Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajpal Yadav: ಕೆಟ್ಟ ಭಾಷೆ, ಅಶ್ಲೀಲ ದೃಶ್ಯದ ಸಹವಾಸ ಬೇಡ ಎಂದು 5 ವರ್ಷ ಒಟಿಟಿಯಿಂದ ದೂರ ಉಳಿದಿದ್ದ ಖ್ಯಾತ ನಟ

‘ನನ್ನ ನಟನೆಯನ್ನು ಪ್ರೇಕ್ಷಕರು ಕುಟುಂಬ ಸಮೇತ ನೋಡುವಂತೆ ಇರಬೇಕು’ ಎಂದು ರಾಜ್​ಪಾಲ್​ ಯಾದವ್​ ಹೇಳಿದ್ದಾರೆ. ಒಟಿಟಿ ಬಗ್ಗೆ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Rajpal Yadav: ಕೆಟ್ಟ ಭಾಷೆ, ಅಶ್ಲೀಲ ದೃಶ್ಯದ ಸಹವಾಸ ಬೇಡ ಎಂದು 5 ವರ್ಷ ಒಟಿಟಿಯಿಂದ ದೂರ ಉಳಿದಿದ್ದ ಖ್ಯಾತ ನಟ
ರಾಜ್​ಪಾಲ್​ ಯಾದವ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 24, 2022 | 9:25 AM

ಮನರಂಜನಾ ಕ್ಷೇತ್ರದಲ್ಲಿ ಒಟಿಟಿ ಪ್ಲಾಟ್​ಫಾರ್ಮ್​ಗಳು (OTT Platform) ಪ್ರಬಲವಾಗಿವೆ. ದಿನೇದಿನೇ ಒಟಿಟಿ ಸಂಸ್ಥೆಗಳ ವ್ಯಾಪ್ತಿ ಹೆಚ್ಚುತ್ತಿದೆ. ಅನೇಕ ಸೆಲೆಬ್ರಿಟಿಗಳು ಒಟಿಟಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಭರಪೂರ ಹಣ ಗಳಿಸುತ್ತಿದ್ದಾರೆ. ಮನೆಯಲ್ಲೇ ಕುಳಿತು ಸಿನಿಮಾ ವೀಕ್ಷಿಸುವ ಟ್ರೆಂಡ್​ಗೆ ಪ್ರೇಕ್ಷಕರು ಕೂಡ ಒಗ್ಗಿಕೊಂಡಿದ್ದಾರೆ. ಆದರೆ ಒಟಿಟಿಗಳ (OTT) ಬಗ್ಗೆ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಅಭಿಪ್ರಾಯ ಇದೆ. ಇದರಲ್ಲಿ ಪ್ರಸಾರ ಆಗುವ ಕಾರ್ಯಕ್ರಮಗಳಲ್ಲಿ ಅಶ್ಲೀಲ ದೃಶ್ಯಗಳು, ಅವಾಚ್ಯ ಶಬ್ದಗಳು ಇರುತ್ತವೆ ಎಂಬ ಆರೋಪ ಇದೆ. ಬಾಲಿವುಡ್​ನ ಖ್ಯಾತ ಹಾಸ್ಯ ನಟ ರಾಜ್​ಪಾಲ್​ ಯಾದವ್ (Rajpal Yadav)​ ಅವರು ಕೂಡ ಅದೇ ರೀತಿಯ ಮನೋಭಾವ ಹೊಂದಿದ್ದರು. ಹಾಗಾಗಿ ಅವರು ಒಟಿಟಿಯಲ್ಲಿ ನಟಿಸಲು ಹಿಂದೇಟು ಹಾಕಿದ್ದರು. ಆ ಕುರಿತು ಅವರೀಗ ಬಾಯಿ ಬಿಟ್ಟಿದ್ದಾರೆ.

ರಾಜ್​ಪಾಲ್​ ಯಾದವ್​ ಅವರು ಹಲವಾರು ವರ್ಷಗಳಿಂದ ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ಅನೇಕ ಕಾಮಿಡಿ ಸಿನಿಮಾಗಳ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಆ ಮೂಲಕ ದೊಡ್ಡ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ. ರಾಜ್​ಪಾಲ್​ ಯಾವದ್​ ನಟಿಸಿದ ‘ಭೂಲ್​ ಭುಲಯ್ಯ 2’ ಚಿತ್ರ 175 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಸಿ ಬೀಗುತ್ತಿದೆ. ಇಷ್ಟೆಲ್ಲ ಜನಪ್ರಿಯತೆ ಇದ್ದರೂ ಕೂಡ ಅವರು ಒಟಿಟಿಯಿಂದ ಅಂತರ ಕಾಯ್ದುಕೊಂಡಿದ್ದರು. ಅದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

