AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೃಶ್ಯಂ 3’ ಒಟಿಟಿ ರಿಲೀಸ್‌ಗೆ ಬಿಗ್ ಶಾಕ್; ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ

ಮೋಹನ್‌ಲಾಲ್ ನಟನೆಯ 'ದೃಶ್ಯಂ 3' ತೆಲುಗು ಆವೃತ್ತಿಯ OTT ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರಿಮೇಕ್ ಹಕ್ಕುಗಳ ವಿವಾದದ ಹಿನ್ನೆಲೆಯಲ್ಲಿ ಹಿರಿಯ ನಿರ್ದೇಶಕಿ ಶ್ರೀಪ್ರಿಯಾ ಅವರ ಸಂಸ್ಥೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಜೂನ್ 18 ರಂದು ನಿಗದಿಯಾಗಿದ್ದ ಸ್ಟ್ರೀಮಿಂಗ್‌ಗೆ ಅಂತರ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ. ಇತರ ಭಾಷೆಗಳಲ್ಲಿ ಚಿತ್ರದ ಪ್ರಸಾರಕ್ಕೆ ಯಾವುದೇ ಅಡ್ಡಿ ಇಲ್ಲ.

'ದೃಶ್ಯಂ 3' ಒಟಿಟಿ ರಿಲೀಸ್‌ಗೆ ಬಿಗ್ ಶಾಕ್; ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ
ದೃಶ್ಯಂ 3 Image Credit source: Drishyam 3 Movie
ರಾಜೇಶ್ ದುಗ್ಗುಮನೆ
|

Updated on: Jun 18, 2026 | 6:51 AM

Share

ಮೋಹನ್‌ಲಾಲ್ ನಟನೆಯ ಬಹುನಿರೀಕ್ಷಿತ ಕ್ರೈಮ್ ಥ್ರಿಲ್ಲರ್ ಸಿನಿಮಾ ‘ದೃಶ್ಯಂ 3’ (Drishaym 3) ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಹೀಗಿರುವಾಗಲೇ ಒಟಿಟಿ ಪ್ರಿಯರಿಗೆ ತೀವ್ರ ನಿರಾಶೆಯುಂಟುಮಾಡುವ ಸುದ್ದಿಯೊಂದು ಹೊರಬಿದ್ದಿದೆ. ಚಿತ್ರದ ತೆಲುಗು ವರ್ಷನ್‌ ಒಟಿಟಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಉಳಿದ ಭಾಷೆಯಲ್ಲಿ ಸಿನಿಮಾ ಪ್ರಸಾರ ಕಾಣಲು ಯಾವುದೇ ತೊಂದರೆ ಇಲ್ಲ. ಹೀಗಾಗಿ, ತೆಲುಗು ಮಂದಿಗೆ ಕೊಂಚ ಬೇಸರ ಆಗಿದೆ.

‘ದೃಶ್ಯಂ’ ಮೊದಲ ಭಾಗವನ್ನು ತೆಲುಗಿನಲ್ಲಿ ರಿಮೇಕ್ ಮಾಡಿದ್ದ ಹಿರಿಯ ನಿರ್ದೇಶಕಿ ಶ್ರೀಪ್ರಿಯಾ ಹಾಗೂ ಅವರ ಒಡೆತನದ ‘ರಾಜ್‌ಕುಮಾರ್ ಥಿಯೇಟರ್ಸ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆ ಕೋರ್ಟ್ ಮೆಟ್ಟಿಲೇರಿದೆ. ಈ ಫ್ರಾಂಚೈಸಿಯ ತೆಲುಗು ರಿಮೇಕ್ ಮತ್ತು ಹಕ್ಕುಗಳು ಕಾನೂನಾತ್ಮಕವಾಗಿ ತಮಗೆ ಸೇರಿದ್ದಾಗಿದೆ ಎಂದು ಅವರು ವಾದಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಒಟಿಟಿಯಲ್ಲಿ ತೆಲುಗು ವರ್ಷನ್ ಪ್ರಸಾರವನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಕೋರಿ ಶ್ರೀಪ್ರಿಯಾ ಹಾಗೂ ರಾಜ್‌ಕುಮಾರ್ ಸೇತುಪತಿ ಜಂಟಿಯಾಗಿ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಜೂನ್ 18 ರಂದು ‘ದೃಶ್ಯಂ 3’ ಚಿತ್ರವು ಅಮೆಜಾನ್ ಪ್ರೈಮ್ ಒಟಿಟಿ ವೇದಿಕೆಯಲ್ಲಿ ಭರ್ಜರಿಯಾಗಿ ಸ್ಟ್ರೀಮಿಂಗ್ ಆಗಲು ಸಜ್ಜಾಗಿತ್ತು. ಆದರೆ, ಒಟಿಟಿ ರಿಲೀಸ್ ಆಗುವ ಸಮಯದಲ್ಲೇ ಚಿತ್ರತಂಡಕ್ಕೆ ಈ ತೊಂದರೆ ಎದುರಾಗಿದೆ.

ಅರ್ಜಿಯ ತುರ್ತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಕುಮರೇಶ್ ಬಾಬು ಅವರಿದ್ದ ಪೀಠವು ಈ ಮಹತ್ವದ ಆದೇಶ ನೀಡಿದೆ. ಪ್ರತಿವಾದಿಗಳಿಗೆ ಮುಂಚಿತವಾಗಿಯೇ ಖಾಸಗಿ ನೋಟಿಸ್ ಕಳುಹಿಸಿದ್ದರೂ ಸಹ, ಚಿತ್ರದ ತಯಾರಕರು ಅಥವಾ ಅವರ ಪ್ರತಿನಿಧಿಗಳು ಯಾರೂ ನ್ಯಾಯಾಲಯಕ್ಕೆ ಹಾಜರಾಗದ ಕಾರಣ, ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ದೃಶ್ಯಂ 3: ಮೋಹನ್​ಲಾಲ್ ಕಾರ್ ನಂಬರ್​ನಿಂದ ರೈತನಿಗೆ ಮಾನಸಿಕ ಕಿರಿಕಿರಿ; ದಾಖಲಾಯ್ತು ದೂರು

ಚಿತ್ರವು ಜೂನ್ 18 ರಂದೇ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿರುವುದನ್ನು ಗಮನಿಸಿದ ಕೋರ್ಟ್, ತಕ್ಷಣವೇ ಜಾರಿಗೆ ಬರುವಂತೆ ತೆಲುಗು ವರ್ಷನ್ ಒಟಿಟಿ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ. ಹೀಗಾಗಿ, ತೆಲುಗು ಪ್ರೇಕ್ಷಕರು ಈ ಥ್ರಿಲ್ಲರ್ ಸಿನೆಮಾವನ್ನು ವೀಕ್ಷಿಸಲು ಇನ್ನು ಕೆಲವು ದಿನ ಕಾಯುವುದು ಅನಿವಾರ್ಯವಾಗಿದೆ. ಕನ್ನಡದಲ್ಲಿ ಸಿನಿಮಾ ಪ್ರಸಾರ ಕಾಣಲು ಯಾವುದೇ ಅಡ್ಡಿಯಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