸೀರಿಸ್​​ಗಳನ್ನು ನೋಡುವ ಅವಕಾಶ ವೀಕ್ಷಕರಿಗೆ ಸಿಗುತ್ತಿರಲಿಲ್ಲ. ಕೆಲವು ಶಬ್ದಗಳಿಗೆ, ದೃಶ್ಯಗಳಿಗೆ ಸೆನ್ಸಾರ್ ಮಂಡಳಿ ಕತ್ತರಿ ಹಾಕುವಂತೆ ಸೂಚಿಸೋ ಸಾಧ್ಯತೆ ಇತ್ತು. ಆದರೆ, ಕೇಂದ್ರದ ನಿರ್ಧಾರ ಒಟಿಟಿ ಪ್ರಿಯರಿಗೆ ಖುಷಿ ನೀಡಿದೆ.

ಇದನ್ನೂ ಓದಿ: ಈ ವಾರ ಒಟಿಟಿಗೆ ಬರುತ್ತಿವೆ ಭರ್ಜರಿ ಸಿನಿಮಾಗಳು: ಪಟ್ಟಿ ಇಲ್ಲಿದೆ

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲತೆ ನಿಯಂತ್ರಿಸಲು ಪ್ರಮುಖ ನಿರ್ಧಾರಕ್ಕೆ ಬರಲಾಗಿದೆ. ಇದಕ್ಕಾಗಿ ಕೇಂದ್ರವು ಮಾನದಂಡ ಪಟ್ಟಿ ಮಾಡಿದೆ. 50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಸಾಮಾಜಿಕ ಜಾಲತಾಣ ಸಂಸ್ಥೆಗಳು ಸ್ಥಳೀಯ ಅಧಿಕಾರಿಗಳನ್ನು ನೇಮಿಸಬೇಕಿದೆ. ಅವರು ದೂರು ಬಂದ 72 ಗಂಟೆಗಳ ಒಳಗೆ ಕಾನೂನುಬಾಹಿರ ವಿಷಯವನ್ನು ತೆಗೆದುಹಾಕುವ ಮೂಲಕ ಸಮಸ್ಯೆಗೆ ಪರಿಹಾರ ನೀಡುವ ಅಗತ್ಯವಿದೆ ಎಂದು ಕೇಂದ್ರ ತಿಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು