ಒಟಿಟಿಗೆ ಬಂತು ‘ಫೈಟರ್’ ಸಿನಿಮಾ; ಸಿಹಿ ಸುದ್ದಿ ನೀಡಿದ ಹೃತಿಕ್ ರೋಷನ್
‘ಪಠಾಣ್’, ‘ವಾರ್’ ಸಿನಿಮಾಗಳ ಖ್ಯಾತಿಯ ನಿರ್ದೇಶಕ ಸಿದ್ದಾರ್ಥ್ ಆನಂದ್ ಅವರು ‘ಫೈಟರ್’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಹೃತಿಕ್ ರೋಷನ್, ದೀಪಿಕಾ ಪಡುಕೋಣೆ, ಅನಿಲ್ ಕಪೂರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಾರ್ಚ್ 21ರಿಂದ ನೆಟ್ಫ್ಲಿಕ್ಸ್ನಲ್ಲಿ ಈ ಸಿನಿಮಾದ ಸ್ಟ್ರೀಮಿಂಗ್ ಶುರುವಾಗಲಿದೆ ಎಂದು ಹೃತಿಕ್ ರೋಷನ್ ತಿಳಿಸಿದ್ದಾರೆ.
ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 25ರಂದು ಬಿಡುಗಡೆ ಆದ ‘ಫೈಟರ್’ ಸಿನಿಮಾವನ್ನು (Fighter Movie) ಒಟಿಟಿಯಲ್ಲಿ ನೋಡಬೇಕು ಎಂದು ಕಾದಿದ್ದವರಿಗೆ ಈಗ ಗುಡ್ ನ್ಯೂಸ್ ಸಿಕ್ಕಿದೆ. ಹೃತಿಕ್ ರೋಷನ್ (Hrithik Roshan) ಮತ್ತು ದೀಪಿಕಾ ಪಡುಕೋಣೆ ಅಭಿನಯದ ಈ ಬಾಲಿವುಡ್ ಚಿತ್ರ ಒಟಿಟಿ ಅಂಗಳಕ್ಕೆ ಕಾಲಿಟ್ಟಿದೆ. ಈ ಬಗ್ಗೆ ಹೃತಿಕ್ ರೋಷನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಫೈಟರ್’ ಸಿನಿಮಾದ ಒಟಿಟಿ ರಿಲೀಸ್ (Fighter Movie OTT Release) ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ಮಿಸ್ ಮಾಡಿಕೊಂಡವರು ಈಗ ನೆಟ್ಫ್ಲಿಕ್ಸ್ನಲ್ಲಿ ವೀಕ್ಷಿಸಬಹುದು.
‘ಫೈಟರ್’ ಸಿನಿಮಾಗೆ ಸಿದ್ದಾರ್ಥ್ ಆನಂದ್ ಅವರು ನಿರ್ದೇಶನ ಮಾಡಿದ್ದಾರೆ. ಯುದ್ಧ ವಿಮಾನಗಳ ಸಾಹಸ ದೃಶ್ಯ ಈ ಸಿನಿಮಾದಲ್ಲಿ ಹೈಲೈಟ್ ಆಗಿದೆ. ದೀಪಿಕಾ ಪಡುಕೋಣೆ, ಅನಿಲ್ ಕಪೂರ್, ಹೃತಿಕ್ ರೋಷನ್ ಅವರು ಯುದ್ಧ ವಿಮಾನಗಳ ಪೈಲಟ್ಗಳಾಗಿ ಕಾಣಿಸಿಕೊಂಡಿದ್ದಾರೆ. ಮೈನವಿರೇಳಿಸುವ ಆ್ಯಕ್ಷನ್ ಸೀನ್ಗಳಿಗೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಅದ್ದೂರಿ ಬಜೆಟ್ನಲ್ಲಿ ನಿರ್ಮಾಣವಾದ ಈ ಚಿತ್ರವು ಥಿಯೇಟರ್ನಲ್ಲಿ ಅಬ್ಬರಿಸಿದ ಬಳಿಕ ಈಗ ಒಟಿಟಿ ಅಂಗಳಕ್ಕೆ ಕಾಲಿಟ್ಟಿದೆ.
ಇದನ್ನೂ ಓದಿ: ಹೃತಿಕ್ ಕಟ್ಟುಮಸ್ತಾದ ಬಾಡಿ ಹಿಂದಿರುವ ಟ್ರೇನರ್ ಇವರೇ; ಹುಟ್ಟುಹಬ್ಬಕ್ಕೂ ಬಿಡಲಿಲ್ಲ ವರ್ಕೌಟ್
ಮಾರ್ಚ್ 21ರಿಂದ ನೆಟ್ಫ್ಲಿಕ್ಸ್ನಲ್ಲಿ ‘ಫೈಟರ್’ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ. ಬುಧವಾರ (ಮಾ.20) ಮಧ್ಯರಾತ್ರಿ 12 ಗಂಟೆ ನಂತರ ಈ ಸಿನಿಮಾದ ಸ್ಟ್ರೀಮಿಂಗ್ ಆರಂಭ ಆಗಲಿದೆ. ದೀಪಿಕಾ ಪಡುಕೋಣೆ ಅವರು ಈ ಸಿನಿಮಾದ ಕೆಲವು ದೃಶ್ಯಗಳಲ್ಲಿ ತುಂಬ ಬೋಲ್ಡ್ ಆಗಿ ನಟಿಸಿದ್ದಾರೆ. ಭಾರತದ ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ 199.45 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಒಟಿಟಿಯಲ್ಲೂ ದಾಖಲೆ ಮಟ್ಟದಲ್ಲಿ ವೀಕ್ಷಣೆ ಕಾಣುವ ನಿರೀಕ್ಷೆ ಇದೆ.
ಹೃತಿಕ್ ರೋಷನ್ ಎಕ್ಸ್ (ಟ್ವಿಟರ್) ಪೋಸ್ಟ್:
Fighter is all set for landing!#Fighter releasing tonight at 12am on Netflix!#FighterOnNetflix pic.twitter.com/UldF2UMw6R
— Hrithik Roshan (@iHrithik) March 20, 2024
‘ವಾರ್’ ಮತ್ತು ‘ಪಠಾಣ್’ ಸಿನಿಮಾಗಳಿಂದ ಜನಮನ ಗೆದ್ದ ನಿರ್ದೇಶಕ ಸಿದ್ದಾರ್ಥ್ ಆನಂದ್ ಅವರು ‘ಫೈಟರ್’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುವ ಮೂಲಕ ಮತ್ತೊಮ್ಮೆ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಮಾಡಿದ್ದಾರೆ. ಅಕ್ಷಯ್ ಒಬೆರಾಯ್, ಕರಣ್ ಸಿಂಗ್ ಗ್ರೋವರ್, ಸಂಜೀದಾ ಶೇಖ್ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಒಟಿಟಿಯಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬುದನ್ನು ತಿಳಿಯುವ ಸಮಯ ಈಗ ಬಂದಿದೆ. ನಟ ಹೃತಿಕ್ ರೋಷನ್ ಅವರು ಈಗ ‘ವಾರ್ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಸಿನಿಮಾದಲ್ಲಿ ಕೂಡ ಭರ್ಜರಿ ಆ್ಯಕ್ಷನ್ ಇರಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.