AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Filmfare OTT Awards 2021: ಫಿಲ್ಮ್​ಫೇರ್​ ಓಟಿಟಿ ಅವಾರ್ಡ್ಸ್​: ಪ್ರತಿಷ್ಠಿತ ಪ್ರಶಸ್ತಿ ಬಾಚಿಕೊಂಡು ಮಿಂಚಿದ ಸಮಂತಾ, ಪ್ರತೀಕ್​ ಗಾಂಧಿ

ಓಟಿಟಿ ಮೂಲಕ ಅನೇಕ ಸೆಲೆಬ್ರಿಟಿಗಳು ಮಿಂಚುತ್ತಿದ್ದಾರೆ. ಸ್ಟಾರ್​ ಕಲಾವಿದರೂ ಕೂಡ ಓಟಿಟಿ ಪ್ಲಾಟ್​ಫಾರ್ಮ್​ಗಳಲ್ಲಿ ಕಮಾಲ್​ ಮಾಡುತ್ತಿದ್ದಾರೆ. ಅವರಿಗೆಲ್ಲ ಫಿಲ್ಮ್​ಫೇರ್​ ಪ್ರಶಸ್ತಿ ಮೂಲಕ ಗೌರವಿಸಲಾಗಿದೆ.

Filmfare OTT Awards 2021: ಫಿಲ್ಮ್​ಫೇರ್​ ಓಟಿಟಿ ಅವಾರ್ಡ್ಸ್​: ಪ್ರತಿಷ್ಠಿತ ಪ್ರಶಸ್ತಿ ಬಾಚಿಕೊಂಡು ಮಿಂಚಿದ ಸಮಂತಾ, ಪ್ರತೀಕ್​ ಗಾಂಧಿ
ಪ್ರತೀಕ್ ಗಾಂಧಿ, ಸಮಂತಾ
TV9 Web
| Edited By: |

Updated on: Dec 10, 2021 | 9:46 AM

Share

ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಕಳೆದ ಆರು ದಶಕಗಳಿಂದಲೂ ಫಿಲ್ಮ್​ಫೇರ್​ ಪ್ರಶಸ್ತಿ ನೀಡಲಾಗುತ್ತಿದೆ. ಕಾಲ ಬದಲಾದಂತೆ ಈ ಪ್ರಶಸ್ತಿಯ ವ್ಯಾಪ್ತಿ ಕೂಡ ಹಿರಿದಾಗುತ್ತಿದೆ. ಈಗ ಓಟಿಟಿ ಜಮಾನಾ. ಚಿತ್ರಮಂದಿರಗಳಿಗೆ ಪರ್ಯಾಯವಾಗಿ ಓಟಿಟಿ ಪ್ಲಾಟ್​ಫಾರ್ಮ್​ಗಳಲ್ಲಿ ಅನೇಕ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ವೆಬ್​ ಸಿರೀಸ್​ಗಳ ಹವಾ ಕೂಡ ಹೆಚ್ಚಾಗಿದೆ. ಹಾಗಾಗಿ ಫಿಲ್ಮ್​ಫೇರ್​ ವತಿಯಿಂದ ವೆಬ್​ ಸರಣಿಯ ಪ್ರತಿಭೆಗಳನ್ನೂ ಗೌರವಿಸುವ ಕೆಲಸ ಆಗುತ್ತಿದೆ. ‘ಫಿಲ್ಮ್​ಫೇರ್​ ಓಟಿಟಿ ಅವಾರ್ಡ್ಸ್​’ ನೀಡಲಾಗುತ್ತಿದೆ. ಈ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿತ್ತು, ಪ್ರತೀಕ್​ ಗಾಂಧಿ ನಟನೆಯ ‘ಸ್ಕ್ಯಾಮ್​ 1992’ ಮತ್ತು ಸಮಂತಾ ನಟನೆಯ ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ಗಳು ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡಿವೆ.  

ಈ ಬಾರಿಯ ಫಿಲ್ಮ್​ಫೇರ್​ ಓಟಿಟಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಸ್ಕ್ಯಾಮ್​ 1992’ ಹಲವು ಪ್ರಶಸ್ತಿಗಳನ್ನು ಪಡೆದಿದೆ. ಅತ್ಯುತ್ತಮ ಒರಿಜಿನಲ್​ ಸೌಂಡ್​ ಟ್ರ್ಯಾಕ್​, ಅತ್ಯುತ್ತಮ ವಸ್ತ್ರ ವಿನ್ಯಾಸ, ಅತ್ಯುತ್ತಮ ಪ್ರೊಡಕ್ಷನ್​ ಡಿಸೈನ್​, ಅತ್ಯುತ್ತಮ ಹಿನ್ನೆಲೆ ಸಂಗೀತ, ಅತ್ಯುತ್ತಮ ಸಂಕಲನ, ಅತ್ಯುತ್ತಮ ವಿಎಫ್​ಎಕ್ಸ್​, ಅತ್ಯುತ್ತಮ ಛಾಯಾಗ್ರಹಣ, ಅತ್ಯುತ್ತಮ ನಿರ್ದೇಶನ (ಹನ್ಸಲ್​ ಮೆಹ್ತಾ), ಅತ್ಯುತ್ತಮ ನಟ (ಪ್ರತೀಕ್​ ಗಾಂಧಿ), ಅತ್ಯುತ್ತಮ ಸಂಭಾಷಣೆ ಮುಂತಾದ ವಿಭಾಗಗಳಲ್ಲಿ ಪ್ರಶಸ್ತಿ ಪಡೆದುಕೊಂಡು ‘ಸ್ಕ್ಯಾಮ್​ 1992’ ವೆಬ್​ ಸಿರೀಸ್​ ಮಿಂಚಿದೆ.