‘ಅವಾಚ್ಯ ಶಬ್ದಗಳು ಹಾಗೂ ಅಶ್ಲೀಲ ದೃಶ್ಯಗಳಿರುವ ಸಿನಿಮಾ ಅಥವಾ ವೆಬ್​ ಸಿರೀಸ್​ನಲ್ಲಿ ನಟಿಸಲು ನಾನು ಸಿದ್ಧನಿಲ್ಲ. ಆ ಕಾರಣದಿಂದಲೇ 5 ವರ್ಷಗಳಿಂದ ಒಟಿಟಿಯಲ್ಲಿ ನಟಿಸಿಲ್ಲ. ನನ್ನ ನಟನೆಯನ್ನು ಪ್ರೇಕ್ಷಕರು ಕುಟುಂಬ ಸಮೇತ ನೋಡುವಂತೆ ಇರಬೇಕು. ಹಾಗಂತ ನಾನು ಬೇರೆ ಶೋ, ಸಿರೀಸ್​ ಮತ್ತು ಸಿನಿಮಾಗಳ ವಿರೋಧಿ ಅಲ್ಲ. ಅದಕ್ಕೂ ಬೇರೆಯದೇ ಪ್ರೇಕ್ಷಕರು ಇದ್ದಾರೆ’ ಎಂದು ರಾಜ್​ಪಾಲ್​ ಯಾದವ್​ ಹೇಳಿದ್ದಾರೆ. ಅವರು ಈಗ ಒಟಿಟಿಗೆ ಕಾಲಿಟ್ಟಿದ್ದಾರೆ. ಹಲವು ವೆಬ್​ ಸಿರೀಸ್​ಗಳಲ್ಲಿ ನಟಿಸುತ್ತಿದ್ದಾರೆ. ಫ್ಯಾಮಿಲಿ ಪ್ರೇಕ್ಷಕರು ಒಟ್ಟಾಗಿ ಕುಳಿತು ನೋಡುವಂತಹ ಕಥೆಗಳನ್ನು ಮಾತ್ರ ಅವರು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಒಟಿಟಿಯಲ್ಲಿ ಅವರ ನಟನೆಯನ್ನು ನೋಡಿ ಎಂಜಾಯ್​ ಮಾಡಲು ಪ್ರೇಕ್ಷಕರು ಕಾದಿದ್ದಾರೆ.

ಇದನ್ನೂ ಓದಿ
Image
Bhool Bhulaiyaa 2: ಒಟಿಟಿಗೆ ಬರ್ತಿದೆ ‘ಭೂಲ್​ ಭುಲಯ್ಯ 2’; ಕಾರ್ತಿಕ್​ ಆರ್ಯನ್​ ಫ್ಯಾನ್ಸ್​ಗೆ ಸಿಹಿ ಸುದ್ದಿ​ ನೀಡಿದ ನೆಟ್​ಫ್ಲಿಕ್ಸ್​
Image
ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ 200 ಕೋಟಿ ರೂಪಾಯಿ ಲಾಭ ಮಾಡಿದ ‘ವಿಕ್ರಮ್​’ ಸಿನಿಮಾ
Image
‘ನಾನು ಹಿಂದಿ ಹೀರೋ’ ಎಂದು ಗರ್ವ ತೋರಿಸಿ ಸೋತ ಜಾನ್​ ಅಬ್ರಾಹಂ ಸಿನಿಮಾಗೆ ಈಗ ಒಟಿಟಿ ಮಾತ್ರ ಗತಿ
Image
ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?

ಇದನ್ನೂ ಓದಿ: ನಿರ್ಮಾಪಕರ​ ಹೊಟ್ಟೆ ಮೇಲೆ ಹೊಡೆದ ಕಂಗನಾ; ಒಟಿಟಿಯಲ್ಲೂ ‘ಧಾಕಡ್​’ ಚಿತ್ರಕ್ಕೆ ಬೇಡಿಕೆ ಇಲ್ಲ

‘299 ಅಥವಾ 499 ರೂಪಾಯಿಗೆ ನಾನು ಸಿಗಲ್ಲ’; ಮತ್ತೆ ಗರ್ವದ ಮಾತನಾಡಿದ ಜಾನ್​ ಅಬ್ರಾಹಂ

Published On - 9:25 am, Fri, 24 June 22

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​