Dhoomam: ಫಹಾದ್ ಫಾಸಿಲ್ ನಟನೆಯ ‘ಧೂಮಂ’ ಸಿನಿಮಾ ಶೀಘ್ರವೇ ಒಟಿಟಿಗೆ? ಇಲ್ಲಿದೆ ವಿವರ

Dhoomam On OTT: ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕ ಬಳಿಕ ಸ್ವತಃ ಪವನ್ ಕುಮಾರ್ ಅವರು ಈ ಬಗ್ಗೆ ವಿಡಿಯೋ ಮಾಡಿ ಸಿನಿಮಾ ನೋಡುವಂತೆ ಕೋರಿದ್ದರು. ಈಗ ಸಿನಿಮಾದ ಒಟಿಟಿ ದಿನಾಂಕದ ಬಗ್ಗೆ ಚರ್ಚೆ ಶುರುವಾಗಿದೆ.

Dhoomam: ಫಹಾದ್ ಫಾಸಿಲ್ ನಟನೆಯ ‘ಧೂಮಂ’ ಸಿನಿಮಾ ಶೀಘ್ರವೇ ಒಟಿಟಿಗೆ? ಇಲ್ಲಿದೆ ವಿವರ
ಧೂಮಂ ಸಿನಿಮಾ ಪೋಸ್ಟರ್
Follow us
ರಾಜೇಶ್ ದುಗ್ಗುಮನೆ
|

Updated on:Jul 03, 2023 | 2:06 PM

ಇದು ಒಟಿಟಿ ಯುಗ. ಜನರು ಥಿಯೇಟರ್​​ಗಿಂತ ಹೆಚ್ಚು ಮನೆಯಲ್ಲೇ ಕುಳಿತು ಒಟಿಟಿಯಲ್ಲಿ ಸಿನಿಮಾ ನೋಡಲು ಇಷ್ಟಪಡುತ್ತಾರೆ. ಈ ಕಾರಣಕ್ಕೆ ಥಿಯೇಟರ್​ನಲ್ಲಿ ಸಿನಿಮಾ ಗೆಲ್ಲಬೇಕು ಎಂದರೆ ಅದೊಂದು ದೊಡ್ಡ ಚಾಲೆಂಜ್. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ‘ಧೂಮಂ’ ಸಿನಿಮಾ (Dhoomam) ಇತ್ತೀಚೆಗೆ ರಿಲೀಸ್ ಆಯಿತು. ಮೂಲ ಮಲಯಾಳಂ ಭಾಷೆಯ ಚಿತ್ರ ಇದಾಗಿದ್ದು, ಕನ್ನಡದಲ್ಲೂ ರಿಲೀಸ್ ಆಗಿದೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ವಿಫಲ ಆಯಿತು. ಈಗ ಈ ಸಿನಿಮಾ ಒಟಿಟಿ (OTT) ಮೂಲಕ ರಿಲೀಸ್ ಆಗಲು ರೆಡಿ ಆಗಿದೆ ಎಂಬ ಸುದ್ದಿ ಜೋರಾಗಿದೆ. ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

‘ಧೂಮಂ’ ಚಿತ್ರದಲ್ಲಿ ಫಹಾದ್ ಫಾಸಿಲ್, ಅಪರ್ಣಾ ಬಾಲಮುರಳಿ ಅವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಜೂನ್ 23ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈ ಚಿತ್ರ ಕಮಾಲ್ ಮಾಡಲು ವಿಫಲವಾಗಿದೆ. ಒಂದು ವರ್ಗದ ಜನರಿಗೆ ಸಿನಿಮಾ ಇಷ್ಟವಾಗಿಲ್ಲ. ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕ ಬಳಿಕ ಸ್ವತಃ ಪವನ್ ಕುಮಾರ್ ಅವರು ಈ ಬಗ್ಗೆ ವಿಡಿಯೋ ಮಾಡಿ ಸಿನಿಮಾ ನೋಡುವಂತೆ ಕೋರಿದ್ದರು. ಈ ಎಲ್ಲಾ ಬೆಳವಣಿಗೆಗಳ ಬಳಿಕ ಸಿನಿಮಾದ ಒಟಿಟಿ ರಿಲೀಸ್ ದಿನಾಂಕದ ಕುರಿತು ಕೆಲ ಮಾಧ್ಯಮಗಳು ಸುದ್ದಿ ಪ್ರಕಟಿಸಿವೆ.

ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಜುಲೈ 21ರಂದು ಸಿನಿಮಾ ಪ್ರಸಾರ ಕಾಣಲಿದೆ ಎಂದು ವರದಿ ಆಗಿದೆ. ಈ ಮೂಲಕ ಸಿನಿಮಾ ರಿಲೀಸ್ ಆಗಿ 30 ದಿನಗಳ ಒಳಗೇ ಒಟಿಟಿ ಹಾದಿ ಹಿಡಿದಿದೆ. ಈ ಬಗ್ಗೆ ಚಿತ್ರತಂಡದವರಾಗಲಿ ಅಮೇಜಾನ್​ ಪ್ರೈಮ್ ವಿಡಿಯೋ ಕಡೆಯಿಂದಾಗಲೀ ಅಧಿಕೃತ ಘೋಷಣೆ ಆಗಿಲ್ಲ.

ಇದನ್ನೂ ಓದಿ: ಧೂಮಂಗೆ ನೆಗೆಟಿವ್ ವಿಮರ್ಶೆ, ವಿಡಿಯೋ ಮೂಲಕ ಮನವಿ ಮಾಡಿದ ಪವನ್ ಕುಮಾರ್

ಥಿಯೇಟರ್​ನಲ್ಲಿ ಮಿಶ್ರಪ್ರತಿಕ್ರಿಯೆ ಪಡೆದ ಸಿನಿಮಾಗಳು ಒಟಿಟಿಯಲ್ಲಿ ಒಳ್ಳೆಯ ರೀತಿಯಲ್ಲಿ ವಿಮರ್ಶೆ ಪಡೆದ ಉದಾಹರಣೆ ಇದೆ. ಈ ಕಾರಣಕ್ಕೆ ‘ಧೂಮಂ’ ಒಟಿಟಿ ಪ್ರೇಕ್ಷಕರಿಂದ ಯಾವ ರೀತಿಯಲ್ಲಿ ವಿಮರ್ಶೆ ಪಡೆಯಲಿದೆ ಎಂಬ ಕುತೂಹಲ ಮೂಡಿದೆ.

‘ಧೂಮಂ’ ಸಿನಿಮಾದಲ್ಲಿ ಧೂಮಪಾನ ಕುರಿತು ಸಂದೇಶ ಇದೆ. ಈ ಸಿಗರೇಟ್ ದಂಧೆ ಹಿಂದೆ ಎಷ್ಟೆಲ್ಲಾ ಲಾಭಿಗಳು ಇರುತ್ತವೆ ಎಂಬುದನ್ನು ಈ ಚಿತ್ರದ ಮೂಲಕ ತೋರಿಸಲಾಗಿದೆ. ಫಹಾದ್ ಫಾಸಿಲ್ ಅವರ ನಟನೆ ಎಲ್ಲರಿಗೂ ಇಷ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:59 pm, Mon, 3 July 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್