ಮನೋಜ್​ ಬಾಜಪೇಯ್​, ಪ್ರಿಯಾಮಣಿ, ಸಮಂತಾ ನಟನೆಯ ‘ದಿ ಫ್ಯಾಮಿಲಿ ಮ್ಯಾನ್​ 2’ ಕೂಡ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಅತ್ಯುತ್ತಮ ಮೂಲ ಕಥೆ, ಅತ್ಯುತ್ತಮ ಚಿತ್ರಕಥೆ, ಅತ್ತುತ್ತಮ ನಿರ್ದೇಶನ-ಕ್ರಿಟಿಕ್ಸ್​ (ಸುಪರ್ಣ್​ ವರ್ಮಾ), ಅತ್ಯುತ್ತಮ ನಟಿ (ಸಮಂತಾ), ಅತ್ಯುತ್ತಮ ವೆಬ್​ ಸಿರೀಸ್​ ಪ್ರಶಸ್ತಿಗಳನ್ನು ‘ದಿ ಫ್ಯಾಮಿಲಿ ಮ್ಯಾನ್​ 2’ ಬಾಚಿಕೊಂಡಿದೆ.

ಓಟಿಟಿ ಮೂಲಕ ಅನೇಕ ಸೆಲೆಬ್ರಿಟಿಗಳು ಮಿಂಚುತ್ತಿದ್ದಾರೆ. ಸ್ಟಾರ್​ ಕಲಾವಿದರೂ ಕೂಡ ಓಟಿಟಿ ಪ್ಲಾಟ್​ಫಾರ್ಮ್​ಗಳಲ್ಲಿ ಕಮಾಲ್​ ಮಾಡುತ್ತಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್ 2’ ವೆಬ್​ ಸರಣಿಯಲ್ಲಿ ನಟಿಸಿದ ಬಳಿಕ ಸಮಂತಾ ಅವರ ಚಾರ್ಮ್ ಹೆಚ್ಚಿತು. ಅವರ ಬೇಡಿಕೆ ಕೂಡ ದುಪ್ಪಟ್ಟಾಯಿತು. ಅಮೇಜಾನ್​ ಪ್ರೈಂ ವಿಡಿಯೋ ಮೂಲಕ ಬಿಡುಗಡೆಯಾದ ಆ ವೆಬ್​ ಸರಣಿಯಲ್ಲಿ ಸಖತ್​ ಬೋಲ್ಡ್​ ಆದಂತಹ ಪಾತ್ರವನ್ನು ಸಮಂತಾ ಮಾಡಿದರು. ಅದಕ್ಕೆ ಕೆಲವರಿಂದ ವಿರೋಧ ಕೂಡ ವ್ಯಕ್ತವಾಗಿತ್ತು. ಈಗ ಅದೇ ಪಾತ್ರಕ್ಕಾಗಿ ಸಮಂತಾಗೆ ಫಿಲ್ಮ್​ಫೇರ್​ ಪ್ರಶಸ್ತಿ ಸಿಕ್ಕಿರುವುದು ಅವರ ಅಭಿಮಾನಿಗಳ ಸಂತಸಕ್ಕೆ ಕಾರಣ ಆಗಿದೆ.

ಇದನ್ನೂ ಓದಿ:

ಸಮಂತಾ ವಾಟ್ಸಾಪ್​ ಸಂದೇಶದ ಸ್ಕ್ರೀನ್​ಶಾಟ್​ ಬಹಿರಂಗ; ಅರೆಬರೆ ಮುಚ್ಚಿಟ್ಟು ನಟಿ ಹೇಳಿದ್ದೇನು?

ಓಟಿಟಿಯಲ್ಲಿ ಡಿಸೆಂಬರ್ ಧಮಾಕಾ; ಮನರಂಜನೆ ನೀಡಲು ಬರುತ್ತಿವೆ ಬಹುನಿರೀಕ್ಷಿತ ಸಿನಿಮಾ, ವೆಬ್​ ಸಿರೀಸ್

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು