ಒಂದಲ್ಲ, ಎರಡು ಒಟಿಟಿಗಳಲ್ಲಿ ಬಿಡುಗಡೆ ಆಗಲಿದೆ ‘ಧುರಂಧರ್ 2’?

Dhurandhar 2 movie: ಭಾರತದಲ್ಲಿ ಮಾತ್ರವೇ ಅಲ್ಲದೆ ವಿದೇಶದಲ್ಲೂ ಸಹ ‘ಧುರಂಧರ್ 2’ ಹವಾ ಎಬ್ಬಿಸಿದ್ದು, ಹಲವು ದೇಶಗಳಲ್ಲಿ, ಈವರೆಗೆ ಅತಿ ಹೆಚ್ಚು ಗಳಿಕೆ ಮಾಡಿರುವ ಭಾರತದ ಸಿನಿಮಾ ಎನಿಸಿಕೊಂಡಿದೆ. ಇದೀಗ ಸಿನಿಮಾ ಬಿಡುಗಡೆ ಒಂದೂವರೆ ತಿಂಗಳಾಗುತ್ತಾ ಬಂದಿದ್ದು, ಸಿನಿಮಾದ ಒಟಿಟಿ ಬಿಡುಗಡೆ ಬಗ್ಗೆ ಚರ್ಚೆ ಚಾಲ್ತಿಯಲ್ಲಿದೆ. ಇದೀಗ ಹರಿದಾಡುತ್ತಿರುವ ಸುದ್ದಿಯಂತೆ ‘ಧುರಂಧರ್ 2’ ಒಂದಲ್ಲ ಬದಲಿಗೆ ಎರಡು ಒಟಿಟಿಗಳಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ.

ಒಂದಲ್ಲ, ಎರಡು ಒಟಿಟಿಗಳಲ್ಲಿ ಬಿಡುಗಡೆ ಆಗಲಿದೆ ‘ಧುರಂಧರ್ 2’?
ಧುರಂಧರ್ 2

Updated on: Apr 23, 2026 | 7:29 PM

ರಣ್ವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಭಾರತದ ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ವರ್ಷಗಳಿಂದಲೂ ಗಳಿಕೆಯ ಪಟ್ಟಿಯಲ್ಲಿ ಟಾಪ್ ಸ್ಥಾನದಲ್ಲಿ ಕುಳಿತಿದ್ದ ಸಿನಿಮಾಗಳನ್ನು ಒಂದೊಂದಾಗಿ ಹಿಂದಿಕ್ಕುತ್ತಿದೆ. ಭಾರತದಲ್ಲಿ ಮಾತ್ರವೇ ಅಲ್ಲದೆ ವಿದೇಶದಲ್ಲೂ ಸಹ ‘ಧುರಂಧರ್ 2’ ಹವಾ ಎಬ್ಬಿಸಿದ್ದು, ಹಲವು ದೇಶಗಳಲ್ಲಿ, ಈವರೆಗೆ ಅತಿ ಹೆಚ್ಚು ಗಳಿಕೆ ಮಾಡಿರುವ ಭಾರತದ ಸಿನಿಮಾ ಎನಿಸಿಕೊಂಡಿದೆ. ಇದೀಗ ಸಿನಿಮಾ ಬಿಡುಗಡೆ ಒಂದೂವರೆ ತಿಂಗಳಾಗುತ್ತಾ ಬಂದಿದ್ದು, ಸಿನಿಮಾದ ಒಟಿಟಿ ಬಿಡುಗಡೆ ಬಗ್ಗೆ ಚರ್ಚೆ ಚಾಲ್ತಿಯಲ್ಲಿದೆ. ಇದೀಗ ಹರಿದಾಡುತ್ತಿರುವ ಸುದ್ದಿಯಂತೆ ‘ಧುರಂಧರ್ 2’ ಒಂದಲ್ಲ ಬದಲಿಗೆ ಎರಡು ಒಟಿಟಿಗಳಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ.

ಅಂದಹಾಗೆ ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿತ್ತು. ಚಿತ್ರಮಂದಿರದಲ್ಲಿ ಬ್ಲಾಕ್ ಬಸ್ಟರ್ ಆಗಿದ್ದ ಈ ಸಿನಿಮಾ ಒಟಿಟಿಯಲ್ಲೂ ಕಮಾಲ್ ಮಾಡಿತ್ತು. ಆದರೆ ‘ಧುರಂಧರ್ 2’ ಸಿನಿಮಾ ಜಿಯೋ ಹಾಟ್​​ಸ್ಟಾರ್​​ನಲ್ಲಿ ಸ್ಟ್ರೀಮಿಂಗ್ ಆಗಲಿದೆ ಎಂಬ ಸುದ್ದಿ ಕಳೆದ ಕೆಲ ವಾರಗಳಿಂದಲೂ ಹರಿದಾಡುತ್ತಿದೆ. ‘ಧುರಂಧರ್ 2’ ನಿರ್ಮಾಣ ಮತ್ತು ವಿತರಣೆ ಸಂಸ್ಥೆ ಸಹ ಆಗಿದ್ದು, ಇದೀಗ ಸಿನಿಮಾವನ್ನು ತಮ್ಮ ಒಟಿಟಿಯಲ್ಲೇ ಬಿಡುಗಡೆ ಮಾಡಲು ಒಪ್ಪಂದ ಮಾಡಿಕೊಂಡಿದೆ.

ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಯ ಪ್ರಕಾರ, ‘ಧುರಂಧರ್ 2’ ಸಿನಿಮಾ ಜಿಯೋ ಹಾಟ್​​ಸ್ಟಾರ್ ಜೊತೆಗೆ ನೆಟ್​​ಫ್ಲಿಕ್ಸ್​ನಲ್ಲಿಯೂ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ‘ಧುರಂಧರ್ 2’ ಸಿನಿಮಾ ಜಿಯೋ ಹಾಟ್​​ಸ್ಟಾರ್ ಜೊತೆಗೆ 150 ಕೋಟಿ ರೂಪಾಯಿ ಒಪ್ಪಂದ ಮಾಡಿಕೊಂಡಿದೆ. ಅಂತರಾಷ್ಟ್ರೀಯ ಪ್ರೇಕ್ಷಕರನ್ನು ರೀಚ್ ಆಗುವ ಕಾರಣಕ್ಕೆ ನೆಟ್​​ಫ್ಲಿಕ್ಸ್​ನಲ್ಲಿಯೂ ಸಿನಿಮಾ ಬಿಡುಗಡೆ ಮಾಡಲು ಮುಂದಾಗಿದ್ದು, ನೆಟ್​​ಫ್ಲಿಕ್ಸ್​ ಜೊತೆಗೂ ದೊಡ್ಡ ಮೊತ್ತಕ್ಕೆ ಒಪ್ಪಂದ ಮಾಡಿಕೊಳ್ಳಲು ನಿರ್ಮಾಪಕರು ಮುಂದಾಗಿದ್ದಾರೆ.

ಇದನ್ನೂ ಓದಿ:ಹೊಟ್ಟೆಗೆ ಕ್ಲಿಪ್ ಹಾಕಿಕೊಂಡು ನಟನೆ: ರಣ್ವೀರ್ ಸಿಂಗ್ ಡೆಡಿಕೇಷನ್ ಎಂಥಹದ್ದು ಗೊತ್ತೆ?

ಸಿನಿಮಾ ಒಂದು ಎರಡು ಒಟಿಟಿಗಳಲ್ಲಿ ಬಿಡುಗಡೆ ಆಗುತ್ತಿರುವುದು ಇದು ಮೊದಲೇನಲ್ಲ. ಈ ಹಿಂದೆ ‘ಆರ್​​ಆರ್​​ಆರ್’ ಸಿನಿಮಾ ಎರಡು ಒಟಿಟಿಗಳಲ್ಲಿ ಬಿಡುಗಡೆ ಆಗಿತ್ತು. ಎರಡೂ ಕಡೆ ದೊಡ್ಡ ಯಶಸ್ಸನ್ನು ಗಳಿಸಿತು. ಭಾರತದ ಇನ್ನೂ ಕೆಲವು ಸಿನಿಮಾಗಳು ಎರಡು ಒಟಿಟಿಗಳಲ್ಲಿ ಬಿಡುಗಡೆ ಆಗಿರುವುದುಂಟು. ಇದೀಗ ‘ಧುರಂಧರ್ 2’ ಸಿನಿಮಾ ಸಹ ಅದೇ ಹಾದಿ ಹಿಡಿದಂತಿದೆ.

‘ಧುರಂಧರ್ 2’ ಭಾರತದ ಸೈನಿಕನೋರ್ವ ಪಾಕಿಸ್ತಾನಕ್ಕೆ ತೆರಳಿ ಭಯೋತ್ಪಾದಕರನ್ನು ಮಟ್ಟ ಹಾಕುವ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ರಣ್ವೀರ್ ಸಿಂಗ್ ಜೊತೆಗೆ ಅಕ್ಷಯ್ ಖನ್ನಾ, ಅರ್ಜುನ್ ರಾಂಪಾಲ್, ಸಂಜಯ್ ದತ್, ಆರ್ ಮಾಧವನ್ ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಆದಿತ್ಯ ಧರ್, ಸಿನಿಮಾದ ಸಹ ನಿರ್ಮಾಣವನ್ನೂ ಅವರು ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us